ಸಾರಾಂಶ
ನ್ಯಾಯಾಲಯದ ಆದೇಶದಂತೆ ನಮ್ಮ ಜಮೀನನ್ನು ಸರ್ವೆ ಮಾಡಿಸಿ ನಮಗೆ ಹಸ್ತಾಂತರಿಸಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಮಂಗಳವಾರ ಕಣಬರ್ಗಿ ಗ್ರಾಮದ ರೈತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ನ್ಯಾಯಾಲಯದ ಆದೇಶದಂತೆ ನಮ್ಮ ಜಮೀನನ್ನು ಸರ್ವೆ ಮಾಡಿಸಿ ನಮಗೆ ಹಸ್ತಾಂತರಿಸಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಮಂಗಳವಾರ ಕಣಬರ್ಗಿ ಗ್ರಾಮದ ರೈತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ) ಸ್ಕೀಮ್ ನಂ.61ಕ್ಕಾಗಿ ಕಣಬರ್ಗಿ ಗ್ರಾಮದಲ್ಲಿ ರೈತರ ಭೂಮಿಯನ್ನು 2007ರಲ್ಲಿ ಸ್ವಾಧೀನಪಡೆಸಿಕೊಂಡಿದ್ದರು. ಇದನ್ನು ಪ್ರಶ್ನಿಸಿ ಕೆಲ ರೈತರು ಧಾರವಾಡ ಹೈಕೋರ್ಟ್ ಮೊರೆ ಹೋಗಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ 2023 ಏ.12 ರಂದು ರೈತರ ಪರವಾಗಿ ತೀರ್ಪು ನೀಡಿದೆ. ನ್ಯಾಯಾಲಯದ ಆದೇಶದಂತೆ ನಮ್ಮ ಜಮೀನಿನನ್ನು ಸರ್ವೆ ಮಾಡಿಸಿ ನಮಗೆ ಹಸ್ತಾಂತರಿಸಬೇಕು ಎಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಬಿ.ಎಂ.ಮಲಾಯಿ, ಬಾವುಕಣ್ಣಾ ಮಲಾಯಿ, ಎಂ.ಬಿ.ಮಲಾಯಿ, ಆರ್.ಎಸ್.ಅಷ್ಟೇಕರ ಸೇರಿದಂತೆ ಮೊದಲಾದವರು ಭಾಗವಹಿಸಿದ್ದರು.