ಚಿಕ್ಕಮಗಳೂರುಹಾಸನ ಜಿಲ್ಲೆಯಿಂದ ಕಾಡಾನೆಗಳನ್ನು ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸಲು ಮುಂದಾದ ಸರ್ಕಾರದ ನಿರ್ಧಾರವನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ಆಜಾದ್ ವೃತ್ತದಲ್ಲಿ ರೈತ ಸಂಘದ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಹಾಸನ ಜಿಲ್ಲೆಯಿಂದ ಕಾಡಾನೆಗಳನ್ನು ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸಲು ಮುಂದಾದ ಸರ್ಕಾರದ ನಿರ್ಧಾರವನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.ನಗರದ ಆಜಾದ್ ವೃತ್ತದಲ್ಲಿ ರೈತ ಸಂಘದ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು, ಯಾವುದೇ ಕಾರಣ ಕ್ಕೂ ಹಾಸನ ಜಿಲ್ಲೆ ಕಾಡಾನೆಗಳನ್ನು ಚಿಕ್ಕಮಗಳೂರು ಜಿಲ್ಲೆಗೆ ಸ್ಥಳಾಂತರಿಸಬಾರದು ಎಂದು ಆಗ್ರಹಿಸಿದರು.ಈಗಾಗಲೇ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಾಡಾನೆಗಳ ಹಾವಳಿಯಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಬೆಳೆ ನಷ್ಟ, ಆಸ್ತಿ ಹಾನಿ ಹಾಗೂ ಜೀವಭಯದ ನಡುವೆ ಜೀವನ ಸಾಗಿಸುತ್ತಿರುವ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿ ಸುವ ಬದಲು, ಮತ್ತಷ್ಟು ಆನೆಗಳನ್ನು ಜಿಲ್ಲೆಗೆ ಸ್ಥಳಾಂತರಿಸುವ ಪ್ರಯತ್ನ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ರೈತ ಸಂಘದ ಮುಖಂಡ ಸೋಮೇಗೌಡ, ರೈತರ ಸಂಕಷ್ಟ ಅರ್ಥಮಾಡಿಕೊಳ್ಳದೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಾಡಾನೆಗಳ ಸ್ಥಳಾಂತರದ ನಿರ್ಧಾರ ಕೈಗೊಳ್ಳುತ್ತಿರುವುದು ಖಂಡನೀಯ. ಹಾಸನ ಜಿಲ್ಲೆಯ ಆನೆಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನೆಪದಲ್ಲಿ ಚಿಕ್ಕಮಗಳೂರು ಜಿಲ್ಲೆಯ ರೈತರ ಮೇಲೆ ಮತ್ತೊಂದು ಸಮಸ್ಯೆ ಹೇರುವುದು ಸರಿಯಲ್ಲ. ರೈತರ ಬದುಕು ಮತ್ತು ಕೃಷಿ ರಕ್ಷಿಸುವ ಜವಾಬ್ದಾರಿ ಸರ್ಕಾರದ್ದಾಗಿದೆ ಎಂದರು.ಕಾಡಾನೆಗಳ ದಾಳಿಯಿಂದ ಬೆಳೆ ಹಾಗೂ ಆಸ್ತಿ ನಷ್ಟವಾಗುವ ಜತೆಗೆ ರೈತರ ಜೀವಕ್ಕೂ ಅಪಾಯ ಎದುರಾಗಿದೆ. ಸರ್ಕಾರ ಮತ್ತು ಜನಪ್ರತಿನಿಧಿಗಳು ನೀಡುತ್ತಿರುವ ಭರವಸೆ ಪ್ರಯೋಜನಕ್ಕೆ ಬರುತ್ತಿಲ್ಲ. ಪರಿಹಾರದ ಭರವಸೆ ನೀಡುವುದಕ್ಕಿಂತ ಮೊದಲು ಆನೆಗಳ ಹಾವಳಿ ನಿಯಂತ್ರಿಸಿ, ರೈತರ ಕೃಷಿ ಮತ್ತು ಜೀವಕ್ಕೆ ಸೂಕ್ತ ರಕ್ಷಣೆ ಒದಗಿಸಬೇಕು. ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.ಈಗಾಗಲೇ ಕಾಡಾನೆಗಳ ಹಾವಳಿ ಜಿಲ್ಲೆಯ ರೈತರು ಹಾಗೂ ಗ್ರಾಮೀಣ ಜನರಿಗೆ ದೊಡ್ಡ ಸವಾಲು. ಇಂತಹ ಸಂದರ್ಭದಲ್ಲಿ ಮತ್ತಷ್ಟು ಆನೆಗಳನ್ನು ಸ್ಥಳಾಂತರಿಸಿದರೆ ಜನರ ಬದುಕು ಇನ್ನಷ್ಟು ದುಸ್ತರವಾಗಲಿದೆ. ಆದ್ದರಿಂದ ಸರ್ಕಾರ ಕೂಡಲೇ ಸ್ಥಳಾಂತ ರದ ಪ್ರಸ್ತಾಪ ಕೈಬಿಡಬೇಕು. ರೈತರ ವಿರೋಧದ ನಡುವೆಯೂ ಸ್ಥಳಾಂತರಕ್ಕೆ ಮುಂದಾದರೆ ರೈತ ಸಂಘದ ವತಿಯಿಂದ ಜಿಲ್ಲೆಯಾದ್ಯಂತ ತೀವ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡರಾದ ಮಹೇಶ್, ಚಂದ್ರಶೇಖರ್, ಕುಮಾರ್, ಕಾಂಗ್ರೆಸ್ ಹಿರಿಯ ಮುಖಂಡ ಎಚ್.ಎಸ್. ದೇವರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.