ಕೊಳ್ಳೇಗಾಲ: ಮಳೆ ಅಭಾವದಿಂದಾಗಿ ರೈತರು ಸಂಕಷ್ಟಕ್ಕೀಡಾಗಿದ್ದು, ಈ ಹಿನ್ನೆಲೆ ಸರ್ಕಾರ ಚಾಮರಾಜನಗರ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕು ಎಂದು ರೈತ ಮುಖಂಡ ಶೈಲೇಂದ್ರ ಆಗ್ರಹಿಸಿದರು.
ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಗಳು ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂಬ ನಿಟ್ಟಿನಲ್ಲಿ 14 ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜು.24ರಂದು ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಮುಖಂಡ ಶೈಲೇಂದ್ರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಜು.24ರಂದು ಪಟ್ಟಣದ ಉಪವಿಭಾಗಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ನಮ್ಮ ಬೇಡಿಕೆಗಳನ್ನುಈಡೇರಿಸುವಂತೆ ಒತ್ತಾಯಿಸಲಾಗುವುದು , ರೈತ ಮುಖಂಡರು ಪ್ರತಿಭಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಈ ವೇಳೆ ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಪೆರಿಯಾನಾಯಗಂ, ಉಪಾಧ್ಯಕ್ಷ ಚಾರ್ಲಿ, ವಸಂತಕುಮಾರ್, ಲಾರೆನ್ಸ್, ಚಂದ್ರಶೇಖರ್, ಮುರುಗನ್, ಹನೂರು ಭಾಗದ ಹೋರಾಟಗಾರರು ಅರ್ಪುದಂ ಇದ್ದರು.