ಬೀಳಗಿ ತಾಲೂಕಿನ ಬಾಡಗಂಡಿ ಎಸ್.ಆರ್.ಪಾಟೀಲ ಶಿಕ್ಷಣ ಪ್ರತಿಷ್ಠಾನ ವತಿಯಿಂದ ಡಿ.7ರಂದು ಸಂಜೆ 4 ಗಂಟೆಗೆ ವೈದ್ಯಕಿಯ ಮಹಾವಿದ್ಯಾಲಯ ಆವರಣದಲ್ಲಿ ದಿ.ರುದ್ರಗೌಡ ಪಾಟೀಲ ಸ್ಮರಣಾರ್ಥ ಅಬ್ಬೆ ಪ್ರಶಸ್ತಿ ಹಾಗೂ ಈರಮ್ಮತಾಯಿ ರುದ್ರಗೌಡ ಪಾಟೀಲ ಸ್ಮರಣಾರ್ಥ ಕೃಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಬಾಪೂಜಿ ಅಂತಾರಾಷ್ಟ್ರೀಯ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಹೆತ್ತವರ ಪಾದಪೂಜೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದು ಎಸ್.ಆರ್. ಪಾಟೀಲ ಶಿಕ್ಷಣ ಪ್ರತಿಷ್ಠಾನ ಕಾರ್ಯದರ್ಶಿ ಎಂ.ಎನ್. ಪಾಟೀಲ ತಿಳಿದರು.

ಕನ್ನಡಪ್ರಭ ವಾರ್ತೆ ಬೀಳಗಿ

ತಾಲೂಕಿನ ಬಾಡಗಂಡಿ ಎಸ್.ಆರ್.ಪಾಟೀಲ ಶಿಕ್ಷಣ ಪ್ರತಿಷ್ಠಾನ ವತಿಯಿಂದ ಡಿ.7ರಂದು ಸಂಜೆ 4 ಗಂಟೆಗೆ ವೈದ್ಯಕಿಯ ಮಹಾವಿದ್ಯಾಲಯ ಆವರಣದಲ್ಲಿ ದಿ.ರುದ್ರಗೌಡ ಪಾಟೀಲ ಸ್ಮರಣಾರ್ಥ ಅಬ್ಬೆ ಪ್ರಶಸ್ತಿ ಹಾಗೂ ಈರಮ್ಮತಾಯಿ ರುದ್ರಗೌಡ ಪಾಟೀಲ ಸ್ಮರಣಾರ್ಥ ಕೃಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಬಾಪೂಜಿ ಅಂತಾರಾಷ್ಟ್ರೀಯ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಹೆತ್ತವರ ಪಾದಪೂಜೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದು ಎಸ್.ಆರ್. ಪಾಟೀಲ ಶಿಕ್ಷಣ ಪ್ರತಿಷ್ಠಾನ ಕಾರ್ಯದರ್ಶಿ ಎಂ.ಎನ್. ಪಾಟೀಲ ತಿಳಿದರು.

ಬಾಡಗಂಡಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾಮಾಜಿ ಸೇವೆಯಲ್ಲಿ ಅತ್ಯುತ್ತಮ ಕಾರ್ಯನಿರ್ವಹಿಸಿದ ಡಾ.ಮೀನಾಕ್ಷಿ ಬಾಳಿಯವರಿಗೆ ಅಬ್ಬೆ ಪ್ರಶಸ್ತಿ ಹಾಗೂ ₹೧ ಲಕ್ಷ ನಗದು ಹಾಗೂ ಪಾರಿತೋಷಕ, ಕೃಷಿಯಲ್ಲಿ ಉತ್ತಮ ಸಾಧನೆ ಮಾಡಿರುವ ರೈತ ನಾಗಣ್ಣ ವೆಂಕಪ್ಪ ಬಡಿಗೇರ ಅವರಿಗೆ ಕೃಷಿಕ ಪ್ರಶಸ್ತಿ ಹಾಗೂ ₹೧ ಲಕ್ಷ ನಗದು ಪಾರಿತೋಷಕ ನೀಡಿ ಗೌರವಿಸಲಾಗುವುದು.

ಬಾಡಗಂಡಿ ಎಸ್.ಆರ್.ಪಿ.ಇ.ಎಫ್ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್.ಪಾಟೀಲ ಅಧ್ಯಕ್ಷೆತೆ ವಹಿಸುವರು. ಜಿಲ್ಲಾಧಿಕಾರಿ ಸಂಗಪ್ಪ ಎಂ. ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಎಸ್.ಆರ್.ಪಿ.ಇ.ಎಫ್ ಚೇರಮನ್ ಉಮಾ ಎಸ್.ಪಾಟೀಲ, ಸಂಸ್ಥೆಯ ಕಾರ್ಯದರ್ಶಿ ಎಂ.ಎನ್.ಪಾಟೀಲ, ಉಪಾಧ್ಯಕ್ಷೆ ಅನುಷಾ ಆರ್.ನಾಡಗೌಡ, ಮುಖ್ಯ ಹಣಕಾಸು ಅಧಿಕಾರಿ ಅಶೋಕ ದಾದಮಿ, ಸಲಹೆಗಾರ ಎಚ್.ಬಿ.ಧರ್ಮಣ್ಣವರ, ಆಡಳಿತಾಧಿಕಾರಿ ರಾಘವೇಂದ್ರ ಪಾಟೀಲ, ಬಾಪೂಜಿ ಕಾಲೇಜ ಪ್ರಾಂಶುಪಾಲ ಶಿವಬೋದ ಶೆಟ್ಟಿ ಭಾಗವಹಿಸುವರು.

ಸುದ್ದಿಗೋಷ್ಠಿಯಲ್ಲಿ ಬಾಡಗಂಡಿ ವೈದ್ಯಕೀಯ ಮಹಾವಿದ್ಯಾಲಯದ ಕಾನ್ಪರೆನ್ಸ್ ಹಾಲ್‌ನಲ್ಲಿ ಸಂಸ್ಥೆಯ ಕಾರ್ಯದರ್ಶಿ ಎಂ.ಎನ್.ಪಾಟೀಲ, ವೈಸ್ ಚೇರಮನ್ ಅನುಷಾ ಆರ್.ನಾಡಗೌಡ, ಮುಖ್ಯ ಹಣಕಾಸು ಅಧಿಕಾರಿ ಅಶೋಕ ದಾದಮಿ, ಕಾಲೇಜು ಪ್ರಾಂಶುಪಾಲ ಶಿವಬೋಧ ಶಟ್ಟಿ ಇದ್ದರು.