ಮುಧೋಳದಲ್ಲಿ ನಕಲಿ ವೈದ್ಯನ ಆಸ್ಪತ್ರೆ ಜಪ್ತಿ

| Published : Jul 02 2025, 11:50 PM IST

ಸಾರಾಂಶ

ಮುಧೋಳ ನಗರಸಭೆ ಕಚೇರಿ ಸಮೀಪದ ಕಾನೂನುಬಾಹಿರವಾಗಿ ವೈದ್ಯಕೀಯ ಸೇವೆ ನೀಡುತ್ತಿದ್ದ ಖಾಸಗಿ ಆಸ್ಪತ್ರೆ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಆಸ್ಪತ್ರೆಯನ್ನು ಜಪ್ತಿ ಮಾಡಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ ಮಲಘಾಣ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮುಧೋಳ

ಇಲ್ಲಿನ ನಗರಸಭೆ ಕಚೇರಿ ಸಮೀಪದ ಕಾನೂನುಬಾಹಿರವಾಗಿ ವೈದ್ಯಕೀಯ ಸೇವೆ ನೀಡುತ್ತಿದ್ದ ಖಾಸಗಿ ಆಸ್ಪತ್ರೆ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಆಸ್ಪತ್ರೆಯನ್ನು ಜಪ್ತಿ ಮಾಡಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ ಮಲಘಾಣ ತಿಳಿಸಿದ್ದಾರೆ.ಬಿಹಾರ ಮೂಲದ ನಕಲಿ ವೈದ್ಯ ಸುಜೀತ್ ಸಮಾಜಪತಿ (45) ಎಂಬುವವರು ಅನುಮತಿ ಇಲ್ಲದೆ ಖಾಸಗಿ ಆಸ್ಪತ್ರೆ ನಡೆಸುತ್ತಿದ್ದರು. ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ ಮಲಘಾಣ ಅವರ ನೇತೃತ್ವದ ತಂಡ ಆಸ್ಪತ್ರೆಗೆ ಭೇಟಿ ನೀಡಿದಾಗ ಸುಜೀತ್ ಸಮಾಜಪತಿ ಎಂಬುವವರು ವೈದ್ಯಕೀಯ ಪ್ರಮಾಣಪತ್ರ ಅಥವಾ ವಿದ್ಯಾರ್ಹತೆ ಇಲ್ಲದೆ ಕಾನೂನು ಬಾಹಿರವಾಗಿ ಚಿಕಿತ್ಸೆ ನೀಡುತ್ತಿರುವುದು ಬೆಳಕಿಗೆ ಬಂದಿದೆ. ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ (ಕೆಪಿಎಂಇ) 2007ರ ಅಡಿಯಲ್ಲಿ ಆಸ್ಪತ್ರೆಯನ್ನು ಜಪ್ತಿ ಮಾಡಿದ್ದು, ಮುಂದಿನ ಕ್ರಮಕ್ಕಾಗಿ ಸಕ್ಷಮ ಪ್ರಾಧಿಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.