ರೈತ ಸಂಘದಿಂದ ಸರ್ಕಾರಿ ಶಾಲೆ ಉಳಿಸಿ ಅಭಿಯಾನ

| Published : Sep 20 2025, 01:00 AM IST

ಸಾರಾಂಶ

ಕನಕಪುರ: ಈಗಾಗಲೇ ರಾಮನಗರ ಜಿಲ್ಲೆಯಲ್ಲಿ ಅನೇಕ ಸರ್ಕಾರಿ ಶಾಲೆಗಳು ಮುಚ್ಚುತ್ತಿದ್ದು, ಕೋಡಿಹಳ್ಳಿ ಹೋಬಳಿಯ ಹೊಸದುರ್ಗ ಸರ್ಕಾರಿ ಶಾಲೆಯನ್ನು ಉಳಿಸಿ ಅಭಿಯಾನ ಹಮ್ಮಿಕೊಂಡಿದ್ದೇವೆ ಎಂದು ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ನಲ್ಲಹಳ್ಳಿ ಶ್ರೀನಿವಾಸ ಹೇಳಿದರು.

ಕನಕಪುರ: ಈಗಾಗಲೇ ರಾಮನಗರ ಜಿಲ್ಲೆಯಲ್ಲಿ ಅನೇಕ ಸರ್ಕಾರಿ ಶಾಲೆಗಳು ಮುಚ್ಚುತ್ತಿದ್ದು, ಕೋಡಿಹಳ್ಳಿ ಹೋಬಳಿಯ ಹೊಸದುರ್ಗ ಸರ್ಕಾರಿ ಶಾಲೆಯನ್ನು ಉಳಿಸಿ ಅಭಿಯಾನ ಹಮ್ಮಿಕೊಂಡಿದ್ದೇವೆ ಎಂದು ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ನಲ್ಲಹಳ್ಳಿ ಶ್ರೀನಿವಾಸ ಹೇಳಿದರು. ರಾಜ್ಯ ರೈತ ಸಂಘ, ಹಸಿರು ಸೇನೆ ಹಾಗೂ ನ್ಯೂ ಚಿಗುರು ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ಉಚಿತ ನೋಟ್ ಬುಕ್ ವಿತರಿಸಿ ಮಾತನಾಡಿದ ಅವರು, ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳಿದ್ದರೂ ಶಿಕ್ಷಕರ ಕೊರತೆಯಿದೆ. ಗುಣಮಟ್ಟ ಶಿಕ್ಷಣ ಸಿಗುತ್ತಿದ್ದ ಸರ್ಕಾರಿ ಶಾಲೆಗಳನ್ನು ನಿರ್ಲಕ್ಷಿಸಿರುವ ರಾಜ್ಯ ಸರ್ಕಾರ ಬಡವರ ಹಾಗೂ ರೈತರ ಮಕ್ಕಳ ವಿದ್ಯಾಭ್ಯಾಸದ ಮೇಲೆ ಬರೆ ಎಳೆಯುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಯೋಗ್ಯ ಶಿಕ್ಷಕರನ್ನು ನೇಮಿಸುವಂತೆ ಒತ್ತಾಯಿಸಿದರು. ನ್ಯೂ ಚಿಗುರು ಚಾರಿಟಬಲ್ ಟ್ರಸ್ಟ್ ಮರಿಸ್ವಾಮಿ, ರೈತ ಸಂಘದ ತಾಲೂಕು ಅಧ್ಯಕ್ಷ ಶಿವರಾಜು, ಸುರೇಶ್ ಮಹಾಲಿಂಗಣ್ಣ, ಹೊಸದುರ್ಗ ಗ್ರಾಮದ ಆಕಾಶವಾಣಿ ಕಲಾವಿದ ಶ್ರೀನಿವಾಸ್, ಹಿರಿಯ ಮುಖಂಡರಾದ ಮಲ್ಲೇಶ್, ರಾಮಸ್ವಾಮಿ ಹಾಗೂ ಶಾಲಾ ಶಿಕ್ಷಕ ರಮೇಶ್ಮ ನಟರಾಜ್‌ ಇತರರಿದ್ದರು.ಕೆ ಕೆ ಪಿ ಸುದ್ದಿ 02:

ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸರ್ಕಾರಿ ಶಾಲೆ ಉಳಿಸಿ ಅಭಿಯಾನ.