ಹಟ್ಟಿ ಚಿನ್ನದಗಣಿ: ಇಲ್ಲಿನ ಚಿನ್ನದಗಣಿ ಕಂಪನಿಯ ವಿರುದ್ಧ ಭೂ ಹಕ್ಕು ವಂಚನೆ ಆರೋಪಿಸಿ ಹೋರಾಟ ನಡೆಸುತ್ತಿರುವ ರೈತರ ಉಪವಾಸ ಸತ್ಯಾಗ್ರಹಕ್ಕೆ ಸಚಿವ ಡಾ.ಅಜಯ್ ಧರ್ಮಸಿಂಗ್ ಅವರು ಭೇಟಿ ನೀಡಿ, ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳುವ ಭರವಸೆಯನ್ನು ಶುಕ್ರವಾರ ನೀಡಿದ್ದಾರೆ.
ಹಟ್ಟಿ ಭೂ ಹಕ್ಕು ವಂಚಿತ ರೈತ ಹೋರಾಟ ಸಮಿತಿ ಅಧ್ಯಕ್ಷ ಅಮರೇಗೌಡ ಪಾಟೀಲ್ ಬಯ್ಯಾಪುರ ಅವರ ನೇತೃತ್ವದಲ್ಲಿ ಹಟ್ಟಿ ಚಿನ್ನದ ಗಣಿ ಕಂಪನಿಯ ಮುಖ್ಯ ದ್ವಾರದ ಬಳಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹವು ಈಗಾಗಲೇ ಹಲವು ದಿನಗಳಿಂದ ಮುಂದುವರೆದಿದ್ದು, ರೈತರ ಈ ಹೋರಾಟಕ್ಕೆ ಸ್ಥಳೀಯರಿಂದ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಸಮಸ್ಯೆಯ ಗಂಭೀರತೆಯನ್ನು ಗಮನಿಸಿದ ಜಿಲ್ಲಾಡಳಿತವೂ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಹೋರಾಟಗಾರರನ್ನು ಸಂತೈಸಿದ ಸಚಿವರು ‘ನಿಮ್ಮ ಜೊತೆ ಸರ್ಕಾರವಿದೆ’ ಎಂದು ಭರವಸೆ ನೀಡಿದ್ದಾರೆ. ಅವರು ಹಟ್ಟಿ ಚಿನ್ನದ ಗಣಿ ಅಧಿಕಾರಿಗಳ ಜೊತೆ ಚರ್ಚಿಸಿ ವರದಿ ಪಡೆದು, ಅದನ್ನು ಸರ್ಕಾರದ ಗಮನಕ್ಕೆ ತಂದು ಶೀಘ್ರ ಪರಿಹಾರ ಮಾರ್ಗ ಹುಡುಕುವುದಾಗಿ ತಿಳಿಸಿದರು.
---07ಕೆಪಿಎಚ್ಜಿಎಂ1: ಹಟ್ಟಿ ಚಿನ್ನದಗಣಿ ಕಂಪನಿಯ ಮುಖ್ಯ ದ್ವಾರದ ಬಳಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಡಾ.ಅಜಯ್ ಧರ್ಮಸಿಂಗ್ ಅವರಿಗೆ ಹೋರಾಟಗಾರರು ಮನವಿ ಸಲ್ಲಿಸಿದರು.