ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನಗರ ಪ್ರದೇಶಕ್ಕೆ ತೆರಳಿ ದುಬಾರಿ ಹಣ ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗದ ಪರಿಸ್ಥಿತಿ ಅರಿತು ಹಲವು ಹೊಸ ಕೋರ್ಸ್‌ಗಳನ್ನು ಆರಂಭಿಸಿ ಶಿಕ್ಷಣ ನೀಡುತಿದ್ದಾರೆ. ಮುಂದಿನ ವರ್ಷದಲ್ಲಿ ಮೆಡಿಕಲ್ ಕಾಲೇಜು ಆರಂಭಿಸಲು ತಯಾರಿ ನಡೆಸಿದ್ದಾರೆ.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಭಾರತೀ ವಿದ್ಯಾ ಸಂಸ್ಥೆ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅವರ 61ನೇ ಹುಟ್ಟುಹಬ್ಬದ ಅಂಗವಾಗಿ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.

ಸಮೀಪದ ಕಾರ್ಕಹಳ್ಳಿ ಶ್ರೀಬಸವೇಶ್ವರ ದೇವಾಲಯದಲ್ಲಿ ಯುವ ಮುಖಂಡ ಕಾರ್ಕಹಳ್ಳಿ ಸ್ವರೂಪ್ ಬಸವೇಗೌಡ ಆಯೋಜಿಸಿದ್ದ ಪೂಜಾ ಕಾರ್ಯಕ್ರಮದಲ್ಲಿ ಸೇರಿದಂತೆ ಗ್ರಾಪಂ ಸದಸ್ಯರು ಹಾಗೂ ಮಧು ಜಿ.ಮಾದೇಗೌಡ ಅಭಿಮಾನಿಗಳು ಭಾಗವಹಿಸಿದ್ದರು.

ಈ ವೇಳೆ ತಾಪಂ ಮಾಜಿ ಸದಸ್ಯ ಬಿ.ಗಿರೀಶ್ ಮಾತನಾಡಿ, ಮಾಜಿ ಸಂಸದ ಜಿ.ಮಾದೇಗೌಡರು ಹಳ್ಳಿಗಾಡಿನ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಕೆ.ಎಂ.ದೊಡ್ಡಿಯ ಕುಗ್ರಾಮದಲ್ಲಿ ಶಿಕ್ಷಣ ಸಂಸ್ಥೆ ತೆರೆದು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ್ದು, ಅವರ ಹಾದಿಯಲ್ಲೆ ಮಧು ಜಿ.ಮಾದೇಗೌಡ ಅವರು ಸಾಗುತ್ತ ಸಾವಿರಾರು ಜನರಿಗೆ ಉದ್ಯೋಗ ಸೃಷ್ಟಿಸಿದ್ದಾರೆ ಎಂದರು.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನಗರ ಪ್ರದೇಶಕ್ಕೆ ತೆರಳಿ ದುಬಾರಿ ಹಣ ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗದ ಪರಿಸ್ಥಿತಿ ಅರಿತು ಹಲವು ಹೊಸ ಕೋರ್ಸ್‌ಗಳನ್ನು ಆರಂಭಿಸಿ ಶಿಕ್ಷಣ ನೀಡುತಿದ್ದಾರೆ. ಮುಂದಿನ ವರ್ಷದಲ್ಲಿ ಮೆಡಿಕಲ್ ಕಾಲೇಜು ಆರಂಭಿಸಲು ತಯಾರಿ ನಡೆಸಿದ್ದಾರೆ ಎಂದರು.

ಈ ವೇಳೆ ಭಾರತೀ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಜಿ.ಕೃಷ್ಣ, ಶಶಿಧರ್, ರಾಜು, ಸ್ವಾಮಿ, ಮುಖಂಡರಾದ ಯಜಮಾನ್ ತಮ್ಮಣ್ಣ, ಮಧು, ಮಹೇಶ್, ಸುನೀಲ್ ಸೇರಿದಂತೆ ಮತ್ತಿತರಿದ್ದರು.

ಬಳಿಕ ಚಾಂಷುಗರ್ಸ್ ಕಾರ್ಖಾನೆ ಆವರಣದಲ್ಲಿರುವ ಶ್ರೀಚಾಮುಂಡೇಶ್ವರಿ ದೇವಾಲಯದಲ್ಲಿ ಜಿ.ಮಾದೇಗೌಡ ತಾಂತ್ರಿಕ ಮಹಾ ವಿದ್ಯಾಲಯದ ಸಿಬ್ಬಂದಿ ಪ್ರಾಂಶುಪಾಲ ಡಾ.ಬಿ.ಆರ್. ಚಂದನ್ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಕಾರ್ಖಾನೆ ಉಪಾಧ್ಯಕ್ಷ ಮಣಿ, ಡಿಜಿಎಂ ರವಿ, ಸೊಸೈಟಿ ಮಾಜಿ ಅಧ್ಯಕ್ಷ ಅಣ್ಣೂರು ಸಿದ್ದಪ್ಪ, ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಸ್. ಮಹದೇವಸ್ವಾಮಿ, ಗ್ರಂಥಪಾಲಕ ಎ.ಎಸ್. ಸಂಜೀವ್, ಡಾ.ಸುಮಿತಾ, ಅಕೌಟೆಂಟ್ ಮಂಜುನಾಥ್, ಅಣ್ಣೂರು ರವಿ ಕೃಷ್ಣಪ್ಪ, ಗ್ರಾ.ಪಂ.ಮಾಜಿ ಅಧ್ಯಕ್ಷರಾದ ಎಂ.ಪಿ. ರವಿಚಂದ್ರ, ಸದಸ್ಯರಾದ ಕೆ.ಟಿ. ಶ್ರೀನಿವಾಸ್, ಕೆ.ವಿಶ್ರೀನಿವಾಸ್, ಪುಟ್ಟರಾಮು, ಮೆಳ್ಳಹಳ್ಳಿ ವಿನಯ್ ಹೊನ್ನೇಗೌಡ, ಮಿಥುನ್, ಶೆಟ್ಟಹಳ್ಳಿ ನಾಗರಾಜು, ಕಾಳಯ್ಯ, ಕೆಂಪಣ್ಣ ಸೇರಿದಂತೆ ಮತ್ತಿತರಿದ್ದರು.

ನಂತರ ಶ್ರೀವೆಂಕಟೇಶ್ವರ ದೇವಾಲದಲ್ಲಿ ಭಾರತಿ ಪದವಿ ಪೂರ್ವ ಕಾಲೇಜಿನ ಸಿಬ್ಬಂದಿ ಆಡಳಿತಾಧಿಕಾರಿ ಜವರೇಗೌಡ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ದೇವಾಲಯ ಸೇವಾ ಸಮಿತಿ ಅಧ್ಯಕ್ಷ ಪೂಜೂರಿ ವೆಂಕಟೇಗೌಡ, ಕಾರ್ಯಾಧ್ಯಕ್ಷ ವೆಂಕಟೇಶ್, ಕಾರ್ಯದರ್ಶಿ ನಾಗಪ್ಪ, ವೆಂಕಟೇಶ್ ಸೇರಿದಂತೆ ಮತ್ತಿತರಿದ್ದರು.

ಚಿಕ್ಕರಸಿನಕೆರೆ ಶ್ರೀಕಾಲಭೈರವೇಶ್ವರ ದೇವಾಲದಲ್ಲಿ ಭಾರತೀ ಹೆಲ್ತ್‌ಸೈನ್ಸ್‌ಸ್ ಸಿಬ್ಬಂದಿ ತಾಪಂ ಮಾಜಿ ಸದಸ್ಯ ಭರತೇಶ್ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೇ ಭಾರತೀ ಹೆಲ್ತ್ ಸೈನ್ಸ್‌ಸ್ ನಿರ್ದೇಶಕ ಡಾ.ತಮಿಜ್‌ಮಣಿ, ಡಾ.ಬಾಲಸುಬ್ರಮಣ್ಯಂ, ಯಜಮಾನ್ ಶಿವಲಿಂಗೇಗೌಡ, ಜೋಗಪ್ಪ ಸೇರಿದಂತೆ ಮತ್ತಿತರಿದ್ದರು.

ಮಾಜಿ ಸಂಸದ ಜಿ.ಮಾದೇಗೌಡ ಸ್ಥಾಪಿಸಿದ ಹನುಮಂತನಗರದ ಶ್ರೀ ಆತ್ಮಲಿಂಗೇಶ್ವರ ದೇವಾಲಯದಲ್ಲೂ ಸಹ ಭಾರತೀ ವಸತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಿಬ್ಬಂದಿ ವಿಶೇಷ ಪೂಜೆ ಸಲ್ಲಿಸಿದರು.