ಸಾರಾಂಶ
ಕಡೂರುಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಡಿ.16 ರಂದು ಮುಖ್ಯಮಂತ್ರಿ, ಕಂದಾಯ ಸಚಿವರನ್ನು ರೈತ ಸಂಘದ ರಾಜ್ಯ ಮುಖಂಡರು ಭೇಟಿ ಮಾಡಿ ರೈತರ ಸಮಸ್ಯೆಗಳ ಪರಿಹಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಮುಸ್ಲಾಪುರದಹಟ್ಟಿ ಮೂರ್ತಿ ತಿಳಿಸಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಮುಸ್ಲಾಪುರದಹಟ್ಟಿ ಮೂರ್ತಿ
ಕನ್ನಡಪ್ರಭ ವಾರ್ತೆ, ಕಡೂರುಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಡಿ.16 ರಂದು ಮುಖ್ಯಮಂತ್ರಿ, ಕಂದಾಯ ಸಚಿವರನ್ನು ರೈತ ಸಂಘದ ರಾಜ್ಯ ಮುಖಂಡರು ಭೇಟಿ ಮಾಡಿ ರೈತರ ಸಮಸ್ಯೆಗಳ ಪರಿಹಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಮುಸ್ಲಾಪುರದಹಟ್ಟಿ ಮೂರ್ತಿ ತಿಳಿಸಿದರು.ಶುಕ್ರವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ರೈತ ಮುಖಂಡರೊಂದಿಗೆ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದರು. ಕರ್ನಾಟಕ ರೈತ ಸಂಘದ ಸಂಸ್ಥಾಪಕ ಪಚ್ಚೆ ನಂಜುಂಡಸ್ವಾಮಿ, ಅಧ್ಯಕ್ಷ ಶರಣಪ್ಪ ದೊಡ್ಡಮನೆ ಹಾಗೂ ವಿವಿಧ ರೈತ ಸಂಘಟನೆಗಳ ಒಕ್ಕೂಟಗಳ ಕಾರ್ಯಕರ್ತರು ಅಧ್ಯಕ್ಷ ಹಾಗೂ ಹಸಿರು ಸೇನೆ ರಾಜ್ಯ ಮುಖಂಡರು ಒಟ್ಟಾಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿ ಸಲ್ಲಿಸಲಾಗುವುದು ಎಂದರು.
ಅಲ್ಲದೆ ಚಿಕ್ಕಮಗಳೂರು ಸೇರಿದಂತೆ ಕಡೂರು ತಾಲೂಕಿನ ಎಮ್ಮೆದೊಡ್ಡಿ ಭಾಗದ ಸರ್ವೆ ನಂ, 70-76 ರಲ್ಲಿ ಕಳೆದ ಸುಮಾರು 70 ವರ್ಷಗಳಿಂದ ಉಳುಮೆ ಮಾಡಿಕೊಂಡಿರುವ ರೈತರನ್ನು ಅರಣ್ಯ ಇಲಾಖೆ ಮತ್ತು ಅಮೃತ್ ಮಹಲ್ ಕಾವಲಿನ ಅಧಿಕಾರಿಗಳು ಈ ಭೂಮಿ ನಮ್ಮದೆಂದು ನೋಟಿಸ್ ನೀಡಿ ಒಕ್ಕಲೆಬ್ಬಿಸಲು ಮುಂದಾಗುತ್ತಿವೆ ಎಂಬ ಈ ವಿಷಯವನ್ನುಅಧ್ಯಕ್ಷರು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿ ಚರ್ಚಿಸಲಿದ್ದಾರೆ ಎಂದರು.ಜಿಲ್ಲಾ ಸಂಘದ ಕಾರ್ಯದರ್ಶಿ ಗೌಡನಕಟ್ಟೆ ಜಿ.ಕೆ.ಚಿದಾನಂದಮೂರ್ತಿ ಮಾತನಾಡಿ, ಜಿಲ್ಲೆಯಲ್ಲಿ ರೈತ ಸಂಘ ಸಂಘಟನೆಗೆ ಒತ್ತು ನೀಡುವ ಮೂಲಕ ರೈತರ ಸಮಸ್ಯೆಗಳಿಗೆ ಸಂಘ ಪ್ರಾಮಾಣಿಕವಾಗಿ ಸ್ಪಂದಿಸುತ್ತಿದೆ. ಎಮ್ಮೆದೊಡ್ಡಿ ಭಾಗದ ರೈತರಿಗೆ ಸಾಗುವಳಿ ಚೀಟಿ ಕೊಡಿಸಲು ಹೋರಾಟ ಮಾಡಲಾಗುವುದು. ಅರಣ್ಯ ಇಲಾಖೆ ಅಧಿಕಾರಿಗಳು ಕೆಲವು ರೈತರಿಗೆ ಮಾತ್ರ ನೋಟಿಸ್ ನೀಡಿದ್ದು ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಈಗಾಗಲೇ ರೈತರು ತಮ್ಮ ಜಮೀನುಗಳ ಮೇಲೆ ಬ್ಯಾಂಕ್‍ಗಳಲ್ಲಿ ಸಾಲ ಪಡೆದಿದ್ದಾರೆ. ನಿವೇಶನಗಳಿಗೆ ವಿದ್ಯುತ್, ಪಂಪ್‍ಸೆಟ್‍ಗಳನ್ನು ಅಳವಡಿಸಿಕೊಂಡು ಒಕ್ಕಲು ಮಾಡುತ್ತಿದ್ದಾರೆ ಎಂಬ ಮಾಹಿತಿ ಇದ್ದರೂ ಅರಣ್ಯ ಇಲಾಖೆ ಅಧಿಕಾರಿಗಳ ವರ್ತನೆ ಖಂಡನೀಯ. ಈ ನಿಟ್ಟಿನಲ್ಲಿ ಅಧಿವೇಶನಲ್ಲಿ ರೈತ ಸಂಘಗಳ ಘಟಕಗಳಿಂದ ಸರಕಾರದ ಗಮನ ಸೆಳೆವ ಮೂಲಕ ಬೇಡಿಕೆ ಈಡೇರಿಸುವಂತೆ ಆಗ್ರಹಿಸುತ್ತೇವೆ ಎಂದರು. ಇದೇ ಸಂದರ್ಭದಲ್ಲಿ ತಾಲೂಕು ಘಟಕದ ಅಧ್ಯಕ್ಷ ಬೀರೂರು ಸೋಮಶೇಖರ್, ಜಿಲ್ಲಾ ಉಪಾಧ್ಯಕ್ಷ ನಾಗರಾಜ್, ಸುರೇಶ್, ಮಹಿಳಾ ಘಟಕದ ಅಧ್ಯಕ್ಷೆ ಅನಿತಾ, ಬೆಳ್ಳಿಗುತ್ತಿ ಮಹೇಶ್, ರಂಗೇನಹಳ್ಳಿ ಕೃಷ್ಣಮೂರ್ತಿ, ಮಲ್ಲಮ್ಮ, ರುದ್ರೇಶ್, ಶಿವಮೂರ್ತಿ, ಕುಮಾರಸ್ವಾಮಿ, ಚಂದ್ರಶೇಖರ್, ನಂಜುಂಡಪ್ಪ, ಬಾಲಕೃಷ್ಣ ಮತ್ತಿತರರು ಇದ್ದರು.13ಕೆಕೆಡಿಯುಕರ್ನಾಟಕ ರೈತ ಸಂಘ ಕಡೂರು ಶಾಖೆ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಜಿಲ್ಲಾಧ್ಯಕ್ಷ ಮೂರ್ತಿ, ಮತ್ತು ಪದಾಧಿಕಾರಿಗಳ ತಂಡ.