ಅಂಗಾಂಗ ದಾನ ಮಾಡಿದ ಕುಟುಂಬದವರಿಗೆ ಸನ್ಮಾನ

| Published : Aug 19 2025, 01:00 AM IST

ಸಾರಾಂಶ

ರಾಮನಗರ : ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಅಂಗಾಂಗ ದಾನ ಮಾಡಿದ್ದ ಕುಟುಂಬದವರನ್ನು ಗುರುತಿಸಿ ಮೆಚ್ಚುಗೆಯ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

ರಾಮನಗರ : ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಅಂಗಾಂಗ ದಾನ ಮಾಡಿದ್ದ ಕುಟುಂಬದವರನ್ನು ಗುರುತಿಸಿ ಮೆಚ್ಚುಗೆಯ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

ಅಂಗಾಂಗ ದಾನವು ಸಾವಿನ ನಂತರವೂ ಇತರರ ಬದುಕಿಗೆ ಕೊಡುಗೆ ನೀಡುವ ಒಂದು ಮಹತ್ವದ ಕಾರ್ಯವಾಗಿದೆ. ಅಪಘಾತ ಮತ್ತು ಇತರ ಕಾರಣಗಳಿಂದ ಮೆದುಳು ನಿಷ್ಕ್ರೀಯಗೊಂಡ ನಂತರ, ಹಂತ ಹಂತದ ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ರೋಗಿಗಳ ಜೀವ ಉಳಿಸುವ ಸಲುವಾಗಿ ಅಂಗಾಂಗಗಳನ್ನು ದಾನಮಾಡಬಹುದಾಗಿದೆ.

ಈ ವರ್ಷದ ಜನವರಿಯಿಂದ 5 ಕುಟುಂಬಗಳು ತಮ್ಮ ಪ್ರೀತಿಪಾತ್ರರ ಅಂಗಾಂಗಳನ್ನು ದಾನ ಮಾಡಿದ್ದರು. ಅವರ ಕುಟುಂಬದ ಸದಸ್ಯರಿಗೆ ಜಿಲ್ಲಾಡಳಿತ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ವತಿಯಿಂದ ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗ ರೆಡ್ಡಿ, ಸಂಸದ ಡಾ. ಸಿ.ಎನ್. ಮಂಜುನಾಥ್, ಶಾಸಕ ಇಕ್ಬಾಲ್ ಹುಸೇನ್, ಜಿಲ್ಲಾಧಿಕಾರಿ ಯಶವಂತ್ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನ್ಮೋಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ, ಅಪರ ಜಿಲ್ಲಾಧಿಕಾರಿ ಚಂದ್ರಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಿರಂಜನ್ ಮತ್ತಿತರರು ಹಾಜರಿದ್ದರು.18ಕೆಆರ್ ಎಂಎನ್ 4.ಜೆಪಿಜಿ

ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಅಂಗಾಂಗ ದಾನ ಮಾಡಿದ್ದ ಕುಟುಂಬದವರನ್ನು ಗುರುತಿಸಿ ಮೆಚ್ಚುಗೆಯ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.