ಠಾಣೆ ಮುಂದೆ ದರ್ಶನ್‌ಗೆ ಅಭಿಮಾನಿಗಳ ಜೈಕಾರ

| Published : Jun 12 2024, 01:45 AM IST

ಠಾಣೆ ಮುಂದೆ ದರ್ಶನ್‌ಗೆ ಅಭಿಮಾನಿಗಳ ಜೈಕಾರ
Share this Article
  • FB
  • TW
  • Linkdin
  • Email

ಸಾರಾಂಶ

ಕೊಲೆ ಪ್ರಕರಣ ಸಂಬಂಧ ನಟ ದರ್ಶನ್‌ರನ್ನು ಅನ್ನಪೂರ್ಣೇಶ್ವರಿನಗರ ಪೊಲೀಸ್‌ ಠಾಣೆಯಲ್ಲಿ ವಿಚಾರಣೆ ಮಾಡುವಾಗ ಠಾಣೆ ಹೊರಗೆ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಪರವಾಗಿ ಘೋಷಣೆ ಕೂಗಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಕೊಲೆ ಪ್ರಕರಣ ಸಂಬಂಧ ನಟ ದರ್ಶನ್‌ರನ್ನು ಅನ್ನಪೂರ್ಣೇಶ್ವರಿನಗರ ಪೊಲೀಸ್‌ ಠಾಣೆಯಲ್ಲಿ ವಿಚಾರಣೆ ಮಾಡುವಾಗ ಠಾಣೆ ಹೊರಗೆ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಪರವಾಗಿ ಘೋಷಣೆ ಕೂಗಿದರು.

ಪೊಲೀಸರ ಒಂದು ತಂಡ ಮಂಗಳವಾರ ಮುಂಜಾನೆ ಮೈಸೂರಿಗೆ ತೆರಳಿ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದ ನಟ ದರ್ಶನ್‌ನನ್ನು ಬಂಧಿಸಿ ಅನ್ನಪೂರ್ಣೇಶ್ವರಿನಗರ ಪೊಲೀಸ್‌ ಠಾಣೆಗೆ ಕರೆತಂದರು ದರ್ಶನ್‌ ಬಂಧಿಸಿ ವಿಚಾರಣೆಗೆ ಕರೆತಂದಿರುವ ವಿಚಾರ ತಿಳಿದು ಭಾರೀ ಸಂಖ್ಯೆಯ ಅಭಿಮಾನಿಗಳು ಪೊಲೀಸ್‌ ಠಾಣೆ ಬಳಿ ಜಮಾಯಿಸಿದ್ದರು.ಠಾಣೆ ಒಳಗೆ ನಟ ದರ್ಶನ್‌ನನ್ನು ವಿಚಾರಣೆ ನಡೆಯುತ್ತಿದ್ದರೆ, ಹೊರಗೆ ಅಭಿಮಾನಿಗಳು ‘ಡಿ ಬಾಸ್‌’ಗೆ ಜೈ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ಗೆ ಜೈ, ಸ್ಯಾಂಡಲ್‌ವುಡ್‌ ಕಿಂಗ್‌ ದರ್ಶನ್‌ಗೆ ಜೈ’ ಇತ್ಯಾದಿ ಜಯಘೋಷಣೆ ಕೂಗಿ ಅಭಿಮಾನ ಮೆರೆದರು. ಈ ನಡುವೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್‌ ಠಾಣೆ ಸುತ್ತ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿತ್ತು.