ತಾಳಿಕೋಟೆ ತಾಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಆಗ್ರಹಿಸಿ ಪಟ್ಟಣದ ಪ್ರವಾಸಿ ಮಂದಿರದ ಪಕ್ಕದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಕಳೆದ ೨೧ ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾಧಿ ಧರಣಿ ಸತ್ಯಾಗ್ರಹವನ್ನು ಸರ್ಕಾರದ ಆದೇಶದ ಹಿನ್ನೆಲೆ ರೈತರು ಬುಧವಾರ ಹಿಂಪಡೆದರು.
ಕನ್ನಡಪ್ರಭ ವಾರ್ತೆ ತಾಳಿಕೋಟೆ
ತಾಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಆಗ್ರಹಿಸಿ ಪಟ್ಟಣದ ಪ್ರವಾಸಿ ಮಂದಿರದ ಪಕ್ಕದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಕಳೆದ ೨೧ ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾಧಿ ಧರಣಿ ಸತ್ಯಾಗ್ರಹವನ್ನು ಸರ್ಕಾರದ ಆದೇಶದ ಹಿನ್ನೆಲೆ ರೈತರು ಬುಧವಾರ ಹಿಂಪಡೆದರು.ಧರಣಿ ಸ್ಥಳಕ್ಕೆ ಆಗಮಿಸಿದ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಹಾಗೂ ತಹಸೀಲ್ದಾರ್ ಎಂ.ಎಚ್. ಅರಕೇರಿ ಅವರು, ತಾಳಿಕೋಟೆ ತಾಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಿರುವ ಸರ್ಕಾರದ ಆದೇಶದ ಪ್ರತಿಯನ್ನು ಧರಣಿ ನಿರತ ರೈತ ಮುಖಂಡರಿಗೆ ಹಸ್ತಾಂತರಿಸಿದರು.
ರೈತರ ಹೋರಾಟಕ್ಕೆ ಸರ್ಕಾರ ಸ್ಪಂದಿಸಿದ್ದು, ತಾಳಿಕೋಟೆ ತಾಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಪರಿಗಣಿಸಿ ಆದೇಶ ಹೊರಡಿಸಿದೆ. ಕಳೆದ ೨೧ ದಿನಗಳಿಂದ ರೈತರು ಹಗಲು-ರಾತ್ರಿ ನಡೆಸಿದ ಹೋರಾಟಕ್ಕೆ ಜಯ ಸಿಕ್ಕಿದೆ. ಆದೇಶದ ಪ್ರತಿಯನ್ನು ಸ್ವೀಕರಿಸಿ ಧರಣಿ ಹಿಂಪಡೆಯುವಂತೆ ಮನವಿ ಮಾಡಿದರು. ಅಧಿಕಾರಿಗಳ ಮನವಿಯ ಮೇರೆಗೆ ರೈತ ಮುಖಂಡರು ಧರಣಿಯನ್ನು ಹಿಂಪಡೆದರು.ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿದರು. ಪಿಎಸ್‌ಐ ಜ್ಯೋತಿ ಖೋತ್, ತಾಳಿಕೋಟೆ ಕೃಷಿ ಅಧಿಕಾರಿ ಮಹೇಶ ಜೋಶಿ, ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ವಿಠ್ಠಲ ಬಿರಾದಾರ, ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪುರ, ಜಿಲ್ಲಾ ಸಂಚಾಲಕ ಪಾಂಡು ಹ್ಯಾಟಿ, ತಾಲೂಕು ಅಧ್ಯಕ್ಷ ಬಾಲಪ್ಪಗೌಡ ಲಿಂಗದಳ್ಳಿ, ಉಪಾಧ್ಯಕ್ಷ ರಾಮನಗೌಡ ಹಾದಿಮನಿ, ಬಸವರಾಜ ಹೊಸಳ್ಳಿ, ಹನಮಂತರಾಯ ಹಂದ್ರಾಳ, ಮಡಿವಾಳಪ್ಪ ಕಲಬುರಗಿ, ಸಂಗನಗೌಡ ಟಕ್ಕಳಕಿ, ಪಾರತಗೋಳ, ಶಾಂತಗೌಡ ಬಿರಾದಾರ, ನ್ಯಾಯವಾದಿಗಳಾದ ಪ್ರಭಾಕರ ಗುಡಗಂಟಿ, ಸಂಗನಗೌಡ ಕೋಲೂರ, ಮಾಂತಗೌಡ ಮುದ್ದೂರ, ಅರುಣ ಹೊಸಮನಿ, ಚನ್ನನಗೌಡ ಬಿರಾದಾರ, ಆನಂದ ಲಿಂಗದಳ್ಳಿ ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.