ತಿರುಚಿಯಲ್ಲಿ ರಾಷ್ಟ್ರೀಯ ರೈತ ಸಮಾವೇಶಕ್ಕೆ ಕರ್ನಾಟಕದ ರೈತರ ಪ್ರಯಾಣ

| Published : Aug 28 2024, 01:03 AM IST

ಸಾರಾಂಶ

ದೇಶಾದ್ಯಂತ ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿ,

ಕನ್ನಡಪ್ರಭ ವಾರ್ತೆ ಮೈಸೂರು

ತಮಿಳುನಾಡಿನ ತಿರುಚಿಯಲ್ಲಿ ನಡೆದ ರಾಷ್ಟ್ರೀಯ ರೈತ ಸಮಾವೇಶದಲ್ಲಿ ಭಾಗವಹಿಸಲು ಕರ್ನಾಟಕದಿಂದ ನೂರಾರು ರೈತರು ಮೈಸೂರಿನಿಂದ ರೈಲು ಮೂಲಕ ತೆರಳಿದರು.ಈ ವೇಳೆ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ದಕ್ಷಿಣ ಭಾರತ ಸಂಚಾಲಕ ಕುರುಬೂರು ಶಾಂತಕುಮಾರ್ ಮಾತನಾಡಿ, ದೇಶಾದ್ಯಂತ ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿ, ರೈತರ ಸಂಪೂರ್ಣ ಸಾಲಮನ್ನಾ, ಡಾ. ಸ್ವಾಮಿನಾಥನ್ ವರದಿ ಜಾರಿ ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟ ಪ್ರಬಲಗೊಳಿಸಲು, ಮುಂದಿನ ಹೋರಾಟದ ಬಗ್ಗೆ ತೀರ್ಮಾನಿಸಲಾಗುವುದು ರಾಷ್ಟ್ರದ ಎಲ್ಲಾ ರಾಜ್ಯಗಳ ರೈತ ಮುಖಂಡರು ಈ ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ತಿಳಿಸಿದರು.ಕೇಂದ್ರ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಮುಖಂಡರಿಗೆ ತಮಿಳುನಾಡಿನ ರಾಷ್ಟ್ರೀಯ ರೈತ ಸಮಾವೇಶಕ್ಕೆ ಬರಲು ಅವಕಾಶ ಕಲ್ಪಿಸದಿದ್ದರೆ ದೇಶಾದ್ಯಂತ ಹೋರಾಟಕ್ಕೆ ಕರೆ ಕೊಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.ರೈತ ಮುಖಂಡರಾದ ಅತ್ತಹಳ್ಳಿ ದೇವರಾಜ್, ಸಿಂಧುವಳ್ಳಿ ಬಸವಣ್ಣ, ಉದಿಗಾಲ ರೇವಣ್ಣ, ಸುಂದ್ರಪ್ಪ, ನಂಜದೇವನಪುರ ಸತೀಶ್, ದೊಡ್ಡ ಇಂದುವಾಡಿ ಮಾದೇಶ್, ಅಂಬಳೆ ಮಂಜುನಾಥ್, ಶಿವಸ್ವಾಮಿ ಹೆಗ್ಗೂಟ್ಟಾರ, ದೇವನೂರು ಮಹದೇವಸ್ವಾಮಿ, ಕಾಟೂರು ನಾಗೇಶ್, ರಾಜಶೇಖರಪ್ಪ ಮೊದಲಾದವರು ಇದ್ದರು.