ಮೂರು ಬಾರಿ ನೋಟಿಸ್ ಬಂದ ಹಿನ್ನೆಲೆಯಲ್ಲಿ ಆತಂಕಗೊಂಡಿದ್ದ ಜಗದೀಶ್, ಪತ್ನಿಯ ಕೆಲ ಚಿನ್ನಾಭರಣಗಳನ್ನು ಅಡವಿಟ್ಟು ಸಾಲದ ಒಂದು ಭಾಗವನ್ನು ತೀರಿಸಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ. ಆದರೆ ಮಳೆ ಕೊರತೆಯಿಂದ ಬೆಳೆಗಳು ಒಣಗಲಾರಂಭಿಸಿದ್ದರಿಂದ ಕೃಷಿ ವೆಚ್ಚ ಮತ್ತು ಸಾಲದ ಹೊರೆ ಮತ್ತಷ್ಟು ಹೆಚ್ಚಾಯಿತು. ಉಳಿದ ಚಿನ್ನಾಭರಣಗಳನ್ನು ಪತ್ನಿಯ ಹೆಸರಿನಲ್ಲಿ ಅಡವಿಟ್ಟು ಹಣ ಪಡೆದು ಜಮೀನಿನಲ್ಲಿ ಎರಡು ಬೋರ್‌ವೆಲ್‌ಗಳನ್ನು ಕೊರೆಸಲಾಗಿತ್ತು. ಆದರೆ ಎರಡೂ ಬೋರ್‌ವೆಲ್‌ಗಳಲ್ಲಿ ನೀರು ದೊರೆಯದ ಹಿನ್ನೆಲೆಯಲ್ಲಿ ರೈತ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು ಎಂದು ಹೇಳಲಾಗಿದೆ. ಮಳೆ ಕೈಕೊಟ್ಟ ಪರಿಣಾಮ ಶುಂಠಿ, ಮೆಕ್ಕೆಜೋಳ ಹಾಗೂ ಆಲೂಗೆಡ್ಡೆ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, ಸಾಲ ತೀರಿಸುವ ಮಾರ್ಗ ಕಾಣದೆ ಜಗದೀಶ್ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ.
ಕನ್ನಡಪ್ರಭ ವಾರ್ತೆ ಹಾಸನ
ಬೆಳೆ ನಷ್ಟ, ಮಳೆ ಕೊರತೆ ಮತ್ತು ಹೆಚ್ಚುತ್ತಿರುವ ಸಾಲದ ಹೊರೆ ತಾಳಲಾರದೆ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ತಾಲೂಕಿನ ಕಟ್ಟಾಯ ಹೋಬಳಿಯ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ.ದೋರನಹಳ್ಳಿ ಗ್ರಾಮದ ಜಗದೀಶ್ (೪೫) ಆತ್ಮಹತ್ಯೆಗೆ ಶರಣಾದ ರೈತ. ಸ್ವಂತ ಜಮೀನಿನ ಜತೆಗೆ ಎಂಟು ಎಕರೆ ಜಮೀನನ್ನು ಗುತ್ತಿಗೆ ಪಡೆದು ಶುಂಠಿ, ಆಲೂಗೆಡ್ಡೆ ಹಾಗೂ ಮೆಕ್ಕೆಜೋಳ ಬೆಳೆದಿದ್ದರು ಎಂದು ತಿಳಿದುಬಂದಿದೆ. ಕೃಷಿ ಚಟುವಟಿಕೆಗಳಿಗಾಗಿ ಕಾವೇರಿ ಗ್ರಾಮೀಣ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ವಿವಿಧ ಸಂಘಸಂಸ್ಥೆಗಳು ಹಾಗೂ ಕೈಸಾಲದ ಮೂಲಕ ೧೦ ಲಕ್ಷ ರು. ಗೂ ಅಧಿಕ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಸಾಲ ಮರುಪಾವತಿಗೆ ಸಂಬಂಧಿಸಿದಂತೆ ಕಾವೇರಿ ಗ್ರಾಮೀಣ ಬ್ಯಾಂಕ್‌ನಿಂದ ಎರಡು-ಮೂರು ಬಾರಿ ನೋಟಿಸ್ ಬಂದ ಹಿನ್ನೆಲೆಯಲ್ಲಿ ಆತಂಕಗೊಂಡಿದ್ದ ಜಗದೀಶ್, ಪತ್ನಿಯ ಕೆಲ ಚಿನ್ನಾಭರಣಗಳನ್ನು ಅಡವಿಟ್ಟು ಸಾಲದ ಒಂದು ಭಾಗವನ್ನು ತೀರಿಸಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ. ಆದರೆ ಮಳೆ ಕೊರತೆಯಿಂದ ಬೆಳೆಗಳು ಒಣಗಲಾರಂಭಿಸಿದ್ದರಿಂದ ಕೃಷಿ ವೆಚ್ಚ ಮತ್ತು ಸಾಲದ ಹೊರೆ ಮತ್ತಷ್ಟು ಹೆಚ್ಚಾಯಿತು. ಉಳಿದ ಚಿನ್ನಾಭರಣಗಳನ್ನು ಪತ್ನಿಯ ಹೆಸರಿನಲ್ಲಿ ಅಡವಿಟ್ಟು ಹಣ ಪಡೆದು ಜಮೀನಿನಲ್ಲಿ ಎರಡು ಬೋರ್‌ವೆಲ್‌ಗಳನ್ನು ಕೊರೆಸಲಾಗಿತ್ತು. ಆದರೆ ಎರಡೂ ಬೋರ್‌ವೆಲ್‌ಗಳಲ್ಲಿ ನೀರು ದೊರೆಯದ ಹಿನ್ನೆಲೆಯಲ್ಲಿ ರೈತ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು ಎಂದು ಹೇಳಲಾಗಿದೆ. ಮಳೆ ಕೈಕೊಟ್ಟ ಪರಿಣಾಮ ಶುಂಠಿ, ಮೆಕ್ಕೆಜೋಳ ಹಾಗೂ ಆಲೂಗೆಡ್ಡೆ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, ಸಾಲ ತೀರಿಸುವ ಮಾರ್ಗ ಕಾಣದೆ ಜಗದೀಶ್ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ.
ಸೋಮವಾರ ಹೊಲಕ್ಕೆ ತೆರಳಿದ್ದ ಜಗದೀಶ್ ಅಲ್ಲಿಯೇ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷಯ ತಿಳಿದ ಕುಟುಂಬಸ್ಥರು ಅವರನ್ನು ತಕ್ಷಣ ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೊರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.