ಖ್ಯಾತ ನಟ ಪ್ರಕಾಶ್ ಹೆಗ್ಗೋಡು ವಿಧಿವಶ!

| Published : Mar 31 2024, 02:11 AM IST / Updated: Apr 05 2024, 05:21 AM IST

DEATH

ಸಾರಾಂಶ

ರಂಗಭೂಮಿ ಮತ್ತು ಹಲವು ಸಿನಿಮಾಗಳಲ್ಲಿ ನಟಿಸಿದ ಪ್ರಕಾಶ್ ಹೆಗ್ಗೋಡು (58) ಮಾ.30ರ ತಡರಾತ್ರಿ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಟ ಇದೀಗ ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದ್ದಾರೆ.

ಬೆಂಗಳೂರು: ರಂಗಭೂಮಿ ಮತ್ತು ಹಲವು ಸಿನಿಮಾಗಳಲ್ಲಿ ನಟಿಸಿದ ಪ್ರಕಾಶ್ ಹೆಗ್ಗೋಡು (58) ಮಾ.30ರ ತಡರಾತ್ರಿ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಟ ಇದೀಗ ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದ್ದಾರೆ. ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕ್ಯಾನ್ಸರ್‌ ಕಾಯಿಲೆಗಾಗಿ ಪ್ರಕಾಶ್ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಪ್ರಕಾಶ್ ಹೆಗ್ಗೋಡು ಅವರು ಶಿವಮೊಗ್ಗ ಜಿಲ್ಲೆಯ, ಸಾಗರ ತಾಲೂಕಿನ ಪುರಪ್ಪೆಮನೆಯವರಾಗಿದ್ದಾರೆ. ಮಾ. 31ರಂದು ಅವರ ಸ್ವಗೃಹವಾದ ಪುರಪ್ಪೆಮನೆಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ರಾಜಾಹಿಲಿ, ಸಂತ, ಭಾಗ್ಯದ ಬಳೆಗಾರ, ಕಲ್ಪನಾ-2, ವೀರು, ಕಲಾಸಿಪಾಳ್ಯ ಸೇರಿದಂತೆ ಕನ್ನಡದ ಹಲವು ಸಿನಿಮಾಗಳಲ್ಲಿ ಪ್ರಕಾಶ್ ಹೆಗ್ಗೋಡು ಅಭಿನಯಿಸಿ ಸೈ ಎನಿಸಿಕೊಂಡಿದ್ದರು. ಸಾಮಾಜಿಕ ಕೆಲಸಗಳಲ್ಲೂ ಮುಂದಿದ್ದ ಪ್ರಕಾಶ್ ಅವರ ಸಾವಿನ ಸುದ್ದಿ ಕೇಳಿ ಆಪ್ತರು, ಸಿನಿಮಾ ನಟ-ನಟಿಯರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.