ಸಾರಾಂಶ
ಕನ್ನಡಪ್ರಭ ವಾರ್ತೆ ಚಾಮರಾಜನಗರ
ನ. 20 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸುವ ಮಾರ್ಗದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರೈತ ಸಂಘದ ವತಿಯಿಂದ ಚಳುವಳಿಯನ್ನು ಹಮ್ಮಿಕೊಳ್ಳಲಾಗವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಬಸವಣ್ಣ ಅವರು ಹೇಳಿದರು.ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ರೈತರ ಸಮಸ್ಯೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವರಿಕೆ ಮಾಡುವ ನಿಟ್ಟಿನಲ್ಲಿ ನ.20 ರಂದು ಚಾಮರಾಜನಗರಕ್ಕೆ ಆಗಮಿಸುವ ಸಿಎಂ ಸಿದ್ದರಾಮಯ್ಯ ಅವರಿಗೆ ಮಾರ್ಗಮದ್ಯದಲ್ಲಿ ರೈತ ಸಂಘ ಚಳುವಳಿಯನ್ನು ಹಮ್ಮಿಕೊಂಡಿದ್ದು, ಜಿಲ್ಲಾಡಳಿತ ರೈತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಅವಕಾಶ ಕಲ್ಪಿಸಬೇಕು ಎಂದರು.
ತಾಲೂಕಿನ ಪಣ್ಯದಹುಂಡಿ ಗ್ರಾಮದ ಬಳಿ ರೈಲ್ವೆ ಮೇಲ್ಲೇತುವೆ ನಿರ್ಮಾಣಕ್ಕೆ ರೈತರ ಜಮೀನುಗಳನ್ನು ಭೂಧೀನಪಡಿಸಿಕೊಂಡಿದ್ದು ಜಮೀನುಗಳಿಗೆ ಸೂಕ್ತ ಬೆಲೆ ನಿಗದಿ ಮಾಡಿಲ್ಲ. ರೈತರಿಗೆ ನೋಟಿಸ್ ಕೂಡ ನೀಡಿಲ್ಲ, ಕೂಡಲೇ ಒಂದು ಗುಂಟೆ ಜಮೀನಿಗೆ 15 ಲಕ್ಷ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.ಪಣ್ಯದಹುಂಡಿ ಗ್ರಾಮಕ್ಕೆ 4 ಸಾವಿರ ಜನರು ದಿನನಿತ್ಯ ಬರುತ್ತಿದ್ದು, ಪಣ್ಯದಹುಂಡಿ ಗ್ರಾಮದಲ್ಲಿ ಬಸ್ ನಿಲ್ದಾಣ ನಿರ್ಮಿಸಬೇಕು. ಜೊತೆಗೆ ರೈಲ್ವೆ ಅಂಡರ್‌ಪಾಸ್ ನಿರ್ಮಾಣ ಮಾಡಬೇಕು. ಸರ್ವಿಸ್ ರಸ್ತೆಯಲ್ಲಿ ಗೇಟ್ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.
ತಾಲೂಕಿನ ಹೆಗ್ಗೋಠಾರ, ಮುತ್ತಿಗೆ ಗ್ರಾಮದ ಗೋಮಾಳದಲ್ಲಿ ಗಣಿಗಾರಿಕೆ ಗುತ್ತಿಗೆಯನ್ನು ಶಾಶ್ವತವಾಗಿ ರದ್ದುಗೊಳಿಸಬೇಕು. ನಿಷ್ಕ್ರೀಯವಾಗಿರುವ ಆರ್‌ಟಿಓ ಮತ್ತು ಪಿಡಬ್ಲ್ಯೂಡಿ ಇಲಾಖೆಗಳಿಗೆ ಕಾನೂನಿಗೆ ಅನುಸಾರವಾಗಿ ಕೆಲಸ ಮಾಡುವಂತೆ ಕಟ್ಟು ನಿಟ್ಟಿನ ಕ್ರಮ ಜರುಗಿಸಬೇಕು. ಗೋಮಾಳ ಬಿಡಿಸಿಕೊಡಬೇಕು ಎಂದರು.ಕೆಲ್ಲಂಬಳ್ಳಿ, ಬದನಗುಪ್ಪೆ ಕೈಗಾರಿಕಾ ಪ್ರದೇಶ ಭೂ ಸ್ವಾಧೀನವಾಗಿರುವ ರೈತರಿಗೆ ಮಂಜೂರಾಗಿದ್ದ ಭೂಮಿಯನ್ನು ದುರಸ್ತಿ ಮಾಡದೇ ರೈತರು ಪರಿಹಾರ ಪಡೆಯಲು ಸಾಧ್ಯವಾಗಿಲ್ಲ. ಈ ಸಂಬಂಧ ಶೀಘ್ರ ಕ್ರಮವಹಿಸಬೇಕು. ಬಾಕಿ ಇರುವ ಪರಿಹಾರದ ಹಣವನ್ನು ಶ್ರೀಘ್ರದಲ್ಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಟಿಯಲ್ಲಿ ಸಂಘದ ಜಿಲ್ಲಾ ಉಪಾಧ್ಯಕ್ಷ ಪುಟ್ಟೇಗೌಡ, ಕಾರ್ಯದರ್ಶಿ ಹೆಗ್ಗೋಠಾರ ವಿಜಯ್, ತಾಲೂಕು ಅಧ್ಯಕ್ಷ ಮಹೇಶ್, ಮೇಲಾಜಿಪುರ ಕುಮಾರ್, ಸ್ವಾಮಿ ಇದ್ದರು.17ಸಿಎಚ್‌ಎನ್51
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಬಸವಣ್ಣ ಅವರು ಸುದ್ದಿಗೋಷ್ಠಿ ನಡೆಸಿದರು.;Resize=(128,128))
;Resize=(128,128))
;Resize=(128,128))