ಕಿರಗಂದೂರು ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

| Published : Mar 24 2025, 12:34 AM IST

ಕಿರಗಂದೂರು ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ
Share this Article
  • FB
  • TW
  • Linkdin
  • Email

ಸಾರಾಂಶ

ತಾಲೂಕಿನ ಕಿರಗಂದೂರು ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಶಾರದಾ ಪೂಜೆ ನಡೆಯಿತು.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ತಾಲೂಕಿನ ಕಿರಗಂದೂರು ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಶಾರದಾ ಪೂಜೆ ನಡೆಯಿತು.

ಶಾಲಾ ಮುಖ್ಯ ಶಿಕ್ಷಕರಾದ ರಶ್ಮೀ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಇಂದಿನ ಸ್ಫರ್ಧಾತ್ಮಕ ಯುಗದಲ್ಲಿ ಹೆಚ್ಚಿನ ಅಂಕಗಳನ್ನು ಪಡೆಯಲು ಮುಂದಾಗಬೇಕು ಎಂದು ಕಿವಿಮಾತು ಹೇಳಿದರು.

ಈ ಸಂದರ್ಭ ಶಿಕ್ಷಕರು ಮತ್ತು ಸಿಬ್ಬಂದಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

-------------------------------

ನಿವೃತ್ತ ಯೋಧರಿಗೆ ತಿಂಗಳಲ್ಲಿ ನಿವೇಶನಕ್ಕೆ ಹಕ್ಕುಪತ್ರ ನೀಡದಿದ್ದರೆ ಉಪವಾಸ ಸತ್ಯಾಗ್ರಹಕನ್ನಡಪ್ರಭವಾರ್ತೆ ಸೋಮವಾರಪೇಟೆಅರೆಸೇನಾ ಪಡೆಯ ನಿವೃತ್ತ ಯೋಧರ ಒಕ್ಕೂಟದ ನಿವೇಶನಕ್ಕೆ ಒಂದು ತಿಂಗಳಲ್ಲಿ ಹಕ್ಕುಪತ್ರಗಳನ್ನು ನೀಡದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಒಕ್ಕೂಟದ ಪದಾಧಿಕಾರಿಗಳ ಎಚ್ಚರಿಕೆ ನೀಡಿದ್ದಾರೆ.

ಇಲ್ಲಿನ ಪತ್ರಿಕಾಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಸಂಚಾಲಕರಾದ ಎನ್.ಎಂ.ಭೀಮಯ್ಯ ಮಾತನಾಡಿ, ದೇಶ ಸೇವೆಯಲ್ಲಿ ಜೀವದ ಹಂಗು ತೊರೆದು ದುಡಿದ ಅರೆ ಸೇನಾಪಡೆಯ ನಿವೃತ್ತ ಯೋಧರಿಗೆ ಕಂದಾಯ ಇಲಾಖೆ ಅನ್ಯಾಯ ಮಾಡುತ್ತಿದೆ ಎಂದು ಹೇಳಿದರು.

ಮಡಿಕೇರಿ ತಾಲ್ಲೂಕಿನ ಕರ್ಣಂಗೇರಿ ಗ್ರಾಮದ ಸರ್ವೆ ನಂ 10/2 ರಲ್ಲಿ 0.20 ಸೆಂಟ್ ಜಾಗ ಈಗ ಜಾಗ ಒಕ್ಕೂಟದ ಸ್ವಾಧೀನದಲ್ಲಿದೆ. ಸರ್ವೆ ಆಗಿದೆ. ಹದ್ದುಬಸ್ತು ಗುರಿತಿಸಲಾಗಿದೆ. ಕಡತ ಕಳೆದ 12 ವರ್ಷಗಳಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲೇ ಧೂಳು ತಿನ್ನುತ್ತಿದೆ. ನೂರಾರು ಬಾರಿ ಕಚೇರಿಗೆ ಅಲೆದರೂ, ಕಂದಾಯ ಇಲಾಖೆಯ ಸಿಬ್ಬಂದಿ ಅಸಡ್ಡೆ ತೋರಿಸುತ್ತ ಶೋಷಣೆ ಮಾಡುತ್ತಿದ್ದಾರೆ ಎಂದು ದೂರಿದರು.

ಭೂ ಮಂಜೂರಾತಿ ಮಾಡಿಸಿಕೊಡುವಂತೆ ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್, ಹಾಲಿ ಶಾಸಕರಾದ ಎ.ಎಸ್.ಪೊನ್ನಣ್ಣ ಅವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಆದರೆ ಯಾವುದೇ ಪ್ರಯೋಜವಾಗಿಲ್ಲ. ಭೂಮಂಜೂರಾತಿ ಸಾಧ್ಯವಾಗದಿದ್ದರೆ, ಕಡತವನ್ನು ಸರ್ಕಾರಕ್ಕೆ ಕಳುಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಶಾಸಕರಾದ ಪೊನ್ನಣ್ಣ ಸೂಚನೆ ನೀಡಿದ್ದಾರೆ. ಆದರೂ ಜಿಲ್ಲಾಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.

ಅರೆಸೇನಾಪಡೆ ನಿವೃತ್ತ ಯೋಧರಿಗೆ ಪ್ರತ್ಯೇಕ ಅರೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಅಥವಾ ನಿಗಮ ಕೊಡಗು ಜಿಲ್ಲೆಯಲ್ಲಿ ಸ್ಥಾಪನೆ ಯಾಗಬೇಕು ಎಂದು ಆಗ್ರಹಿಸಿದರು. ಕೊಡಗು ವಿಶ್ವವಿದ್ಯಾಲಯವನ್ನು ಸರ್ಕಾರ ಯಾವುದೇ ಕಾರಣಕ್ಕೂ ಮುಚ್ಚಬಾರದು. ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದಕ್ಕೆ ಯೋಜನೆ ರೂಪಿಸಬೇಕು. ಶಿಕ್ಷಕರನ್ನು ನೇಮಿಸಬೇಕು. ಸರ್ಕಾರಿ ಶಾಲೆಗಳನ್ನು ಮುಚ್ಚಬಾರದು ಎಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ಒಕ್ಕೂಟದ ಅಧ್ಯಕ್ಷ ಎಂ.ಜಿ.ಯತೀಶ್, ಕಾರ್ಯದರ್ಶಿ ಬಿ.ಎಂ.ರವೀಂದ್ರ, ಜಂಟಿ ಕಾರ್ಯದರ್ಶಿ ಬಿ.ಎನ್.ರಾಜಶೇಖರ್, ನಿರ್ದೇಶಕರಾದ ಡಿ.ಎಸ್.ನಳಿನಿ ಕುಮಾರಿ ಇದ್ದರು.