ಸಾರಾಂಶ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ೨೦೧೯-೨೦ನೇ ಸಾಲಿನ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಭಾವಪ್ರಕಾಶ ಸಭಾಂಗಣದಲ್ಲಿ ನಡೆಯಿತು.
ಕನ್ನಡಪ್ರಭ ವಾರ್ತೆ ಉದ್ಯಾವರ
ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ೨೦೧೯-೨೦ನೇ ಸಾಲಿನ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಭಾವಪ್ರಕಾಶ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.ಕಾಲೇಜಿನ ಪ್ರಾಂಶುಪಾಲೆ ಡಾ.ಮಮತಾ ಕೆ.ವಿ. ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ, ವೈದ್ಯರಾಗಿರುವ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭ ಕೋರಿದರು ಮತ್ತು ಒಳ್ಳೆಯ ನಾಗರಿಕ ಮತ್ತು ವೈದ್ಯರಾಗಿ ತಮ್ಮ ಮುಂದಿನ ಕರ್ತವ್ಯವನ್ನು ನಿಭಾಯಿಸುವುದರ ಬಗ್ಗೆ ತಿಳಿ ಹೇಳಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಪುತ್ತೂರಿನ ಪ್ರಶಾಂತಿ ಆಯುರ್ವೇದ ಕೇಂದ್ರದ ಹಿರಿಯ ವೈದ್ಯಕೀಯ ಸಲಹೆಗಾರ ಡಾ. ಶಶಿಧರ ಕಜೆ, ತಮ್ಮ ಕಾಲೇಜಿನ ದಿನಗಳನ್ನು ನೆನೆದು, ತಮ್ಮ ಅನುಭವಗಳನ್ನು ಎಲ್ಲರೊಂದಿಗೆ ಹಂಚಿಕೊಂಡರು.೨೦೧೯-೨೪ನೇ ಸಾಲಿನ ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ಶುಭಕೋರಿ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವಂತೆ ಪ್ರೇರೇಪಿಸಿದರು. ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ನಾಗರಾಜ್ ಎಸ್., ವಿದ್ಯಾರ್ಥಿಗಳ ಮುಂದಿನ ಪ್ರಾಯೋಗಿಕ ತರಬೇತಿ ಅರ್ಥಪೂರ್ಣವಾಗಿ ಕೌಶಲಭರಿತವಾಗಿರಲೆಂದು ಹಾರೈಸಿದರು.
ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮುಖ್ಯಾಧಿಕಾರಿ ಡಾ. ವೀರಕುಮಾರ ಕೆ., ಶೈಕ್ಷಣಿಕ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀಲತಾ ಕಾಮತ್ ಉಪಸ್ಥಿತರಿದ್ದರು. ಕಾಲೇಜಿನ ವತಿಯಿಂದ ನಿರ್ಗಮನ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಶುಭ ಕೋರಲಾಯಿತು.ವಿದ್ಯಾರ್ಥಿಗಳಾದ ಆಕಾಶ್ ತೋಮರ್ ಸ್ವಾಗತಿಸಿದರು. ಸ್ಫೂರ್ತಿ ಸಿ.ಪಿ. ವಂದಿಸಿದರು. ಇಂಚರ ಕೆ. ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಸಂಯೋಜನೆಯನ್ನು ಸಂಹಿತ ಮತ್ತು ಸಿದ್ಧಾಂತ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಧನಶ್ರೀ ಪಾಟೀಲ್ ನಿರ್ವಹಿಸಿದ್ದರು.