ವಿಷ ಸೇವಿಸಿದ್ದ ರೈತ ಚಿಕಿತ್ಸೆಗೆ ಸ್ಪಂದಿಸದೇ ಸಾವು

| Published : Jul 11 2025, 11:48 PM IST

ಸಾರಾಂಶ

ಶುಕ್ರವಾರ ಬೆಳಗಿನ ಜಾವ ಚಿಕಿತ್ಸೆಗೆ ಸ್ಪಂದಿಸದೇ ಮಂಜೇಗೌಡ ಸಾವನ್ನಪ್ಪಿದರು ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ.

ಹೊಳೆನರಸೀಪುರ: ತಾಲೂಕಿನ ತಟ್ಟೇಕೆರೆ ಗ್ರಾಮದಲ್ಲಿ ಸಾಲದ ಬಾಧೆಯಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತರೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಜುಲೈ ೫ ರಂದು ಕ್ರಿಮಿನಾಶಕ ಸೇವಿಸಿದ್ದ ರೈತ ಮಂಜೇಗೌಡರನ್ನು (45) ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನಂತರ, ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗೆ ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಶುಕ್ರವಾರ ಬೆಳಗಿನ ಜಾವ ಚಿಕಿತ್ಸೆಗೆ ಸ್ಪಂದಿಸದೇ ಮಂಜೇಗೌಡ ಸಾವನ್ನಪ್ಪಿದರು ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ. ಇವರು ಕೃಷಿ ಚಟುವಟಿಕೆ ಹಾಗೂ ಮನೆ ಕಟ್ಟಲು ಮೂಡಲಹಿಪ್ಪೆ ಕರ್ನಾಟಕ ಗ್ರಾಮೀಣ ಬ್ಯಾಂಕಿನಲ್ಲಿ ಸಾಲ ಪಡೆದಿದ್ದರು ಎಂದು ತಿಳಿಸಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪತ್ರರು ಇದ್ದಾರೆ.