ಸಾರಾಂಶ
ಮನುಷ್ಯ ಜೀವ ಅಮೂಲ್ಯವಾದದು, ಬದುಕಿನಲ್ಲಿ ಬರುವ ಸಮಸ್ಯೆಗಳನ್ನು ಮೆಟ್ಟಿನಿಂತು ಆತ್ಮ ವಿಶ್ವಾಸ ಕಳೆದುಕೊಳ್ಳದೆ ಎದುರಿಸುವಂತಹ ಸಾಮರ್ಥ್ಯ ಬೆಳೆಸಿಕೊಳ್ಳಬೇಕು, ನಾಡಿಗೆ ಅನ್ನ ನೀಡುವ ರೈತ ಕಷ್ಟಗಳನ್ನು ಮೆಟ್ಟಿ ನಿಂತಾಗ ಮಾತ್ರ ಸಮಸ್ಯೆಗಳು ತಾನಾಗಿಯೇ ದೂರವಾಗಲಿವೆ ಎಂದು ಕಾಂಗ್ರೆಸ್ ಯುವ ನಾಯಕ ಸಂಜಯ ಜಯಚಂದ್ರ ಹೇಳಿದರು.
ಕನ್ನಡಪ್ರಭ ವಾರ್ತೆ ಶಿರಾ ಮನುಷ್ಯ ಜೀವ ಅಮೂಲ್ಯವಾದದು, ಬದುಕಿನಲ್ಲಿ ಬರುವ ಸಮಸ್ಯೆಗಳನ್ನು ಮೆಟ್ಟಿನಿಂತು ಆತ್ಮ ವಿಶ್ವಾಸ ಕಳೆದುಕೊಳ್ಳದೆ ಎದುರಿಸುವಂತಹ ಸಾಮರ್ಥ್ಯ ಬೆಳೆಸಿಕೊಳ್ಳಬೇಕು, ನಾಡಿಗೆ ಅನ್ನ ನೀಡುವ ರೈತ ಕಷ್ಟಗಳನ್ನು ಮೆಟ್ಟಿ ನಿಂತಾಗ ಮಾತ್ರ ಸಮಸ್ಯೆಗಳು ತಾನಾಗಿಯೇ ದೂರವಾಗಲಿವೆ ಎಂದು ಕಾಂಗ್ರೆಸ್ ಯುವ ನಾಯಕ ಸಂಜಯ ಜಯಚಂದ್ರ ಹೇಳಿದರು.
ಅವರು ತಾಲೂಕಿನ ಬಂದಕುಂಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೋವಿಂದನಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ರೈತ ಜಯರಾಮಯ್ಯ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ, ಮೃತ ಕುಟುಂಬಕ್ಕೆ ಸರಕಾರದಿಂದ ಪರಿಹಾರ ಕೊಡಿಸುವುದಾಗಿ ಹೇಳಿದರು. ಸರಕಾರ ರೈತರ ಬದುಕನ್ನು ಹಸನು ಮಾಡುವಂತಹ ಯೋಜನೆಗಳನ್ನು ರೂಪಿಸಬೇಕು, ಕೃಷಿಯಿಂದ ರೈತರು ಹಿಮ್ಮುಖವಾಗದಂತೆ ನೋಡಿಕೊಳ್ಳಬೇಕು ಎಂದರು. ಶಿರಾ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವು ಚಂಗಾವರ ಮಾತನಾಡಿ, ರೈತ ದೇಶಕ್ಕೆ ಬೆನ್ನೆಲುಬು, ಅನ್ನ ನೀಡುವ ಅನ್ನದಾತ ಎಂತಹ ಸಮಸ್ಯೆ ಬಂದರು ಧೈರ್ಯದಿಂದ ಎದುರಿಸಿ ಬದುಕು ಕಟ್ಟಿಕೊಳ್ಳುವಂತಹ ಸಾಮರ್ಥ್ಯ ಬೆಳೆಸಿಕೊಳ್ಳಬೇಕು, ದೇವರ ಕೃಪೆ ಅನ್ನದಾತನ ಮೇಲೆ ಸದಾ ಇರಲಿ ಎಂದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಬಂದ ಕುಂಟೆ ರಾಮಕೃಷ್ಣಪ್ಪ, ಗ್ರಾಮ ಪಂಚಾಯತಿ ಮಾಜಿ ಸದಸ್ಯ ಉಮೇಶ್ ಸೇರಿದಂತೆ ಹಲವರು ಹಾಜರಿದ್ದರು.