೨೦೦೨ರ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದ ಕಾರಣ, ಹಲವು ಬಾರಿ ಮತ ಚಲಾಯಿಸಿದರೂ ಅನೇಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವರು ನಮೂನೆಗಳನ್ನು ತಪ್ಪಾಗಿ ಭರ್ತಿ ಮಾಡಿ ಸಲ್ಲಿಸುತ್ತಿರುವುದು ಕೂಡ ಗಮನಕ್ಕೆ ಬಂದಿದೆ.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ನವಲಗುಂದದಲ್ಲಿ ರೈತರ ಮೇಲೆ ನಡೆಸಿದ ಗೋಲಿಬಾರ್ ನೆನಪಿಗಾಗಿ ಪ್ರತಿ ವರ್ಷ ರೈತ ಹುತಾತ್ಮ ದಿನ ಅಚರಿಸಿಕೊಂಡು ಬರುತ್ತಿದ್ದು, ಈ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಜು.೨೧ರಂದು ಹಮ್ಮಿಕೊಳ್ಳಲಾಗಿದೆ ಎಂದು ರೈತ ಮುಖಂಡ ವೈ.ಸಿ. ಪ್ರಕಾಶ್ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಲು ಬಹಳ ಕಷ್ಟಪಡುತ್ತಿದ್ದಾರೆ. ನೋಂದಣಿ ನಮೂನೆ ಮೇಲ್ನೋಟಕ್ಕೆ ಸರಳವೆಂಬಂತೆ ಕಂಡರೂ ಬಹಳ ಜಟಿಲವಾಗಿದೆ. ಇದರಿಂದ ಅವಿದ್ಯಾಂತವರಿಗೆ ಇರಲಿ ವಿದ್ಯಾವಂತರಿಗೂ ಗೊಂದಲ ಮೂಡಿದೆ ಎಂದರು.
೨೦೦೨ರ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದ ಕಾರಣ, ಹಲವು ಬಾರಿ ಮತ ಚಲಾಯಿಸಿದರೂ ಅನೇಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವರು ನಮೂನೆಗಳನ್ನು ತಪ್ಪಾಗಿ ಭರ್ತಿ ಮಾಡಿ ಸಲ್ಲಿಸುತ್ತಿರುವುದು ಕೂಡ ಗಮನಕ್ಕೆ ಬಂದಿದೆ ಎಂದು ಹೇಳಿದರು.ಅಲ್ಲದೇ ಮತದಾರರು ಭರ್ತಿ ಮಾಡಿದ ಅರ್ಜಿಗಳನ್ನು ಅಪ್‌ಲೋಡ್ ಮಾಡುವಲ್ಲಿಯೂ ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿದ್ದು, ಅನೇಕ ಅರ್ಜಿಗಳು ಸರಿಯಾಗಿ ಅಪ್‌ಲೋಡ್ ಆಗುತ್ತಿಲ್ಲ. ಆದ್ದರಿಂದ ಹೆಲ್ಪ್‌ಡೆಸ್ಕ್ ಆರಂಭಿಸುವಂತೆ ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.
ಕರಡು ಮತದಾರರ ಪಟ್ಟಿ ಪ್ರಕಟವಾದ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರಿಗೆ ನೋಟಿಸ್‌ಗಳು ಬರುವ ಸಾಧ್ಯತೆ ಇದೆ. ಸುಮಾರು ಒಂದು ಕೋಟಿಗೂ ಹೆಚ್ಚು ಜನರಿಗೆ ನೋಟೀಸ್ ಬರಬಹುದು. ವಿಶೇಷವಾಗಿ ಸೋಲಿಗರು, ಎಸ್ಸಿ, ಎಸ್ಟಿ ಜನಸಂಖ್ಯೆ ಹೆಚ್ಚಿರುವ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಇದ್ದು, ದಾಖಲೆಗಳನ್ನು ಒದಗಿಸಲು ಜಿಲ್ಲಾಡಳಿತ ಈಗಿನಿಂದಲೇ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಹೇಳಿದರು.ಕರಡು ಮತದಾರರ ಪಟ್ಟಿ ಪ್ರಕಟವಾದ ಬಳಿಕ ಸರ್ಕಾರಿ ಕಚೇರಿಗಳಲ್ಲಿ ಆತಂಕಗೊಂಡ ಮತದಾರರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಮತದಾರರ ಗುರುತಿನ ಚೀಟಿಯೇ ಪ್ರಮುಖ ಅಧಿಕೃತ ಗುರುತಿನ ದಾಖಲೆಯಾಗಿ ಬಳಕೆಯಾಗುವ ಹಿನ್ನೆಲೆಯಲ್ಲಿ, ಯಾವುದೇ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈಬಿಡದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಸಂಘ ಸೇನಾ ಮಾತನಾಡಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಷಡ್ಯಂತ್ರವಿದ್ದು, ಇಡೀ ದೇಶದ ಎಲ್ಲಾ ಕಡೆ ಅಧಿಕಾರವನ್ನು ಪಡೆದುಕೊಳ್ಳಲು ಬಿಜೆಪಿ ಹುನ್ನಾರ ನಡೆಸಿದೆ ಎಂದು ಆರೋಪಿಸಿದರು. ಪತ್ರಿಕಾಗೋಷ್ಠಿ ಯಲ್ಲಿ ಕೆಂಪರಾಜು, ಅನಿಲ್ ಕುಮಾರ್ ಇದ್ದರು.
