ಡಿ.ಕೆ. ಸುರೇಶ್ ಅವರಿಗೆ ಆಯಸ್ಸು, ಐಶ್ವರ್ಯ, ಆರೋಗ್ಯ ಮತ್ತು ರಾಜಕೀಯದಲ್ಲಿ ಇನ್ನಷ್ಟು ಉನ್ನತ ಸ್ಥಾನ ಪಡೆಯಲಿ ಎಂದು ಪ್ರಾರ್ಥಿಸಿದರು.
ಕನ್ನಡಪ್ರಭ ವಾರ್ತೆ ರಾಮನಗರ ಮಾಜಿ ಸಂಸದರಾದ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರ 60ನೇ ಹುಟ್ಟುಹಬ್ಬವನ್ನು ಕಾಂಗ್ರೆಸ್ ಮುಖಂಡರು ಹಾಗೂ ಯುವ ಮುಖಂಡರು ಸಮಾಜಮುಖಿ ಕಾರ್ಯಗಳ ಮೂಲಕ ವಿಭಿನ್ನವಾಗಿ ಆಚರಣೆ ಮಾಡಿದರು.ರಾಮನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ನಗರದ ಶಕ್ತಿ ದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಿ ದೇವರಲ್ಲಿ ಡಿ.ಕೆ. ಸುರೇಶ್ ಅವರಿಗೆ ಆಯಸ್ಸು, ಐಶ್ವರ್ಯ, ಆರೋಗ್ಯ ಮತ್ತು ರಾಜಕೀಯದಲ್ಲಿ ಇನ್ನಷ್ಟು ಉನ್ನತ ಸ್ಥಾನ ಪಡೆಯಲಿ ಎಂದು ಪ್ರಾರ್ಥಿಸಿದರು. ಆನಂತರ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಣೆ ಮಾಡಲಾಯಿತು.ಈ ವೇಳೆ ಮಾತನಾಡಿದ ಎ.ಬಿ.ಚೇತನ್ ಕುಮಾರ್, ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಹುಟ್ಟುಹಬ್ಬವನ್ನು ಕಾರ್ಯಕರ್ತರು, ಮುಖಂಡರು ಪಂಚಾಯಿತಿ ಕೇಂದ್ರ ಸ್ಥಳಗಳಲ್ಲಿ ಮತ್ತು ನಗರ ಪ್ರದೇಶಗಳಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ನಮ್ಮ ಬೆಂಗಳೂರು ದಕ್ಷಿಣ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಿಂದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಗಳಾಗಲಿ ಮತ್ತು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೆ ಬರಲಿ, ಆಯಸ್ಸು, ಆರೋಗ್ಯವನ್ನು ನೀಡಲೆಂದು ದೇವರಲ್ಲಿ ಪ್ರಾರ್ಥಿಸಿದ್ದೇವೆ ಎಂದರು.ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾಧ್ಯಕ್ಷ ಕೆ.ರಾಜು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಆಯ್ಕೆಗೊಂಡಿದ್ದ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು 10 ವರ್ಷ 6 ತಿಂಗಳ ಕಾಲ ಅಭಿವೃದ್ಧಿ ಕಡೆ ಗಮನ ನೀಡಿದ್ದರು. ಬಮೂಲ್ ಅಧ್ಯಕ್ಷರಾಗಿ ರೈತರ ಪರ ಪ್ರಾಮಾಣಿಕವಾಗಿ ಅನೇಕ ಕೆಲಸಗಳನ್ನು ಮಾಡುತ್ತಿದ್ದಾರೆ. ಅವರಿಗೆ ದೇವರು ಆಯಸ್ಸು, ಆರೋಗ್ಯ, ಅಧಿಕಾರ ನೀಡಲಿ ಎಂದು ಶುಭ ಕೋರಿದರು.ರಾಮನಗರ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿ.ಎನ್.ವೆಂಕಟೇಶ್, ನಗರಸಭಾ ಉಪಾಧ್ಯಕ್ಷೆ ಆಯಿಷಾಬಾನು, ಸದಸ್ಯರಾದ ನಿಜಾಂಷರೀಪ್, ಸಮದ್, ಅಣ್ಣು, ನಾಗಮ್ಮ, ಯುವ ಮುಖಂಡ ಗುರುಪ್ರಸಾದ್, ಕೆಡಿಎಸ್ ಸದಸ್ಯ ಪುಟ್ಟಸ್ವಾಮಯ್ಯ, ಷಡಕ್ಷರಿ ಮುಂತಾದವರು ಹಾಜರಿದ್ದರು.------18ಕೆಆರ್ ಎಂಎನ್ 2.ಜೆಪಿಜಿರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು.------ಜಿಲ್ಲಾ ಕೇಂದ್ರಕ್ಕೆ ಡಿಕೆಸು -ಇಕ್ಬಾಲ್ ಕೊಡುಗೆ ಅಪಾರ: ಕೆ.ಶೇಷಾದ್ರಿ ರಾಮನಗರ:ಡಿ.ಕೆ.ಸುರೇಶ್ ಅವರು ಮೂರು ಬಾರಿ ಸಂಸದರಾಗಿ ಜಿಲ್ಲಾ ಕೇಂದ್ರ ರಾಮನಗರ ಸೇರಿದಂತೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಅಭಿವೃದ್ಧಿಗೆ ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ನಗರಸಭಾ ಅಧ್ಯಕ್ಷ ಕೆ.ಶೇಷಾದ್ರಿ (ಶಶಿ) ಬಣ್ಣಿಸಿದರು.ನಗರದ ಹಳೇಬಸ್ ನಿಲ್ದಾಣದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಏರ್ಪಡಿಸಿದ್ದ ಮಾಜಿ ಸಂಸದ ಡಿ.ಕೆ.ಸುರೇಶ್ ಅವರ 60ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಕೇಕ್ ಕತ್ತರಿಸಿ ಮಾತನಾಡಿದ ಅವರು, ರಾಮನಗರ ನಗರಸಭಾ ವ್ಯಾಪ್ತಿಯಲ್ಲಿ ಹೈಟೆಕ್ ವಿದ್ಯುತ್ ಚಿತಾಗಾರ ಅವರ ಕೊಡುಗೆ, 82.5 ಕೋಟಿ ಯುಐಡಿಎಫ್ ಅನುದಾನದಡಿಯಲ್ಲಿ 165 ಕೋಟಿ ಅರ್ಕಾರಿವತಿ ನದಿಯ ಇಕ್ಕೆಲಗಳಲ್ಲಿ ಉದ್ಯಾನವನ ಅಭಿವೃದ್ಧಿ ಕೆಲಸಗಳು ಪ್ರಗತಿಯಲ್ಲಿವೆ. ಇವೆಲ್ಲಾ ಕಾಮಗಾರಿಗಳು ಡಿ.ಕೆ.ಸುರೇಶ್ ಮತ್ತು ಇಕ್ಬಾಲ್ ಹುಸೇನ್ ರವರ ಪ್ರಯತ್ನದಿಂದ ಯಶಸ್ವಿಯಾಗಿ ಸಾಗುತ್ತಿದೆ ಎಂದರು.ಈ ಹಿಂದೆ ಸೀರಹಳ್ಳದಲ್ಲಿ ಪ್ರವಾಹ ಬಂದು ನೂರಾರು ನಾಗರೀಕರಿಗೆ ತೊಂದರೆಯಾಗಿತ್ತು. ಈಗ ಮಾಜಿ ಸಂಸದರ ಶ್ರಮದಿಂದ ಸೀರಹಳ್ಳದಲ್ಲಿ ತಡೆಗೋಡೆ ಕಾಮಗಾರಿಯನ್ನು ಪೂರ್ಣಗೊಳಿಸಿದ್ದಾರೆ. ಅವರಿಗೆ ನಗರಸಭೆ ಮತ್ತು ನಗರದ ಜನತೆಯ ಪರವಾಗಿ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದು ಹೇಳಿದರು.ನಗರಸಭಾ ಉಪಾಧ್ಯಕ್ಷೆ ಆಯಿಷಾಬಾನು, ಮಾಜಿ ಉಪಾಧ್ಯಕ್ಷರಾದ ಮುತ್ತುರಾಜ್, ಜಯಲಕ್ಷ್ಮಮ್ಮ, ಸೋಮಶೇಖರ್ (ಮಣಿ), ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಶಿವಕುಮಾರಸ್ವಾಮಿ, ಅಜ್ಮತ್, ಸದಸ್ಯರಾದ ನಿಜಾಂಷರೀಫ್, ಅಣ್ಣು, ರಾಮನಗರ ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ಶ್ರೀನಿವಾಸ್, ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಮುಷೀರ್, ರಾಮನಗರ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಭೂಷಣ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್.ವೆಂಕಟೇಶ್, ನಗರ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಲೋಕೇಶ್, ಸಯಾನ್ ಸೇರಿದಂತೆ ಅನೇಕರು ಹಾಜರಿದ್ದರು.------18ಕೆಆರ್ ಎಂಎನ್ 3.ಜೆಪಿಜಿರಾಮನಗರದ ಹಳೇಬಸ್ ನಿಲ್ದಾಣದಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್ ಅವರ 60ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಕೇಕ್ ಕತ್ತರಿಸಿದರು.-----ಡಿಕೆಸು ಜನ್ಮದಿನ: ರಕ್ತದಾನ, ನೋಟ್ ಬುಕ್ ವಿತರಣೆ
ರಾಮನಗರ: ತಾಲೂಕಿನ ಅವ್ವೇರಹಳ್ಳಿಯಲ್ಲಿ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರ ಜನ್ಮದಿನವನ್ನು ರಕ್ತದಾನದ ಜತೆಗೆ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.ಅವ್ವೇರಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ರೋಟರಿ ರಕ್ತನಿಧಿ ಸಹಯೋಗದೊಂದಿಗೆ ಯುವ ಕಾಂಗ್ರೆಸ್ ಘಟಕ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಗ್ರಾಮಸ್ಥರು ಹಾಗೂ ಯುವ ಕಾಂಗ್ರೆಸ್ ಮುಖಂಡರು ಸೇರಿದಂತೆ 80ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದರು. ಈ ಶಿಬಿರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್, ಯುವ ಮುಖಂಡರಾದ ಚನ್ನಮಾನಹಳ್ಳಿ ಶ್ರೀನಿವಾಸ್, ಭೂಷಣ್, ಮಲ್ಲೇಗೌಡ, ಚೇತನ್, ಪಾರ್ಥ, ಶಾಂತಕುಮಾರ್, ಬಾಲರಾಜು, ಅಚ್ಚಲು ಗೋಪಾಲ್, ಅವ್ವೇರಹಳ್ಳಿ ನಾಗೇಶ್, ಕಿರಣ್ ಮತ್ತಿತರರು ರಕ್ತದಾನ ಮಾಡಿದರು.ವೇದಿಕೆಯಲ್ಲಿ ಮುಖಂಡರು ಕೇಕ್ ಕತ್ತರಿಸಿ ಸಾರ್ವಜನಿಕರು ಹಂಚಿತರು. ತರುವಾಯ ಸರ್ಕಾರಿ ಶಾಲೆಯ ನೂರಾರು ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಣೆ ಮಾಡಲಾಯಿತು.ಈ ವೇಳೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾಧ್ಯಕ್ಷ ಕೆ.ರಾಜು ಮಾತನಾಡಿ, ಡಿ.ಕೆ. ಸುರೇಶ್ ಅವರು ಸಂಸದರಾಗಿ ಮಾಡಿದ ಜನಪರ ಕೆಲಸ ದೇಶದಲ್ಲೇ ಮಾದರಿಯಾಗಿತ್ತು. ಅವರ ಹುಟ್ಟುಹಬ್ಬವನ್ನು ರಕ್ತದಾನ ಮತ್ತು ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮೂಲಕ ಆಚರಣೆ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದರು.ಡಿ.ಕೆ.ಸುರೇಶ್ ಮೂರು ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರಾಗಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಹೆಚ್ಚಿನ ಒತ್ತು ನೀಡಿದರು. ಇದೀಗ ಬಮೂಲ್ ಅಧ್ಯಕ್ಷರಾಗಿ ಅನೇಕ ರೈತಪರ ಕಾರ್ಯಕ್ರಮ ನೀಡುವ ಮೂಲಕ ಹೈನುಗಾರಿಕೆ ಕ್ಷೇತ್ರದಲ್ಲಿ ತಮ್ಮ ಛಾಪು ಮೂಡಿಸುತ್ತಿದ್ದಾರೆ. ಅವರಿಗೆ ದೇವರು ಮತ್ತಷ್ಟು ಶಕ್ತಿ ಹಾಗೂ ಆಯುರಾರೋಗ್ಯ ನೀಡಲಿ ಎಂದು ಹೇಳಿದರು.ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಎಚ್.ರಾಜು. ಹುಲಿಕೆರೆ ಗುನ್ನೂರು ಗ್ರಾಪಂ ಅಧ್ಯಕ್ಷ ಗಿರೀಶ್, ಸದಸ್ಯರಾದ ನಾಗೇಶ, ಮಹದೇವಯ್ಯ, ದಾಸೇಗೌಡ, ಚಂದ್ರಮ್ಮ ರಮೇಶ್ ಯುವ ಕಾಂಗ್ರೆಸ್ ಮುಖಂಡರಾದ ಗುರುಪ್ರಸಾದ್, ಮೋಸಿನ್ ಖಾನ್, ಕುಂಬಾಪುರ ಕಿರಣ್, ಕೆ.ಪಾರ್ಥ, ರಂಜನ್ ಸೇರಿದಂತೆ ಹಲವರು ಹಾಜರಿದ್ದರು.--------18ಕೆಆರ್ ಎಂಎನ್ 4.ಜೆಪಿಜಿರಾಮನಗರ ತಾಲೂಕಿನ ಅವ್ವೇರಹಳ್ಳಿಯಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್ ಹುಟ್ಟುಹಬ್ಬದ ಅಂಗವಾಗಿ ಕಾಂಗ್ರೆಸ್ ಮುಖಂಡರು ರಕ್ತದಾನ ಮಾಡಿದರು.-------ಹೂವಿನ ಗಿಡ ವಿತರಿಸಿ ಡಿಕೆಸು ಹುಟ್ಟುಹಬ್ಬ ಆಚರಣೆರಾಮನಗರ:ಬಿಡದಿ ಹೋಬಳಿ ಯುವ ಕಾಂಗ್ರೆಸ್ ಮುಖಂಡರು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ರವರ 60ನೇ ಹುಟ್ಟುಹಬ್ಬವನ್ನು ಜನರಿಗೆ ಗಿಡಗಳನ್ನು ವಿತರಿಸುವ ಮೂಲಕ ವಿಭಿನ್ನವಾಗಿ ಆಚರಿಸಿದರು.ಬಿಡದಿ ಪಟ್ಟಣದ ಬಿಜಿಎಸ್ ವೃತ್ತದಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಗಾಣಕಲ್ ನಟರಾಜ್ ನೇತೃತ್ವದಲ್ಲಿ ಯುವ ಮುಖಂಡರು ನೂರಾರು ಜನರಿಗೆ ಮಲ್ಲಿಗೆ ಮತ್ತು ಗುಲಾಬಿ ಗಿಡಗಳನ್ನು ವಿತರಣೆ ಮಾಡಿದರು.ಗ್ರಾಮಗಳಿಂದ ಪಟ್ಟಣಕ್ಕೆ ಆಗಮಿಸಿದ್ದ ಮಹಿಳೆಯರು, ಉದ್ಯೋಗಕ್ಕೆ ತೆರಳುತ್ತಿದ್ದ ಯುವಕ - ಯುವತಿಯರು, ವಿದ್ಯಾರ್ಥಿಗಳು , ಪೌರಕಾರ್ಮಿಕರು ಸೇರಿದಂತೆ ಅನೇಕರು ಗಿಡಗಳನ್ನು ಪಡೆದುಕೊಂಡರು.-----18ಕೆಆರ್ ಎಂಎನ್ 5.ಜೆಪಿಜಿಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಗಾಣಕಲ್ ನಟರಾಜ್ ರವರು ಜನರಿಗೆ ಹೂವಿನ ಗಿಡಗಳನ್ನು ವಿತರಿಸಿದರು.