ಸಾರಾಂಶ
ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಸಿಬ್ಬಂದಿಗೆ ಬೀಳ್ಕೊಡುಗೆ ಕಾರ್ಯಕ್ರಮ ಉಡುಪಿ ಅಜ್ಜರಕಾಡು ಪುರಭವನದ ಮಿನಿಹಾಲ್‌ನಲ್ಲಿ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ನಗರದ ಹಿರಿಯ ಸಹಕಾರಿ ಸಂಸ್ಥೆ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶಾಖಾ ವ್ಯವಸ್ಥಾಪಕರಾದ ನಯನಾ ಆಶಾಮಣಿ, ದಾಮೋದರ್, ಶೆರ್ಲಿನ್ ಕರ್ಕಡ ಹಾಗೂ ಸಿಬ್ಬಂದಿ ರವಿ ಬಿ. ಅವರ ಬೀಳ್ಕೊಡುಗೆ ಕಾರ್ಯಕ್ರಮ ಉಡುಪಿ ಅಜ್ಜರಕಾಡು ಪುರಭವನದ ಮಿನಿಹಾಲ್‌ನಲ್ಲಿ ಇತ್ತೀಚೆಗೆ ನಡೆಯಿತು.ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಕನ್ಯಾ, ನಿವೃತ್ತ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ. ಸಮ್ಮುಖದಲ್ಲಿ ಈ ಆತ್ಮೀಯ ಬೀಳ್ಕೊಡುಗೆ ಕಾರ್ಯಕ್ರಮ ನೆರವೇರಿತು.
ಈ ಸಂದರ್ಭ ಸಂಘ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಉಪಾಧ್ಯಕ್ಷರಾದ ಜಾರ್ಜ್ ಸಾಮ್ಯುವೆಲ್, ಆಡಳಿತ ಮಂಡಳಿ ಸದಸ್ಯರಾದ ಎಲ್. ಉಮಾನಾಥ, ಪುರುಷೋತ್ತಮ ಪಿ. ಶೆಟ್ಟಿ, ಸೈಯ್ಯದ್ ಅಬ್ದುಲ್ ರಜಾಕ್, ವಿನಯ ಕುಮಾರ್ ಟಿ.ಎ., ಮನೋಹರ ಎಸ್. ಶೆಟ್ಟಿ, ಸಾಧು ಸಾಲ್ಯಾನ್, ಸದಾಶಿವ ನಾಯ್ಕ್, ಜಯಾ ಶೆಟ್ಟಿ, ಗಾಯತ್ರಿ ಎಸ್. ಭಟ್, ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ. ಶೇರಿಗಾರ್, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.