ಸಾರಾಂಶ
ಕನ್ನಡಪ್ರಭ ವಾರ್ತೆ ಕೋಲಾರ
ಸಾಗುವಳಿ ಚೀಟಿ ಹೊಂದಿದ್ದ ರೈತರ ಸಾವಿರಾರು ಎಕರೆ ಮಾವಿನ ತೋಪುಗಳನ್ನು ಸೇರಿದಂತೆ ತರಕಾರಿ ಬೆಳೆಗಳನ್ನು ತೆರವುಗೊಳಿಸಿದ ಅರಣ್ಯ ಉಪ ಸಂರಕ್ಷಣಾಧಿಕಾರಿ ಏಡುಕೊಂಡಲು ಹಾಗೂ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ಸಂಯುಕ್ತ ಹೋರಾಟ ಸಮಿತಿ ಹಾಗೂ ರೈತರು ಜಿಲ್ಲಾಧಿಕಾರಿ ಕಚೇರಿ ಸಮೀಪ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು..ಹೈಕೋರ್ಟ್ ವಕೀಲ ಶಿವಪ್ರಕಾಶ್ ಮಾತನಾಡಿ, ರೈತರಿಗೆ ಸರಕಾರವೇ ಕಾನೂನು ಪ್ರಕಾರ ಹಕ್ಕು ಪತ್ರಗಳನ್ನು ನೀಡಿದ್ದರೂ ಸಹ ಅವರ ಜಮೀನುಗಳನ್ನು ಅಕ್ರಮವಾಗಿ ದೌರ್ಜನ್ಯದಿಂದ ರೈತರಿಂದ ಸ್ವಾಧೀನಕ್ಕೆ ಪಡೆದು, ಕೋಟ್ಯತರ ರೂ.ಗಳ ಮೌಲ್ಯದ ಮಾವಿನ ಮರಗಳು ತರಕಾರಿ ಬೆಳೆಗಳನ್ನು ನಾಶಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.
ಸರ್ವಾಧಿಕಾರಿ ಧೋರಣೆಲಕ್ಷಾಂತರ ಮಾವಿನ ಮರಗಳನ್ನು ಕಡಿದು ಹಾಕಿದ ಅರಣ್ಯ ಅಧಿಕಾರಿಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಇದು ಒಂದು ರೀತಿಯಲ್ಲಿ ಜಿಲ್ಲೆಯಲ್ಲಿ ಸರ್ವಾಧಿಕಾರಿ ದೋರಣೆಯ ರೀತಿಯಲ್ಲಿ ನಡೆದುಕೊಂಡಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಜನರ ರೈತರ ಬಗ್ಗೆ ಇಚ್ಛಾಶಕ್ತಿ ಇಲ್ಲವಾಗಿದೆ, ಜಿಲ್ಲೆಯ ಚರಿತ್ರೆ ತಿಳಿದು ಗೌರವ ಕೊಡುವುದನ್ನು ಅಧಿಕಾರಿಗಳು ಕಲಿಯಬೇಕು. ಮೊದಲೇ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳು ಬರಪೀಡಿತ ಪ್ರದೇಶವಾಗಿದ್ದು ಅತಿ ಕಡಿಮೆ ನೀರು ಬಳಕೆ ಮಾಡಿ ಹಣ್ಣು ತರಕಾರಿಗಳನ್ನು ಬೆಳೆದು ಜೀವನ ನಡೆಸುತ್ತಿದ್ದಾರೆ, ಇಂತಹ ಸಂದರ್ಭದಲ್ಲಿ ರೈತರ ಜಮೀನುಗಳಿಗೆ ನುಗ್ಗಿ ಏಕಾಏಕಿ ದೌರ್ಜನ್ಯದಿಂದ ಜಮೀನನ್ನು ವಶಪಡಿಸಿಕೊಂಡಿದ್ದಾರೆ, ಇದು ರೈತರಿಗೆ ಹಾಗೂ ಪ್ರಕೃತಿಗೆ ಮಾಡಿದ ದ್ರೋಹ ಎಂದರು.ಡಿಎಫ್‌ಒ ವಿರುದ್ಧ ಕ್ರಮಕ್ಕೆ ಆಗ್ರಹ
ಕೆ.ಪಿ.ಆರ್.ಎಸ್ ರಾಜ್ಯ ಉಪಾಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಮಾತನಾಡಿ, ಜಿಲ್ಲಾ ಅರಣ್ಯಾಧಿಕಾರಿ ಏಡುಕೊಂಡಲು ಹಾಗೂ ಅರಣ್ಯ ಮತ್ತು ಪೋಲಿಸ್ ಇಲಾಖೆಯ ಅಧಿಕಾರಿಗಳು ಮಾವಿನ ಮರಗಳ ಮಾರಣ ಹೋಮ ಮಾಡಿದ್ದಾರೆ, ಕೋಲಾರ ಜಿಲ್ಲೆಯಲ್ಲಿ ಇತಿಹಾಸ ಪುಟಗಳಲ್ಲಿ ರೈತರಿಗೆ ಮಾಡಿದ ದೊಡ್ಡ ದ್ರೋಹದ ಘಟನೆಯಾಗಿದೆ. ಡಿಎಫ್‌ಒ ಏಡುಕೊಂಡಲು ಅವರು ಸಂವಿಧಾನ ಬದ್ದ ಕಾನೂನುಗಳನ್ನು ಧಿಕ್ಕರಿಸಿ ಮರಗಳನ್ನು ನಾಶಪಡಿಸಿದ್ದಾರೆ. ಇವರಿಗೆ ಅರಣ್ಯ ಅಧಿಕಾರಿಯಾಗಿ ಮುಂದುವರೆಯುವಂತಹ ಯಾವುದೇ ನೈತಿಕತೆ ಇಲ್ಲ. ಕೂಡಲೇ ಸರ್ಕಾರವು ಬೇರೆ ಜಿಲ್ಲೆಗೆ ವರ್ಗಾಯಿಸಬೇಕು ಮತ್ತು ಇವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.ಮನವಿ ಪತ್ರ ಸ್ವೀಕರಿಸಲು ಜಿಲ್ಲಾಧಿಕಾರಿ ಪರವಾಗಿ ಉಪವಿಭಾಗಾಧಿಕಾರಿ ವೆಂಕಟಲಕ್ಷ್ಮೀ ಆಗಮಿಸಿದ್ದರು ಆದರೆ ಸ್ಥಳಕ್ಕೆ ಜಿಲ್ಲಾಧಿಕಾರಿಯೇ ಬರಬೇಕು ಎಂದು ಪಟ್ಟು ಹಿಡಿದು ಒತ್ತಾಯಿಸಿದಾಗ ಎಸಿ ಅಲ್ಲಿಂದ ನಿರ್ಗಮಿಸಿದರು ನಂತರ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಮನವಿ ಸಲ್ಲಿಸಿದರುಜಂಟಿ ಸರ್ವೇ ನಡೆಸುವ ಭರವಸೆ
ಮನವಿ ಸ್ವೀಕರಿಸಿ ಮಾತನಾಡಿದ ಡಿಸಿ ಅಕ್ರಂಪಾಷ, ಅರಣ್ಯ ಮತ್ತು ಕಂದಾಯ ಇಲಾಖೆಯ ನೇತೃತ್ವದಲ್ಲಿ ಜಂಟಿ ಸರ್ವೆ ನಡೆಸಲಾಗುತ್ತದೆ ಅಲ್ಲಿ ತನಕ ಒತ್ತುವರಿ ತೆರವು ಮಾಡುವುದಿಲ್ಲ ಎಂದು ತಿಳಿಸಿದರುಪ್ರತಿಭಟನೆಯಲ್ಲಿ ಸಾಹಿತಿ ಹರಿಹರ ಪ್ರಿಯಾ, ರೈತ ಮುಖಂಡರಾದ ಅಬ್ಬಣಿ ಶಿವಪ್ಪ, ಟಿ.ಎಂ.ವೆಂಕಟೇಶ್, ಕೋಟಿಗಾನಹಳ್ಳಿ ಗಣೇಶ್ ಗೌಡ, ಕೂಟೇರಿ ನಾಗರಾಜ್, ಪಿ.ಆರ್.ನವೀನ್ ಕುಮಾರ್, ಗೋಪಾಲ್, ವಿಜಯಕೃಷ್ಣ, ನಾರಾಯಣರೆಡ್ಡಿ, ಅಲಹಳ್ಳಿ ವೆಂಕಟೇಶ್, ಆನಂದ್ ಕುಮಾರ್ ಇದ್ದರು