ರಾಮನಗರ: ಬಿಡದಿ ಉಪನಗರ ಯೋಜನೆ ಭೂಸ್ವಾಧೀನ ವಿರೋಧಿಸಿ ಹೋರಾಟ ನಡೆಸುತ್ತಿರುವ ಬೈರಮಂಗಲ-ಕಂಚುಗಾರನಹಳ್ಳಿ ಗ್ರಾಮ ಪಂಚಾಯಿ ವ್ಯಾಪ್ತಿಯ ನೂರಾರು ರೈತ ಮಹಿಳೆಯರು ಇದೀಗ ನ್ಯಾಯ ಒದಗಿಸುವಂತೆ ಪ್ರಾರ್ಥಿಸಿ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಭೂವರಹಸ್ವಾಮಿ ದೇವರ ಮೊರೆ ಹೋಗಿದ್ದಾರೆ.
ರಾಮನಗರ: ಬಿಡದಿ ಉಪನಗರ ಯೋಜನೆ ಭೂಸ್ವಾಧೀನ ವಿರೋಧಿಸಿ ಹೋರಾಟ ನಡೆಸುತ್ತಿರುವ ಬೈರಮಂಗಲ-ಕಂಚುಗಾರನಹಳ್ಳಿ ಗ್ರಾಮ ಪಂಚಾಯಿ ವ್ಯಾಪ್ತಿಯ ನೂರಾರು ರೈತ ಮಹಿಳೆಯರು ಇದೀಗ ನ್ಯಾಯ ಒದಗಿಸುವಂತೆ ಪ್ರಾರ್ಥಿಸಿ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಭೂವರಹಸ್ವಾಮಿ ದೇವರ ಮೊರೆ ಹೋಗಿದ್ದಾರೆ.
ಕಳೆದ ನಾಲ್ಕೈದು ತಿಂಗಳಿಂದ ಬೈರಮಂಗಲ ವೃತ್ತದಲ್ಲಿ ನೂರಾರು ರೈತರು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಇಲ್ಲಿವರೆಗೆ ರಾಜ್ಯ ಸರ್ಕಾರವಾಗಲಿ ಅಥವಾ ಸರ್ಕಾರದ ಪ್ರತಿನಿಧಿಗಳಾಗಲಿ ಧರಣಿ ಸ್ಥಳಕ್ಕೆ ಭೇಟಿ ನೀಡಿ ಅಹವಾಲು ಆಲಿಸುವ ಕೆಲಸ ಮಾಡಿಲ್ಲ. ಈ ಮಧ್ಯೆ ಜಿಲ್ಲಾಡಳಿತ ಭೂಮಾಲೀಕರ ಅಭಿಪ್ರಾಯ ಪಡೆಯದೆ ಟೌನ್ ಶಿಪ್ ಯೋಜನೆಗೆ ಸ್ವಾಧೀನ ಪಡಿಸಿಕೊಳ್ಳಲಾಗುವ ಭೂಮಿಗೆ ದರ ಕೂಡ ನಿಗದಿ ಮಾಡಿದೆ. ಇದರಿಂದ ಮತ್ತಷ್ಟು ಕೆರಳಿರುವ ರೈತರು ಜನಪ್ರತಿನಿಧಿಗಳಿಗೆ ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಇಷ್ಟೆಲ್ಲ ಆದರೂ ನ್ಯಾಯ ಸಿಗದ ಕಾರಣ ರೈತರು ಪ್ರತಿಭಟನೆ ನಡೆಸುವ ಜೊತೆಗೆ ದೇವರಲ್ಲಿ ಹರಕೆ ಹೊತ್ತಿಕೊಳ್ಳುತ್ತಿದ್ದಾರೆ. ಇಷ್ಟಾರ್ಥ ನೆರವೇರುವ ನಂಬಿಕೆಯಿಂದ ಬೈರಮಂಗಲ-ಕಂಚುಗಾರನಹಳ್ಳಿ ಗ್ರಾಮ ಪಂಚಾಯಿ ವ್ಯಾಪ್ತಿಯ ರೈತ ಮಹಿಳೆಯರು ಕೆ.ಆರ್. ಪೇಟೆ ತಾಲೂಕಿನಲ್ಲಿರುವ ಭೂ ವರಹ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ವಾಪಸ್ಸಾಗಿದ್ದಾರೆ.
ರೈತರ ವಿರೋಧದ ನಡುವೆಯೂ ಕೈಗೆತ್ತಿಕೊಂಡಿರುವ ಬಿಡದಿ ಟೌನ್ ಶಿಪ್ ಯೋಜನೆ ಯಾವುದೇ ಕಾರಣಕ್ಕೂ ಸಕಾರಗೊಳ್ಳುವುದಿಲ್ಲ. ಇನ್ನಾದರು ರಾಜ್ಯ ಸರ್ಕಾರ ಯೋಜನೆಯನ್ನು ಕೈಬಿಟ್ಟು ರೈತರು ನೆಮ್ಮದಿಯಾಗಿ ಜೀವನ ನಡೆಸಲು ಅವಕಾಶ ಮಾಡಿಕೊಡಬೇಕೆಂದು ರೈತ ಮಹಿಳೆಯರು ಒತ್ತಾಯಿಸಿದರು.2ಕೆಆರ್ ಎಂಎನ್ 5.ಜೆಪಿಜಿ
ಬೈರಮಂಗಲ-ಕಂಚುಗಾರನಹಳ್ಳಿ ಗ್ರಾಮ ಪಂಚಾಯಿ ವ್ಯಾಪ್ತಿಯ ನೂರಾರು ರೈತ ಮಹಿಳೆಯರು ಇದೀಗ ನ್ಯಾಯ ಒದಗಿಸುವಂತೆ ಪ್ರಾರ್ಥಿಸಿ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಭೂವರಹಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿರುವುದು.