ಒಂಟಿ ಸಲಗದ ದಾಳಿಗೆ ರೈತ ಸಾವು

| Published : Oct 30 2025, 01:02 AM IST

ಸಾರಾಂಶ

ಏಕಾಏಕಿ ಒಂಟಿ ಸಲಗ ದಾಳಿ ಮಾಡಿದ್ದರಿಂದ ವೆಂಕಟಾಚಲಯ್ಯರವರ ತಲೆ ಭಾಗಕ್ಕೆ ತೀವ್ರಗಾಯವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಹಾರೋಹಳ್ಳಿ: ಒಂಟಿ ಸಲಗದ ದಾಳಿಗೆ ಸಿಲುಕಿ ರೈತನೊಬ್ಬ ಸಾವನ್ನಪ್ಪಿರುವ ಘಟನೆ ಹಾರೋಹಳ್ಳಿ ತಾಲೂಕಿನ ದೊಡ್ಡೂರು ಗ್ರಾಮದಲ್ಲಿ ನಡೆದಿದೆ. ಬನ್ನೇರುಘಟ್ಟ ರಾಷ್ಟ್ರೀಯ ಅರಣ್ಯ ವ್ಯಾಪ್ತಿಯಲ್ಲಿ ಹಸು ಮೇಯಿಸಲು ರೈತ ವೆಂಕಟಾಚಲಯ್ಯ ತೆರಳಿದ್ದರು. ಈ ವೇಳೆ ಏಕಾಏಕಿ ಒಂಟಿ ಸಲಗ ದಾಳಿ ಮಾಡಿದ್ದರಿಂದ ವೆಂಕಟಾಚಲಯ್ಯರವರ ತಲೆ ಭಾಗಕ್ಕೆ ತೀವ್ರಗಾಯವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.