ಗ್ರಾ.ಪಂ.ಗೆ ಆಯ್ಕೆಗೊಂಡ ಅಧ್ಯಕ್ಷ, ಉಪಾಧ್ಯಕ್ಷರಿಗೆ ಸನ್ಮಾನ

| Published : Feb 06 2024, 01:33 AM IST

ಸಾರಾಂಶ

ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಗೋಣಿಕೊಪ್ಪಲು ಮತ್ತು ಪೊನ್ನಂಪೇಟೆ ಗ್ರಾಮ ಪಂಚಾಯಿತಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆದಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ದ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಗೊಂಡ ಹಿನ್ನೆಲೆಯಲ್ಲಿ ವಿರಾಜಪೇಟೆ ಶಾಸಕರ ನಿವಾಸದ ಕಚೇರಿಯಲ್ಲಿ ಅಭ್ಯರ್ಥಿಗಳನ್ನು ಶಾಸಕ ಎ.ಎಸ್.ಪೊನ್ನಣ್ಣ ಸನ್ಮಾನಿಸಿದರು.

ಕನ್ನಡಪ್ರಭವಾರ್ತೆವಿರಾಜಪೇಟೆ

ಇತ್ತೀಚೆಗೆ ಗ್ರಾಮ ಪಂಚಾಯಿತಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆದು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ದ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಗೊಂಡ ಹಿನ್ನೆಲೆಯಲ್ಲಿ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರ ನಿವಾಸದ ಕಚೇರಿಯಲ್ಲಿ ಅಭ್ಯರ್ಥಿಗಳನ್ನು ಸನ್ಮಾಸಿದರು.

ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಗೋಣಿಕೊಪ್ಪಲು ಮತ್ತು ಪೊನ್ನಂಪೇಟೆ ಗ್ರಾಮ ಪಂಚಾಯಿತಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆದು. ಕಾಂಗ್ರೆಸ್ ಪಕ್ಷದ ಬೆಂಬೆಲಿತ ಅಭ್ಯರ್ಥಿಗಳು ಚುನಾವಣೆಯಲ್ಲಿ ಜಯಭೇರಿ ಬಾರಿಸಿದರು. ಅಭ್ಯರ್ಥಿಗಳಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ, ಅವರು ತಮ್ಮ ನಿವಾಸದಲ್ಲಿ ನೂತನವಾಗಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಸನ್ಮಾನಿಸಿದರು. ನಿವಾಸದ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಗೋಣಿಕೊಪ್ಪಲು ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಅಯ್ಕೆಗೊಂಡ ಕುಲ್ಲಚಂಡ ಪ್ರಮೋದ್ ಗಣಪತಿ ಮತ್ತು ಉಪಾಧ್ಯಕ್ಷರಾಗಿ ಅಯ್ಕೆಗೊಂಡ ಎಂ. ಮಂಜುಳ ಹಾಗೂ ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಣ್ಣೀರ ಹರೀಶ್, ಮತ್ತು ಉಪಾಧ್ಯಕ್ಷರಾದ ರಶೀದ್‌ ಅವರನ್ನು ಸನ್ಮಾನಿಸಿದರು.ಸನ್ಮಾನಿಸಿ ಬಳಿಕ ಮಾತನಾಡಿದ ಶಾಸಕರು, ಇದು ಸಂಘಟನೆಗೆ ದೊರೆತ ಜಯವಾಗಿದ್ದು. ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರ ಶಕ್ತಿ ಪ್ರದರ್ಶನವಾಗಿದೆ. ಹಲವು ಭಾಗದಲ್ಲಿ ಕಾಂಗ್ರೆಸ್ ಪಕ್ಷವು ಇಂದು ಆಡಳಿತದ ಚುಕ್ಕಾಣಿ ಹಿಡಿದಿದೆ. ಆಣೆ ದೇಗುಲ ದರ್ಶನ ಮಾಡಿಕೊಂಡು ಹೋದವರ ಬೆನ್ನಿಗೆ ಚೂರಿ ಇರಿದಂತಾಗಿದೆ. ಸ್ವಪಕ್ಷದ ಜನಪತ್ರಿನಿಧಿಗಳೆ ವಿರುದ್ಧ ಮತ ಚಲಾವಣೆ ಮಾಡಿರುವುದು ದುರಂತ ಎಂದು ಹೇಳಿದ ಶಾಸಕರು. ಗ್ರಾಮ ಪಂಚಾಯಿತಿಗಳು ಒಂದು ಸರ್ಕಾರವಿದ್ದಂತೆ. ಸರ್ಕಾರದ ಪ್ರತಿನಿಧಿಗಳಂತೆ ಸಾರ್ವಜನಿಕರ ಸೇವೆಗೆ ಮುಂದಾಗಬೇಕು. ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಯತ್ತಾ ಸಂಘಟಿತ ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು ಅಣಿಯಾಗಬೇಕು. ಪಕ್ಷದ ಸಿದ್ದಾಂತ ಮತ್ತು ಶಿಸ್ತಿನಿಂದ ಮುಂಬರುವ ಲೋಕಸಭಾ ಚುನಾವಣೆಯನ್ನು ಎದುರಿಸುವಂತಾಗಬೇಕು. ಇದಕ್ಕೆ ಪಕ್ಷದ ಎಲ್ಲಾ ಕಾರ್ಯಕರ್ತರು ಕೈಜೋಡಿಸುವಂತೆ ಕರೆನೀಡಿದರು.ಕಾರ್ಯಕ್ರಮ ಉದ್ದೇಶಿಸಿ ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಅದ್ಯಕ್ಷರಾದ ಪ್ರಮೋದ್ ಗಣಪತಿ, ಉಪಾಧ್ಯಕ್ಷರಾದ ಎಂ.ಮಂಜುಳ, ಹಾಗೂ ಪೊನ್ನಂಪೇಟೆ ಗ್ರಾಮ ಪಂಚಾಯಿತಿಯ ಉಪಧ್ಯಕ್ಷರಾದ ರಶೀದ್‌ ಅವರು ಮಾತನಾಡಿದರು. ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ಅದ್ಯಕ್ಷರಾದ ಕೊಲ್ಲಿರ ಬೋಪಣ್ಣ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದಿರೀರ ನವೀನ್, ಪಕ್ಷದ ಮುಖಂಡರಾದ ಶಾಜಿ ಅಚ್ಚುತ್ತನ್, ಧ್ಯಾನ್ ಬೋಪಣ್ಣ ಹಾಗೂ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಗೋಣಿಕೊಪ್ಪಲು ಮತ್ತು ಪೊನ್ನಂಪೇಟೆ ಗ್ರಾಮ ಪಂಚಾಯಿತಿಯ ಚುನಾಯಿತ ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು ಸರಳ ಸಮಾರಂಭದಲ್ಲಿ ಹಾಜರಿದ್ದರು.