ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ರೈತರ ಆಗ್ರಹ

| Published : Jun 23 2024, 02:13 AM IST / Updated: Jun 23 2024, 10:27 AM IST

ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ರೈತರ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ವಿಜಯನಗರ ಜಿಲ್ಲೆಯ ಜ್ವಲಂತ ಸಮಸ್ಯೆಯಾದ ಸಕ್ಕರೆ ಕಾರ್ಖಾನೆಯನ್ನು ಸ್ಥಳ ಪರಿಶೀಲನೆ ಮಾಡಿ ಶೀಘ್ರವೇ ನಿರ್ಮಾಣ ಮಾಡಬೇಕು.

ಹೊಸಪೇಟೆ: ರೈತರ ಬಹು ವರ್ಷಗಳ ಬೇಡಿಕೆಯಾದ ಸಕ್ಕರೆ ಕಾರ್ಖಾನೆಯನ್ನು ಹೊಸಪೇಟೆಯಲ್ಲಿ ಆರಂಭಿಸಬೇಕು. ಕಮಲಾಪುರ ಹೋಬಳಿ ವ್ಯಾಪ್ತಿಯಲ್ಲಿ ಸಾಗುವಳಿ ಮಾಡುತ್ತಿರುವ ಬಡ ರೈತರಿಗೆ ಹಕ್ಕುಪತ್ರ ವಿತರಿಸಬೇಕು ಎಂದು ರಾಜ್ಯ ರೈತಸಂಘ ಹಾಗೂ ಹಸಿರುಸೇನೆ (ವಾಸುದೇವ ಮೇಟಿ) ಜಿಲ್ಲಾ ಪದಾಧಿಕಾರಿಗಳು ಸಿಎಂ ಸಿದ್ದರಾಮಯ್ಯಗೆ ಶುಕ್ರವಾರ ಮನವಿ ಸಲ್ಲಿಸಿದರು.

ವಿಜಯನಗರ ಜಿಲ್ಲೆಯ ಜ್ವಲಂತ ಸಮಸ್ಯೆಯಾದ ಸಕ್ಕರೆ ಕಾರ್ಖಾನೆಯನ್ನು ಸ್ಥಳ ಪರಿಶೀಲನೆ ಮಾಡಿ ಶೀಘ್ರವೇ ನಿರ್ಮಾಣ ಮಾಡಬೇಕು. ಈ ಸಕ್ಕರೆ ಕಾರ್ಖಾನೆ ಸ್ಥಾಪನೆಯಿಂದ ಸಾಕಷ್ಟು ರೈತರಿಗೆ ಅನುಕೂಲ ಆಗುತ್ತದೆ. ಸಾವಿರಾರು ಬಡ ರೈತರ ಮಕ್ಕಳಿಗೆ ಉದ್ಯೋಗ ಸೃಷ್ಟಿಯಾಗುತ್ತದೆ. ಬೇರೆ ಜಿಲ್ಲೆಗಳಿಗೆ ಸಕ್ಕರೆ ಸಾಗಾಟ ಮಾಡುವುದು ನಿಲ್ಲುವುದರಿಂದ ರೈತರಿಗೆ ಸಾರಿಗೆ ವೆಚ್ಚ ಉಳಿಯಲಿದೆ. ಇದರಿಂದ ರೈತರ ಜೀವನಕ್ಕೆ ದಾರಿ ಆಗಲಿದೆ. ಈ ಕೂಡಲೇ ಜಾಗ ಪರಿಶೀಲನೆ ಮಾಡಿ ಸಕ್ಕರೆ ಆರಂಭಿಸಬೇಕು. ಜೊತೆಗೆ ಕಮಲಾಪುರ ಭಾಗದಲ್ಲಿ ಬಹಳ ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಬಡ ರೈತರಿಗೆ ಹಕ್ಕು ಪತ್ರ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾಧ್ಯಕ್ಷ ಸಿ.ಎ. ಗಾಳೆಪ್ಪ, ಮುಖಂಡರಾದ ವೆಂಕೋಬಪ್ಪ, ವೆಂಕಟೇಶ್, ಪ್ರಕಾಶ್‌, ಬಸಣ್ಣ ಮತ್ತಿತರರಿದ್ದರು.

ಸಾಲಮನ್ನಾಕ್ಕೆ ಒತ್ತಾಯ:

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಎಲ್ಲಾ ರೈತರಿಗೂ ಬೆಳೆ ಪರಿಹಾರ ಒದಗಿಸಬೇಕು. ಏತ ನೀರಾವರಿ ಯೋಜನೆ ಕಾಮಗಾರಿಗಳನ್ನು ದುರಸ್ತಿಗೊಳಿಸಬೇಕು. ರಾಜ್ಯದ ರೈತರ ಸಾಲಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಹಗರಿಬೊಮ್ಮನಹಳ್ಳಿ ತಾಲೂಕು ಈರುಳ್ಳಿ ಬೆಳೆಗಾರರ ಸಂಘ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿತು. ರೈತ