ಸಾರಾಂಶ
ಸಂವಿಧಾನ ಬದಲಾವಣೆ ವಿಷಯವನ್ನು ಚುನಾವಣಾ ಅಸ್ತ್ರವಾಗಿ ಬಳಸಿಕೊಂಡು ಕಾಂಗ್ರೆಸ್ ರಾಜಕೀಯವಾಗಿ ತಮ್ಮ ಬೇಳೆ ಬೇಯಿಸಿಕೊಳ್ಳಲು ಮುಂದಾಗಿರುವುದು ಖಂಡನೀಯ. ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ದೇಶದಲ್ಲಿ ಯಾರಿಂದಲೂ ಬದಲಾವಣೆ ಮಾಡಲು ಸಾಧ್ಯವೇ ಇಲ್ಲ ಈ ಬಗ್ಗೆ ಪ್ರಧಾನಿ ಮೋದಿ ಅವರೇ ಸ್ಪಷ್ಟನೆ ನೀಡಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಡ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಿಸುವುದಾಗಿ ಕಾಂಗ್ರೆಸ್ ಪಕ್ಷದವರು ಸುಳ್ಳು ಪ್ರಚಾರದ ಹಿಂದೆ ಶೋಷಿತರನ್ನು ಒಡೆದಾಳುವ ಮತ ರಾಜಕಾರಣದ ಹುನ್ನಾರ ಅಡಗಿದೆ. ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ದೂರು ನೀಡಿದೆ.ಸಂವಿಧಾನ ಬದಲಾವಣೆ ವಿಷಯವನ್ನು ಚುನಾವಣಾ ಅಸ್ತ್ರವಾಗಿ ಬಳಸಿಕೊಂಡು ಕಾಂಗ್ರೆಸ್ ರಾಜಕೀಯವಾಗಿ ತಮ್ಮ ಬೇಳೆ ಬೇಯಿಸಿಕೊಳ್ಳಲು ಮುಂದಾಗಿರುವುದು ಖಂಡನೀಯ. ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ದೇಶದಲ್ಲಿ ಯಾರಿಂದಲೂ ಬದಲಾವಣೆ ಮಾಡಲು ಸಾಧ್ಯವೇ ಇಲ್ಲ ಈ ಬಗ್ಗೆ ಪ್ರಧಾನಿ ಮೋದಿ ಅವರೇ ಸ್ಪಷ್ಟನೆ ನೀಡಿದ್ದಾರೆ ಎಂದರು.
ಕಾಂಗ್ರೆಸ್ ಉರಿಯುತ್ತಿರುವ ಮನೆ ದಲಿತರು ಎಂದೂ ಕೂಡ ದಲಿತರು ಆ ಮನೆಯ ಬಳಿ ಹೋಗಬೇಡಿ ಎಂದೂ ಬಾಬಾಸಾಹೇಬರು ದಲಿತರಿಗೆ ಕರೆ ಕೊಟ್ಟಿದ್ದರು. ಕಾಂಗ್ರೆಸ್ ಪಕ್ಷದ ಚುನಾವಣಾ ಪಚಾರದ ವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುತ್ತಾರೆ ಎಂದು ಅಪಪ್ರಚಾರ ಮಾಡುವ ಮೂಲಕ ಜನರಲ್ಲಿ ಭಯವನ್ನು ಬಿತ್ತುತ್ತಿದೆ ಎಂದು ದೂರಿದರು.ಈ ಬಗ್ಗೆ ಜಿಲ್ಲೆಯಲ್ಲಿ ಕೆಲ ಸ್ವಘೋಷಿತ ದಲಿತ ಸಂಘಟನೆಗಳು ಎಂದು ಕರಪತ್ರ ಹಂಚುತ್ತಿದ್ದು, ಸಾರ್ವಜನಿಕರಲ್ಲಿ ಅಪ ಪ್ರಚಾರದ ಮೂಲಕ ಗೊಂದಲ ಉಂಟುಮಾಡುತ್ತಿವೆ. ಇದು ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ತಕ್ಷಣ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಈ ವೇಳೆ ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ. ಮಂಜುನಾಥ್, ಮುಖಂಡರಾದ ನಾಗಾನಂದ್, ಜ್ಯೋತಿ, ಮಾದರಾಜ ಅರಸ್, ವಿವೇಕ್ ಇದ್ದರು.