ಶಿರ್ವ ಎಂಎಸ್ಆರ್‌ಎಸ್ ಕಾಲೇಜಿನ ಪ್ರಾಂಶುಪಾಲೆಗೆ ಬೀಳ್ಕೊಡುಗೆ

| Published : Mar 02 2024, 01:45 AM IST

ಸಾರಾಂಶ

ನೂತನ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದ ಡಾ. ಮಿಥುನ್ ಚಕ್ರವರ್ತಿ ಅವರನ್ನು ಆಡಳಿತ ಮಂಡಳಿ ಅಭಿನಂದಿಸಿದರು. ಕಾಲೇಜಿನ ಸಹೋದ್ಯೋಗಿಗಳು ಮತ್ತು ವಿದ್ಯಾರ್ಥಿಗಳು ಅವರಿಗೆ ತಮ್ಮ ಮನದಾಳದ ನುಡಿಗಳನ್ನು ಅರ್ಪಿಸಿದರು.

ಕನ್ನಡಪ್ರಭ ವಾರ್ತೆ ಶಿರ್ವಇಲ್ಲಿನ ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಸೇವೆಯನ್ನು ಸಲ್ಲಿಸಿ ವಯೋನಿವೃತ್ತಿ ಹೊಂದಿದ ಕಾಲೇಜಿನ ಪ್ರಾಂಶುಪಾಲೆ ಡಾ. ನಯನಾ ಎಂ. ಪಕ್ಕಳ ಅವರ ಬೀಳ್ಕೊಡುಗೆ ಸಮಾರಂಭ ನಡೆಯಿತು.ಕಾಲೇಜಿನ ಆಡಳಿತ ಮಂಡಳಿ, ಬೋಧಕ-ಬೋಧಕೇತರ ವೃಂದ, ಕಾಲೇಜಿನ ವಿದ್ಯಾರ್ಥಿಗಳು ಒಟ್ಟು ಸೇರಿ ಆಯೋಜಿಸಿದ್ದ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶಿರ್ವ ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ. ವೈ. ಭಾಸ್ಕರ್ ಶೆಟ್ಟಿ ಮಾತನಾಡಿ, ಡಾ. ನಯನಾ ಅವರ ನಿಸ್ವಾರ್ಥ ಸೇವೆಯನ್ನು ಕೊಂಡಾಡಿ, ಅವರ ಕೊಡುಗೆಗಳನ್ನು ಸ್ಮರಿಸಿದರು. ಯುವ ಮನಸ್ಸುಗಳನ್ನು ರೂಪಿಸುವಲ್ಲಿ ಡಾ. ನಯನಾ ಅವರ ಪಾತ್ರ ದೊಡ್ಡದು, ಅವರ ಸೇವಾವಧಿಯಲ್ಲಿ ಕಾಲೇಜಿಗೆ ನ್ಯಾಕ್ ‘ಎ+’ ಮಾನ್ಯತೆ ದೊರೆತಿರುವುದು ಅವರ ನಾಯಕತ್ವ ಗುಣಕ್ಕೆ ಕೈಗನ್ನಡಿ ಎಂದರು. ಅವರು ಕಾಲೇಜಿಗೆ ನೀಡಿದ ಕೊಡುಗೆಗಳನ್ನು ಸ್ಮರಿಸಿ ನೆಮ್ಮದಿಯ ನಿವೃತ್ತ ಜೀವನಕ್ಕೆ ಶುಭ ಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ಯಾವರ್ಧಕ ಸಂಘದ ಸಂಚಾಲಕ ವಿ. ಸುಬ್ಬಯ್ಯ ಹೆಗ್ಡೆ, ಬೀಳ್ಕೊಡುಗೆಯನ್ನು ಸ್ವೀಕರಿಸಿದ ಡಾ. ನಯನಾ ಇವರ ಕಾರ್ಯಕ್ಷಮತೆಯನ್ನು ಶ್ಲಾಘಿಸಿ ಅವರ ನಿವೃತ್ತ ಜೀವನಕ್ಕೆ ಶುಭಾಶಯಗಳನ್ನು ತಿಳಿಸಿದರು.ನೂತನ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದ ಡಾ. ಮಿಥುನ್ ಚಕ್ರವರ್ತಿ ಅವರನ್ನು ಆಡಳಿತ ಮಂಡಳಿ ಅಭಿನಂದಿಸಿದರು. ಕಾಲೇಜಿನ ಸಹೋದ್ಯೋಗಿಗಳು ಮತ್ತು ವಿದ್ಯಾರ್ಥಿಗಳು ಅವರಿಗೆ ತಮ್ಮ ಮನದಾಳದ ನುಡಿಗಳನ್ನು ಅರ್ಪಿಸಿದರು. ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ನಿವೃತ್ತ ಸಿಬ್ಬಂದಿವರ್ಗದವರು, ಹಳೇ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಡಾ. ಮಿಥುನ್ ಚಕ್ರವರ್ತಿ ಸ್ವಾಗತಿಸಿದರು. ಡಾ. ಸೋನಾ ಎಚ್.ಸಿ. ನಿರೂಪಿಸಿದರು. ಹೇಮಲತಾ ಶೆಟ್ಟಿ ವಂದಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾವರ್ಧಕ ಆಂಗ್ಲ ಮಾಧ್ಯಮ ಶಾಲೆಯ ಉಪಪ್ರಾಂಶುಪಾಲರಾದ ನಿಶಾ ಶೆಟ್ಟಿ, ನಿವೃತ್ತ ಕಚೇರಿ ಅಧೀಕ್ಷಕ ರಮಾನಂದ ಶೆಟ್ಟಿಗಾರ್, ಹಿಂದೂ ಪ್ರೌಢ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಶಕೀಲಾ ಹೆಗ್ಡೆ ಉಪಸ್ಥಿತರಿದ್ದರು.