ಕಸಾಪ ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಉಳಿಸಲು, ಬೆಳೆಸಲು ಹಾಗೂ ಉತ್ತೇಜಿಸಲು ಸದಾ ಶ್ರಮಿಸುತ್ತಿರುವ ಒಂದು ಪ್ರಮುಖ ವೇದಿಕೆಯಾಗಿದೆ. ಕಸಾಪ ಸ್ಥಾಪನೆಯಾದಾಗಿನಿಂದ ಇಲ್ಲಿಯವರೆಗೆ ಅನೇಕ ಮಹನೀಯರು, ಹೋರಾಟಗಾರರು ವಿಭಿನ್ನವಾದ ಸೇವೆ ಸಲ್ಲಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಹಳ್ಳಿಗಳಲ್ಲಿ ಕಣ್ಮರೆಯಾಗಿರುವ ಕಣದ ಸಂಸ್ಕೃತಿಗೆ ರೈತ ಸಮುದಾಯ ಹಿಂತಿರುಗಬೇಕು ಎಂದು ರಾಜ್ಯ ಆರ್‌ಟಿಒ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್ ಕರೆ ನೀಡಿದರು.

ತಾಲೂಕಿನ ಗಾಂಧಿನಗರದಲ್ಲಿ ರೈತ ಶ್ರೀನಿವಾಸ್ ಹಾಗೂ ನಟೇಶ್ ಸಹೋದರರ ಹಳ್ಳಿ ಕಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನಿಂದ ಏರ್ಪಡಿಸಿದ್ದ ಸಂಕ್ರಾಂತಿ ಸುಗ್ಗಿ ಸಂಭ್ರಮ ಮತ್ತು ಕವಿಗೋಷ್ಠಿಯನ್ನು ಭತ್ತ, ರಾಗಿ ಧಾನ್ಯಗಳ ರಾಶಿ ಪೂಜೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಕಸಾಪ ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಉಳಿಸಲು, ಬೆಳೆಸಲು ಹಾಗೂ ಉತ್ತೇಜಿಸಲು ಸದಾ ಶ್ರಮಿಸುತ್ತಿರುವ ಒಂದು ಪ್ರಮುಖ ವೇದಿಕೆಯಾಗಿದೆ. ಕಸಾಪ ಸ್ಥಾಪನೆಯಾದಾಗಿನಿಂದ ಇಲ್ಲಿಯವರೆಗೆ ಅನೇಕ ಮಹನೀಯರು, ಹೋರಾಟಗಾರರು ವಿಭಿನ್ನವಾದ ಸೇವೆ ಸಲ್ಲಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಂಡ್ಯ ವಿವಿ ಉಪ ಕುಲಸಚಿವ ಡಾ.ಎಂ.ವೈ.ಶಿವರಾಮು ಮಾತನಾಡಿ, ಭಾರತದಲ್ಲಿ ಆಚರಿಸಲ್ಪಡುವ ಮಕರ ಸಂಕ್ರಾಂತಿ ಅಥವಾ ಕರ್ನಾಟಕದ ಗ್ರಾಮೀಣ ಸೊಗಡಿನ ಸುಗ್ಗಿ ಹಬ್ಬವು ಚಂದ್ರನ ಚಲನೆಯನ್ನು ಆಧರಿಸಿ ಆಚರಿಸುವ ಬಹುತೇಕ ಭಾರತೀಯ ಹಬ್ಬಗಳಿಗಿಂತ ಭಿನ್ನವಾಗಿ, ಸಂಕ್ರಾಂತಿಯು ಸೂರ್ಯನ ಚಲನೆಯನ್ನು ಆಧರಿಸಿದ ಸೌರಮಾನ ಹಬ್ಬವಾಗಿದೆ ಎಂದರು.

ಕಸಾಪ ತಾಲೂಕು ಅಧ್ಯಕ್ಷ ಎಚ್.ಆರ್. ಪೂರ್ಣಚಂದ್ರ ತೇಜಸ್ವಿ ಮಾತನಾಡಿದರು. ಉಪನ್ಯಾಸಕ ಬಲ್ಲೇನಹಳ್ಳಿ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಸಾಪ ಅಧ್ಯಕ್ಷ ವಿ.ಹರ್ಷ ಪಣ್ಣಿದೊಡ್ಡಿ, ಮಕ್ಕಳ ಸಾಹಿತ್ಯ ವೇದಿಕೆ ಅಧ್ಯಕ್ಷ ಮಾರೇನಹಳ್ಳಿ ಲೋಕೇಶ್, ಜಿಪಂ ಮಾಜಿ ಸದಸ್ಯ ರಾಮದಾಸ್, ಹಿರಿಕಳಲೆ ಗ್ರಾಪಂ ಅಧ್ಯಕ್ಷೆ ರತ್ನಮ್ಮ ರಾಮಕೃಷ್ಣೇಗೌಡ, ಉಪಾಧ್ಯಕ್ಷ ಎಚ್.ಸಿ ಮಂಜುನಾಥ್, ಸರ್ಕಾರಿ ಇಲಾಖೆ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶಿಕ್ಷಕ ಎ.ಕೆ ದೇವರಾಜು, ಉದಯ ರವಿ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಎಸ್.ಸೋಮಶೇಖರ್, ಅಖಿಲ ಭಾರತ ಲಿಂಗಾಯತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಸುಜೇಂದ್ರ ಕುಮಾರ್, ಪಿಡಿಒ ನವೀನ್, ಕಸಾಪ ತಾಲೂಕು ಮಹಿಳಾಧ್ಯಕ್ಷೆ ಸವಿತಾ ರಮೇಶ್, ಗೌರವ ಕಾರ್ಯದರ್ಶಿ ಕಟ್ಟೆ ಮಹೇಶ್, ಗೌರವ ಕೋಶಾಧ್ಯಕ್ಷ ಮಂಜೇಗೌಡ, ಸಿ.ಟಿ ಚನ್ನೇಗೌಡ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.