ತಮ್ಮ ಪ್ರೀತಿಗೆ ಪೋಷಕರ ವಿರೋಧ ಕಾರಣಕ್ಕೆ ಬೇಸತ್ತು ಆತ್ಮಹತ್ಯೆ ಯತ್ನಿಸಿದ್ದ ಪ್ರೇಮಿಗಳನ್ನು ಕೊತ್ತನೂರು ಠಾಣೆ ಪೊಲೀಸರು ರಕ್ಷಿಸಿದ್ದಾರೆ.

-ನಗರದ ಕೊತ್ತನೂರು ಪೊಲೀಸರಿಂದ ರಕ್ಷಣೆ

-ಕಾಲೇಜು ಮುಗಿದ ಕ್ರಿಮಿನಾಶಕ ಸೇವನೆ

ಕನ್ನಡಪ್ರಭ ವಾರ್ತೆ ಬೆಂಗಳೂರು

ತಮ್ಮ ಪ್ರೀತಿಗೆ ಪೋಷಕರ ವಿರೋಧ ಕಾರಣಕ್ಕೆ ಬೇಸತ್ತು ಆತ್ಮಹತ್ಯೆ ಯತ್ನಿಸಿದ್ದ ಪ್ರೇಮಿಗಳನ್ನು ಕೊತ್ತನೂರು ಠಾಣೆ ಪೊಲೀಸರು ರಕ್ಷಿಸಿದ್ದಾರೆ.

ಕೊತ್ತನೂರು ಸಮೀಪದ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾದ ಅವರು ಬುಧವಾರ ಸಂಜೆ ಕಾಲೇಜು ಮುಗಿದ ಬಳಿಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದಕ್ಕೂ ಮುನ್ನ ತಮ್ಮ ಪೋಷಕರಿಗೆ ಕರೆ ಮಾಡಿ ಅವರು ವಿಷಯ ತಿಳಿಸಿದ್ದರು. ಕೂಡಲೇ ಆತಂಕಗೊಂಡ ವಿದ್ಯಾರ್ಥಿಗಳ ಕುಟುಂಬದವರು, ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮಾಹಿತಿ ಕೊಟ್ಟಿದ್ದಾರೆ. ತಕ್ಷಣವೇ ಮಾಹಿತಿ ಪಡೆದು ಕಾರ್ಯಪ್ರವೃತ್ತರಾದ ಕೊತ್ತನೂರು ಠಾಣೆ ಹೊಯ್ಸಳ ಸಿಬ್ಬಂದಿ, ಕಾಲೇಜು ಆವರಣದಲ್ಲಿ ವಿಷ ಸೇವಿಸಿದ್ದ ಪ್ರೇಮಿಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಹಲವು ದಿನಗಳಿಂದ ಈ ಜೋಡಿ ಪ್ರೀತಿಯಲ್ಲಿದ್ದು, ಈ ಬಗ್ಗೆ ತಿಳಿದು ಅವರ ಹೆತ್ತವರು ಆಕ್ಷೇಪಿಸಿದ್ದರು. ಇದರಿಂದ ಬೇಸರಗೊಂಡ ಪ್ರೇಮಿಗಳು, ಕಾಲೇಜು ಮುಗಿದ ಬಳಿಕ ಒಟ್ಟಿಗೆ ಆತ್ಮಹತ್ಯೆ ಮಾಡಿಕೊಳ್ಳಲು ತೀರ್ಮಾನಿಸಿ ಕ್ರಿಮಿನಾಶಕ ಸೇವಿಸಿ ಅವರು ಆತ್ಮಹತ್ಯೆಗೆ ಮುಂದಾಗಿದ್ದರು ಎಂದು ತಿಳಿದು ಬಂದಿದೆ.