ಗ್ರಾಮಾಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರೈತ ಸಂಘದ ಬೆಂಬಲ

| Published : Feb 14 2025, 12:32 AM IST

ಗ್ರಾಮಾಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರೈತ ಸಂಘದ ಬೆಂಬಲ
Share this Article
  • FB
  • TW
  • Linkdin
  • Email

ಸಾರಾಂಶ

ಕಡೂರು, ಸಮಸ್ಯೆಗಳನ್ನು ಪರಿಹರಿಸಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ಗ್ರಾಮಾಡಳಿತದ ಅಧಿಕಾರಿಗಳು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೆಂಬಲ ವ್ಯಕ್ತಪಡಿಸಿವೆ

ಕನ್ನಡಪ್ರಭ ವಾರ್ತೆ ಕಡೂರು

ಸಮಸ್ಯೆಗಳನ್ನು ಪರಿಹರಿಸಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ಗ್ರಾಮಾಡಳಿತದ ಅಧಿಕಾರಿಗಳು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೆಂಬಲ ವ್ಯಕ್ತಪಡಿಸಿವೆ.

ಗುರುವಾರ ಗ್ರಾಮ ಆಡಳಿತ ಅಧಿಕಾರಿಗಳು ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ರೈತ ಮುಖಂಡರು ಬೆಂಬಲ ಘೋಷಿಸಿ ಮಾತನಾಡಿದರು. ಧರಣಿಯಲ್ಲಿ ಭಾಗವಹಿಸಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಬಾಸೂರು ರವಿ ಮಾತನಾಡಿ, ಗ್ರಾಮ ಆಡಳಿತ ಅಧಿಕಾರಿಗಳು ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ 4 ದಿನಗಳಿಂದ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದು, ಹಲವು ಒತ್ತಡಗಳ ನಡುವೆಯೇ ಗ್ರಾಮ ಆಡಳಿತದ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

ಮುಷ್ಕರದಿಂದ ಸಾರ್ವಜನಿಕರ ಮೇಲೆ ಪರಿಣಾಮ ಬೀರಿದ್ದು, ಅವರಿಗೆ ಸಿಗಬೇಕಾಗಿರುವ ಎಲ್ಲ ರೀತಿಯ ಸವಲತ್ತುಗಳು ಹಾಗೂ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿ ಕೂಡಲೇ ಸೌಲಭ್ಯ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು.ಸರಕಾರ ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆ ಈಡೇರಿಸದೆ ಹೋದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರದಲ್ಲಿ ಕೈ ಜೋಡಿಸಿ ಹೋರಾಟಕ್ಕೆ ಮುಂದಾಗುತ್ತೇವೆ ಎಂದರು.ಮುಷ್ಕರದ ಹಿನ್ನಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗಳ ಈಡೇರಿಕೆಗೆ ಪ್ರಭಾರ ತಹಸೀಲ್ದಾರ್ ಎನ್.ಆರ್. ಮಂಜುನಾಥಸ್ವಾಮಿ ಮೂಲಕ ರಾಜ್ಯ ಸರಕಾರಕ್ಕೆ ರೈತ ಮುಖಂಡರು ಮನವಿ ಸಲ್ಲಿಸಿದರು.

ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷ ಎಸ್.ಕೆ. ರವೀಂದ್ರ, ಜಿಲ್ಲಾ ಪ್ರಧಾನ ಸಂಚಾಲಕ ಸಿದ್ದಪ್ಪ, ಲಿಂಗರಾಜು, ಶೃತಿ, ಸಂತೋಷ್‍ ಕುಮಾರ್, ಲಿಂಗರಾಜು,ಬಿ.ಎಂ.ಕುಮಾರ್, ಬಿ.ಎಂ.ರಮೇಶ್, ತೇಜಸ್, ಸುಮಾ, ರಂಜಿತಾ, ರೈತ ಸಂಘದ ಮುಖಂಡರಾದ ಮೂಡ್ಲಪ್ಪ, ದೇವಋಷಿ ಮತ್ತಿತರರು ಇದ್ದರು..13ಕೆಕೆಡಿಯು2.

ಕಡೂರು ತಾಲೂಕು ಕಚೇರಿ ಆವರಣದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರದಲ್ಲಿ ಬೆಂಬಲ ವ್ಯಕ್ತಪಡಿಸಿದ ರೈತ ಸಂಘದಿಂದ ಪ್ರಭಾರೆ ತಹಸೀಲ್ದಾರ್ ಎನ್.ಆರ್. ಮಂಜುನಾಥ ಸ್ವಾಮಿ ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು. ಬಾಸೂರು ರವಿ, ಮೂಡ್ಲಪ್ಪ, ದೇವಋಷಿ, ಎಸ್.ಕೆ.ರವೀಂದ್ರ, ಸಿದ್ದಪ್ಪ, ಲಿಂಗರಾಜು, ಸಂತೋಷ್‍ಕುಮಾರ್, ರಮೇಶ್, ತೇಜಸ್ ಮತ್ತಿತರಿದ್ದರು.