ಜಾನುವಾರು ಜಾತ್ರೆಯಿಂದ ರೈತರಿಗೆ ಅನುಕೂಲ: ಶಾಸಕ ಚಿಮ್ಮನಕಟ್ಟಿ

| Published : Feb 06 2024, 01:31 AM IST

ಸಾರಾಂಶ

ಬಾದಾಮಿ: ಕರೋನಾ ಸೇರಿದಂತೆ ವಿವಿಧ ಕಾರಣಗಳಿಂದ ಕಳೆದ ಎರಡು ಮೂರು ವರ್ಷಗಳಿಂದ ಜಾನುವಾರು ಜಾತ್ರೆ ನಡೆದಿರಲಿಲ್ಲ. ಈ ಬಾರಿ ಜಾನುವಾರು ಜಾತ್ರೆಯಿಂದ ರೈತರಿಗೆ ಅನುಕೂಲವಾಗಿದೆ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು. ನಗರದ ಹೊರವಲಯದ ಎಪಿಎಂಸಿ ಆವರಣದಲ್ಲಿ ನಡೆದ ಬನಶಂಕರಿದೇವಿ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ಜಾನುವಾರು ಜಾತ್ರೆಯಲ್ಲಿ ಉತ್ತಮ ರಾಸುಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಬಾದಾಮಿ

ಕರೋನಾ ಸೇರಿದಂತೆ ವಿವಿಧ ಕಾರಣಗಳಿಂದ ಕಳೆದ ಎರಡು ಮೂರು ವರ್ಷಗಳಿಂದ ಜಾನುವಾರು ಜಾತ್ರೆ ನಡೆದಿರಲಿಲ್ಲ. ಈ ಬಾರಿ ಜಾನುವಾರು ಜಾತ್ರೆಯಿಂದ ರೈತರಿಗೆ ಅನುಕೂಲವಾಗಿದೆ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.

ನಗರದ ಹೊರವಲಯದ ಎಪಿಎಂಸಿ ಆವರಣದಲ್ಲಿ ನಡೆದ ಬನಶಂಕರಿದೇವಿ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ಜಾನುವಾರು ಜಾತ್ರೆಯಲ್ಲಿ ಉತ್ತಮ ರಾಸುಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು. ಶಾಸಕರು ಚಾಂಪಿಯನ್ ಹೋರಿಗೆ 10 ಗ್ರಾಂ ಚಿನ್ನದ ಪದಕ ನೀಡಿ ಸನ್ಮಾನಿಸಿದರು. ಉತ್ತಮ ರಾಸುಗಳಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನಗಳನ್ನು ವಿತರಿಸಿದರು. ಎಪಿಎಂಸಿ ಕಾರ್ಯದರ್ಶಿ ರವಿ ರಾಠೋಡ, ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀಕಾಂತ ಸಬನೀಸ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಅಶೋಕ ತಿರಕನ್ನವರ, ಮುಖಂಡರಾದ ಶಿವುಕುಮಾರ ಹಿರೇಮಠ, ಪುರಸಭೆ ಸದಸ್ಯ ಮಂಜುನಾಥ ಹೊಸಮನಿ, ಎಪಿಎಂಸಿ ಸಹಕಾರ್ಯದರ್ಶಿ ಸಿ.ಎಸ್. ಅಂಗಡಿ, ಸಿಬ್ಬಂದಿ ಸೇರಿದಂತೆ ಇತರರು ಹಾಜರಿದ್ದರು.