ಸಾರಾಂಶ
ನ. 18 ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ನೂರಾರು ರೈತಸಂಘದ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ
ಕೆರೆಗಳಿಗೆ ನೀರು ತುಂಬಿಸಬೇಕು ಹಾಗೂ ಸಾಗುವಳಿ ಚೀಟಿ ನೀಡಬೇಕು ಎಂದು ಕೆ.ಎಸ್.ಪುಟ್ಟಣ್ಣಯ್ಯ ಬಣದ ರೈತಸಂಘ ಕಾರ್ಯಕರ್ತರು ಪಟ್ಟಣದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ 35ನೇ ದಿನಕ್ಕೇ ಕಾಲಿಟ್ಟಿದ್ದು, ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರದ ಮೌನ ಖಂಡಿಸಿ ನ. 18 ರ ಮಂಗಳವಾರ ಪಟ್ಟಣದಲ್ಲಿ ಬಹಿರಂಗ ಪ್ರತಿಭಟನಾ ಸಮಾವೇಶ ನಡೆಯಲಿದೆ ಎಂದು ಜಿಲ್ಲಾ ರೈತಸಂಘಧ ಅಧ್ಯಕ್ಷ ಶಿವಪುರ ಮಹದೇವಪ್ಪ ತಿಳಿಸಿದ್ದಾರೆ.ಪಟ್ಟಣದ ತಾಲೂಕು ಕಚೇರಿಯಲ್ಲಿ ನಡೆಯುತ್ತಿರುವ ಅಹೋ ರಾತ್ರಿ ಧರಣಿಯಲ್ಲಿ ಮಾತನಾಡಿದ ಅವರು ನ. 18 ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ನೂರಾರು ರೈತಸಂಘದ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.
ಸಮಾವೇಶದಲ್ಲಿ ರೈತಸಂಘದ ರಾಜ್ಯ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್, ಮೇಲು ಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಡಿ. ವಸಂತಕುಮಾರ್, ಕಾರ್ಯಾಧ್ಯಕ್ಷರಾದ ಜಿ.ಎಂ.ವೀರಸಂಗಯ್ಯ, ಎ.ಎಂ.ಮಹೇಶ್ ಪ್ರಭು, ಉಪಾಧ್ಯಕ್ಷರಾದ ಕೆಂಪೂಗೌಡ, ಕೆ.ಮಲ್ಲಯ್ಯ, ರೈತ ಸಂಘದ ಪ್ರಮುಖರಾದ ಕೃಷ್ಣಯ್ಯ, ಬಸವಣ್ಣ,ಯಶವಂತ್ ಜೆ., ಮಹೇಶ್ ಕುಮಾರ್, ಹೊಸಕೋಟೆ ಬಸವರಾಜು, ಸಿ.ಸಿದ್ದರಾಜು, ಶಂಕರ್ ಗೌಡ, ಮಹಿಳಾ ಘಟಕದ ಉಪಾಧ್ಯಕ್ಷೆ ಮಂಜುಳ ಅಕ್ಕಿ ಸೇರಿದಂತೆ ಮೈಸೂರು ಪ್ರಾಂತದ ರೈತ ಸಂಘದ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಆಗಮಿಸಲಿದ್ದಾರೆ ಎಂದರು.ಕೆರೆಗಳಿಗೆ ನೀರು ತುಂಬಿಸಬೇಕು ಹಾಗೂ ಸಾಗುವಳಿ ಚೀಟಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಅ. 13ರಂದು ಆರಂಭಗೊಂಡ ಅಹೋ ರಾತ್ರಿ ಧರಣಿ ನಿರಂತರವಾಗಿ ನಡೆಯುತ್ತಿದೆ ಆದರೂ ಜಿಲ್ಲಾಡಳಿತ ಜಾಣ ಮೌನ ವಹಿಸಿ ಚಳುವಳಿಗೆ ಅಗೌರವ ತೋರಿದೆ ಎಂದು ಆರೋಪಿಸಿದರು.
ಪ್ರತಿಭಟನೆ ಸಮಯದಲ್ಲಿ ತಾಲೂಕು ರೈತ ಸಂಘದ ಅಧ್ಯಕ್ಷ ಹಂಗಳ ದಿಲೀಪ್, ಪ್ರಧಾನ ಕಾರ್ಯದರ್ಶಿ ಶಿವಣ್ಣ, ಉಪಾಧ್ಯಕ್ಷ ಪ್ರಕಾಶ್, ಮುಖಂಡರಾದ ನಾಗರಾಜಪ್ಪ, ಸ್ವಾಮಿ ನಿಟ್ರೆ, ಮಹದೇವಪ್ಪ, ಸೋಮಶೇಖರ್ ಸೇರಿದಂತೆ ಹಲವರಿದ್ದರು.ತಾಲೂಕು ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ರೈತರು ಸಮಾವೇಶಕ್ಕೆ ಆಗಮಿಸಲಿದ್ದು, ತಾಲೂಕು ರೈತರು ಪಕ್ಷಾತೀತವಾಗಿ ಆಗಮಿಸಿ ಸಮಾವೇಶ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.೧೭ಜಿಪಿಟಿ೪
ಗುಂಡ್ಲುಪೇಟೆಯಲ್ಲಿ ರೈತಸಂಘದ ಅಹೋ ರಾತ್ರಿ ಧರಣಿ 34ನೇ ದಿನಕ್ಕೆ ಕಾಲಿಟ್ಟಿದೆ.ಇಂದು ಕೆಡಿಪಿ ಸಭೆಗುಂಡ್ಲುಪೇಟೆ : ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅಧ್ಯಕ್ಷತೆಯಲ್ಲಿ ಬರುವ ನ. 18ರಂದು ಕರ್ನಾಟಕ ಅಭಿವೃದ್ಧಿ ತ್ರೈ ಮಾಸಿಕ (ಕೆಡಿಪಿ) ಸಭೆ ನಡೆಯಲಿದೆ.
ಪಟ್ಟಣದ ತಾಲೂಕು ಕಚೇರಿ ಸಭಾ ಭವನದಲ್ಲಿ ನ. 18 ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ಏರ್ಪಡಿಸಲಾಗಿದೆ ಎಂದು ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.;Resize=(128,128))
;Resize=(128,128))
;Resize=(128,128))