ಕ್ಯಾಮರಾಮೆನ್‌ ಗೆ ಬೀಳ್ಕೊಡುಗೆ

| Published : Jun 16 2024, 01:45 AM IST

ಸಾರಾಂಶ

ಉಡುಪಿಯಲ್ಲಿ ಕಾರ್ಯನಿರ್ವಹಿಸಿ ಈಗ ದಾವಣಗೆರೆಗೆ ವರ್ಗಾವಣೆಗೊಂಡ ಟಿವಿ 9 ವಾಹಿನಿಯ ಕ್ಯಾಮರಾಮೆನ್ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯ ದಿನೇಶ್ ಎಂ.ಎಚ್. ಅವರಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಜಂಟಿ ಆಶ್ರಯದಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಕಳೆದ ಮೂರು ವರ್ಷಗಳ ಕಾಲ ಉಡುಪಿಯಲ್ಲಿ ಕಾರ್ಯನಿರ್ವಹಿಸಿ ಈಗ ದಾವಣಗೆರೆಗೆ ವರ್ಗಾವಣೆಗೊಂಡ ಟಿವಿ 9 ವಾಹಿನಿಯ ಕ್ಯಾಮರಾಮೆನ್ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯ ದಿನೇಶ್ ಎಂ.ಎಚ್. ಅವರಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಜಂಟಿ ಆಶ್ರಯದಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಗುರುವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು.ಈ ಸಂದರ್ಭದಲ್ಲಿ ದಿನೇಶ್ ಎಂ.ಎಚ್. ಅವರನ್ನು ಉಡುಪಿ ವಾರ್ತಾಧಿಕಾರಿ ಮಂಜುನಾಥ್ ಸನ್ಮಾನಿಸಿದರು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ರಾಜೇಶ್ ಶೆಟ್ಟಿ ಅಧ್ಯಕ್ಷತೆವಹಿಸಿದ್ದರು. ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಪತ್ರಿಕಾ ಭವನ ಸಮಿತಿ ಸಂಚಾಲಕ ಅಜಿತ್ ಆರಾಡಿ, ಸಂಘದ ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಉಪಸ್ಥಿತರಿದ್ದರು.ಉಡುಪಿಗೆ ವರ್ಗಾವಣೆಗೊಂಡು ಬಂದಿರುವ ಪ್ರಜಾವಾಣಿ ಜಿಲ್ಲಾ ವರದಿಗಾರ ನವೀನ್ ಕುಮಾರ್ ಜಿ. ಹಾಗೂ ಟಿವಿ 9 ಕ್ಯಾಮರಾಮೆನ್ ರಾಮು ಅವರನ್ನು ಸ್ವಾಗತಿಸಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಕಾರ್ಯದರ್ಶಿ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು. ಪತ್ರಿಕಾ ಭವನ ಸಮಿತಿಯ ಸಹಸಂಚಾಲಕ ಅಂಕಿತ್ ಶೆಟ್ಟಿ ವಂದಿಸಿದರು.