ಆ.16, 17ರಂದು ರೈತ ಸಮಾವೇಶ, ರೈತ ಕಲ್ಯಾಣೋತ್ಸವ

| Published : Jul 02 2025, 12:20 AM IST

ಸಾರಾಂಶ

ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆ ವತಿಯಿಂದ ಆ.16 ಮತ್ತು 17ರಂದು ದಾವಣಗೆರೆಯಲ್ಲಿ ರೈತ ಸಮಾವೇಶ ಹಾಗೂ 1008 ರೈತ ಕಲ್ಯಾಣೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಾವೇಶದ ಜಿಲ್ಲಾ ಉಪಾಧ್ಯಕ್ಷ ಎಂ. ವಾಸಪ್ಪ ಹೇಳಿದ್ದಾರೆ.

- ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಎಂ.ವಾಸಪ್ಪ ಮಾಹಿತಿ । ದಾವಣಗೆರೆಯಲ್ಲಿ ಆಯೋಜನೆ

- - -

ಕನ್ನಡಪ್ರಭ ವಾರ್ತೆ ಹೊನ್ನಾಳಿ

ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆ ವತಿಯಿಂದ ಆ.16 ಮತ್ತು 17ರಂದು ದಾವಣಗೆರೆಯಲ್ಲಿ ರೈತ ಸಮಾವೇಶ ಹಾಗೂ 1008 ರೈತ ಕಲ್ಯಾಣೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಾವೇಶದ ಜಿಲ್ಲಾ ಉಪಾಧ್ಯಕ್ಷ ಎಂ. ವಾಸಪ್ಪ ಹೇಳಿದರು.

ಪಟ್ಟಣದ ಡಾ. ಎಚ್. ಚನ್ನಯ್ಯ ಕಾಂಪ್ಲೆಕ್ಸ್‌ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಲ್ಯಾಣೋತ್ಸವ ಸಮಾವೇಶ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯಾಧ್ಯಕ್ಷ ಬಿ.ಟಿ. ಚಂದ್ರಶೇಖರ್ ವಿಶೇಷವಾಗಿ ರೈತ ಸಮುದಾಯ ಮತ್ತು ಎಲ್ಲ ವರ್ಗದ ಬಡವರಿಗೆ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ರೈತ ಸಮಾವೇಶದಲ್ಲಿ ಸಾಮೂಹಿಕ ವಿವಾಹ ಆಗಬಯಸುವವರಿಂದ ದಾಖಲಾತಿಗಳ ವಿವರ ಪಡೆದು, ಹೆಸರು ನೋಂದಣಿ ಮಾಡಿಕೊಳ್ಳಲಾಗುವುದು. ಆ.17ರಂದು ವಿವಾಹ ಕಾರ್ಯಕ್ರಮ ನಡೆಯಲಿದೆ ಎಂದರು.

ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗಿದೆ. ಜಿಲ್ಲೆಯ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರಿಗೂ ಆಹ್ವಾನಿಸಲಾಗಿದ್ದು, ಭಾಗವಹಿಸಲು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಸಂಬಂಧ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳ ಘಟಕಗಳನ್ನು ರಚನೆ ಮಾಡಲಾಗಿದೆ ಎಂದರು.

ನೂತನ ಪದಾಧಿಕಾರಿಗಳು:

ಹೊನ್ನಾಳಿ ತಾಲೂಕಿನ ಕಾರ್ಯಾಧ್ಯಕ್ಷರಾಗಿ ರಮೇಶ್ ಹನಗವಾಡಿ, ಅಧ್ಯಕ್ಷರಾಗಿ ಚಿ.ನಾ. ವಸಿಷ್ಠ, ನ್ಯಾಮತಿ ತಾಲೂಕಿನ ಕರಿಬಸಪ್ಪ ದೊಡ್ಡೇತ್ತಿನಹಳ್ಳಿ ಅವರನ್ನು ಆಯ್ಕೆ ಮಾಡಲಾಯಿತು. ಹೊನ್ನಾಳಿ ತಾಲೂಕು ಮಹಿಳಾ ಅಧ್ಯಕ್ಷರಾಗಿ ರೂಪಾ, ನ್ಯಾಮತಿ ತಾಲೂಕು ಅಧ್ಯಕ್ಷರಾಗಿ ಮೀನಾಕ್ಷಿ ಅವರನ್ನು ಆಯ್ಕೆ ಮಾಡಲಾಯಿತು ಎಂದರು.

ಈ ಸಂದರ್ಭ ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ವೀಣಾ, ಉಪಾಧ್ಯಕ್ಷೆ ಸುಜಾತ, ರಾಜ್ಯ ಸಂಚಾಲಕ ಸಿದ್ದೇಶ್, ಜಿಲ್ಲಾ ಸಂಚಾಲಕ ಸಿ. ನಾಗರಾಜ್, ರಾಜ್ಯ ಸಂಘಟನಾ ಕಾರ್ಯದರ್ಶಿ ಎಸ್.ಎಸ್. ಸುವರ್ಣಮ್ಮ, ಚನ್ನಗಿರಿ ತಾಲೂಕು ಅಧ್ಯಕ್ಷರು, ಪದಾಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.

ಹೆಚ್ಚಿನ ಮಾಹಿತಿಗೆ ರಾಜ್ಯ ಅಧ್ಯಕ್ಷರಾದ ಬಿ.ಟಿ. ಚಂದ್ರಶೇಖರ್- ಮೊ.73382- 51999, ಜಿಲ್ಲಾಧ್ಯಕ್ಷೆ ವೀಣಾ- ಮೊ.72597- 83305, ಜಿಲ್ಲಾ ಉಪಾಧ್ಯಕ್ಷ ಎಂ.ವಾಸಪ್ಪ- ಮೊ-8050399487 ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.

- - -

-30ಎಚ್.ಎಲ್.ಐ1.ಜೆಪಿಜಿ:

ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕು ಘಟಕಗಳಿಗೆ ಆಯ್ಕೆಯಾದವರನ್ನು ಅಭಿನಂದಿಸಲಾಯಿತು.