ಸೋಮವಾರ ಬೆಳಗ್ಗೆ ನಗರದ ಪ್ರವಾಸಿ ಮಂದಿರದಲ್ಲಿ ಮಲಗಿದ್ದ ವೇಳೆ ಕೋಡಿಹಳ್ಳಿ ಚಂದ್ರಶೇಖರ ಅವರನ್ನು ನ್ಯಾಯಾಲಯದ ವಾರೆಂಟ್ ಮೇರೆಗೆ ಹುಬ್ಬಳ್ಳಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
ಶಿರಸಿ: 2013ರಲ್ಲಿ ಮಹದಾಯಿ ಹೋರಾಟದ ಸಂದರ್ಭದಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು ಸೋಮವಾರ ಶಿರಸಿ ನಗರದಲ್ಲಿ ಬಂಧಿಸಿ ಹುಬ್ಬಳ್ಳಿಯ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಸೋಮವಾರ ಬೆಳಗ್ಗೆ ನಗರದ ಪ್ರವಾಸಿ ಮಂದಿರದಲ್ಲಿ ಮಲಗಿದ್ದ ವೇಳೆ ಕೋಡಿಹಳ್ಳಿ ಚಂದ್ರಶೇಖರ ಅವರನ್ನು ನ್ಯಾಯಾಲಯದ ವಾರೆಂಟ್ ಮೇರೆಗೆ ಹುಬ್ಬಳ್ಳಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.ರೈತ ಮುಖಂಡ ಚಂದ್ರಶೇಖರ್ ಕೋಡಿಹಳ್ಳಿ ಅವರು ಶಿರಸಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬಳಿಕ ದಾಸನಕೊಪ್ಪದ ರೈತ ಹೋರಾಟದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಖಚಿತ ಮಾಹಿತಿಯನ್ನು ಆಧರಿಸಿ ಹುಬ್ಬಳ್ಳಿ ರೈಲ್ವೆ ಪೊಲೀಸರು ಶಿರಸಿಗೆ ಆಗಮಿಸಿ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿ ಹುಬ್ಬಳ್ಳಿಯ ಜೆಎಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲು ಹುಬ್ಬಳ್ಳಿಗೆ ಕರೆದೊಯ್ದಿದ್ದಾರೆ.ಬಂಧನದ ಹಿನ್ನೆಲೆ: 2013ರಲ್ಲಿ ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ ಅವರ ನೇತೃತ್ವದಲ್ಲಿ ಸುಮಾರು ಆರು ಗಂಟೆ ಕಾಲ ಹುಬ್ಬಳ್ಳಿಯಲ್ಲಿ ರೈಲುಗಳನ್ನು ತಡೆದು ಹೋರಾಟ ಮಾಡಲಾಗಿತ್ತು. ಈ ಕುರಿತು ಕೋಡಿಹಳ್ಳಿ ಚಂದ್ರಶೇಖರ ಸೇರಿದಂತೆ ಇತರರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿತ್ತು. ಹಲವು ಬಾರಿ ನ್ಯಾಯಾಲಯಕ್ಕೆ ಹಾಜರಾಗುವಂತೆ ವಾರೆಂಟ್ ನೀಡಿದ್ದರೂ ಕೋಡಿಹಳ್ಳಿ ಚಂದ್ರಶೇಖರ ಅವರು ಹಾಜರಾಗಿರಲಿಲ್ಲ. ಈ ಹಿನ್ನೆಲೆ ಸೋಮವಾರ ಕೋಡಿಹಳ್ಳಿ ಚಂದ್ರಶೇಖರ ಅವರನ್ನು ಬಂಧಿಸಲಾಗಿದೆ. ಕೋಡಿಹಳ್ಳಿ ಬಂಧನ ಖಂಡಿಸಿ ರೈತರಿಂದ ಬೃಹತ್ ಪ್ರತಿಭಟನೆಶಿರಸಿ: ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಅಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ತಾಲೂಕಿನ ದಾಸನಕೊಪ್ಪದ ಶಿರಸಿ- ಹಾನಗಲ್ಲ ರಾಷ್ಟ್ರೀಯ ಹೆದ್ದಾರಿ ವೃತ್ತದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಜಿಲ್ಲಾಧ್ಯಕ್ಷ ರಾಘವೇಂದ್ರ ಕಿರವತ್ತಿ ಅವರ ನೇತೃತ್ವದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.ಈ ವೇಳೆ ರೈತ ಪ್ರತಿಭಟನಾಕಾರರು ರೈತರ ಬೇಡಿಕೆಗಳನ್ನು ಈಡೇರಿಸದ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಮಾನವ ಸರಪಳಿ ನಿರ್ಮಿಸುವ ಮೂಲಕ ಸರ್ಕಾರಕ್ಕೆ ಮತ್ತು ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಪ್ರಯತ್ನ ಮಾಡಿದರು. ಅಲ್ಲದೆ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿ ನಮ್ಮ ಮನವಿಯನ್ನು ಸ್ವೀಕರಿಸಿ ರೈತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಪಟ್ಟು ಹಿಡಿದು ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದರು.ನಂತರ ಸ್ಥಳಕ್ಕೆ ಆಗಮಿಸಿ ಪ್ರತಿಭಟನೆ ಕೈಬಿಡುವಂತೆ ತಹಸೀಲ್ದಾರ್ ಪಟ್ಟ ರಾಜಗೌಡ ಅವರು, ಪ್ರತಿಭಟನಾಕಾರರಿಗೆ ಮನವಿ ಮಾಡಿದರು. ಪ್ರತಿಭಟನೆಯಿಂದ ಹಿಂದೆ ಸರಿಯದೇ ಹೆದ್ದಾರಿ ತಡೆ ಮುಂದುವರಿಸಲು ಕುಳಿತಾಗ ರೈತ ಮುಖಂಡರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.ತಹಸೀಲ್ದಾರ್ ಪುಟ್ಟರಾಜ ಗೌಡ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಸಿಪಿಐ ಸಂಪತ್, ಬನವಾಸಿ ಪಿಎಸ್ಐ ಎಂ.ಜಿ. ಕುಂಬಾರ ಹಾಗೂ ಪೊಲೀಸ್ ಸಿಬ್ಬಂದಿ ಬಿಗಿ ಬಂದೋಬಸ್ತ್ ಒದಗಿಸಿದ್ದರು.