ಸಾರಾಂಶ
ಕನಗನಮರಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ನಡೆಯುತ್ತಿದೆ. ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಗ್ರಾಮದ ರಾಮೇಗೌಡ ಹಾಗೂ ನುಗ್ಗಹಳ್ಳಿ ದಿನೇಶ್ ಅವರು ಜೆಡಿಎಸ್‌ಗೆ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಬಲಬಂದಿದೆ.
ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ಕನಗನಮರಡಿ ಗ್ರಾಮದ ರಾಮೇಗೌಡ ಹಾಗೂ ನುಗ್ಗಹಳ್ಳಿ ದಿನೇಶ್ ಅವರು ರೈತಸಂಘ ತೊರೆದು ಸೋಮವಾರ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಸಮ್ಮುಖದಲ್ಲಿ ಜೆಡಿಎಸ್ ಟವಲ್ ಹಾಕಿಸಿಕೊಂಡು ಪಕ್ಷ ಸೇರ್ಪಡೆಗೊಂಡರು.ಪಟ್ಟಣದ ತಮ್ಮ ನಿವಾಸದಲ್ಲಿ ಮಾತನಾಡಿದ ಸಿ.ಎಸ್.ಪುಟ್ಟರಾಜು, ಕನಗನಮರಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ನಡೆಯುತ್ತಿದೆ. ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಗ್ರಾಮದ ರಾಮೇಗೌಡ ಹಾಗೂ ನುಗ್ಗಹಳ್ಳಿ ದಿನೇಶ್ ಅವರು ಜೆಡಿಎಸ್‌ಗೆ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಬಲಬಂದಿದೆ. ಚುನಾವಣೆಯಲ್ಲಿ ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಲಿದ್ದಾರೆ ಎನ್ನುವ ವಿಶ್ವಾಸವಿದೆ ಎಂದರು.
ಈ ವೇಳೆ ಮುಖಂಡರಾದ ಚಿಕ್ಕಾಡೆ ಚೇತನ್, ಮೈಷುಗರ್ ಮಾಜಿ ಅಧ್ಯಕ್ಷ ಶಿವಲಿಂಗೇಗೌಡ, ಬಿಜೆಪಿ ಮಹಿಳಾ ಜಿಲ್ಲಾಧ್ಯಕ್ಷೆ ಮಂಗಳ ನವೀನ್‌ಕುಮಾರ್, ಜೆಡಿಎಸ್ ಮುಖಂಡರಾದ ಪುಟ್ಟೇಗೌಡ, ಬೊಮ್ಮರಾಜು, ವಾಸುದೇವ್, ಹೇವಣ್ಣ ಸೇರಿದಂತೆ ಕನಗನಮರಡಿ, ಚಿಕ್ಕಮರಳಿ, ನುಗ್ಗಹಳ್ಳಿಯ ಜೆಡಿಎಸ್- ಬಿಜೆಪಿ ಮುಖಂಡರು ಹಾಜರಿದ್ದರು.ಇಂದು ವಿದ್ಯುತ್ ವ್ಯತ್ಯಯ
ಮಂಡ್ಯ: ನಗರದ ಹೊರವಲಯದ ಚಿಕ್ಕಮಂಡ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಜೆ.ಪಿ ಎಕ್ಸ್ಪ್ರೆಸ್ ಫೀಡರ್‌ನಲ್ಲಿ ಲಿಂಕ್‌ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.8 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ನಿಲುಗಡೆಗೊಳಿಸಲಾಗುವುದು. ತಾಲೂಕಿನ ಚಿಂದಗಿರಿದೊಡ್ಡಿ, ಚಿಕ್ಕಮಂಡ್ಯ, ಗೋಪಾಲಪುರ, ಎಚ್.ಕೋಡಿಹಳ್ಳಿ, ಹೆಚ್.ಮಲ್ಲಿಗೆರೆ, ಜೀಗುಂಡಿಪಟ್ಟಣ, ಕೆ.ಗೌಡಗೆರೆ, ಎಸ್.ಐ.ಕೋಡಿಹಳ್ಳಿ, ಹುಲಿವಾನ, ಹೊನಗಾನಹಳ್ಳಿ, ಕೊಮ್ಮೇರಹಳ್ಳಿ, ಸಾತನೂರು ಹಾಗೂ ಈ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯ ನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಮಂಡ್ಯ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಜಲ ಜೀವನ್ ಮಿಷನ್ ಮತ್ತು ಸ್ವಚ್ಛ ಭಾರತ್ ಮಿಷನ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಏ.8 ರಂದು ಬೆಳಗ್ಗೆ 11:30ಕ್ಕೆ ನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.