ಸಾರಾಂಶ
ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಿದ 14 ದಿನದೊಳಗೆ ಹಣ ಪಾವತಿ ಮಾಡುವಂತೆ ಸರ್ಕಾರದ ಆದೇಶವಿದೆ. ಆದರೆ, ಜಿಲ್ಲಾ ವ್ಯಾಪ್ತಿಯ ಸಕ್ಕರೆ ಕಾರ್ಖಾನೆಗಳ ಪೈಕಿ ಮದ್ದೂರು ತಾಲೂಕು ಕೊಪ್ಪದ ಎನ್ಎಸ್ ಎಲ್ ಸಕ್ಕರೆ ಕಾರ್ಖಾನೆ ರೈತರಿಗೆ 38 ಕೋಟಿ ರು. ಬಾಕಿ ಉಳಿಸಿಕೊಂಡಿದೆ.
ಕನ್ನಡಪ್ರಭ ವಾರ್ತೆ ಮದ್ದೂರು
ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ 3500 ರು. ದರ ನಿಗದಿ ಪಡಿಸುವಂತೆ ಒತ್ತಾಯಿಸಿ ಉತ್ತರ ಕರ್ನಾಟಕದ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲಿಸಿ ತಾಲೂಕಿನ ಕೊಪ್ಪ ಹೋಬಳಿ ರೈತರು ಗುರುವಾರ ಪ್ರತಿಭಟನೆ ನಡೆಸಿದರು.ಪ್ರತಿಭಟನೆ ವೇಳೆ ರೈತರು ರಸ್ತೆ ತಡೆ ನಡೆಸಿದ ಪರಿಣಾಮ ಮಂಡ್ಯ, ಮದ್ದೂರು ಹಾಗೂ ನಾಗಮಂಗಲ ಮಾರ್ಗ ದಲ್ಲಿ ಕೆಲಕಾಲ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ರೈತ ಸಂಘದ ಮುಖಂಡ ಕೀಳಘಟ್ಟ ನಂಜುಂಡಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕೊಪ್ಪ ಹೋಬಳಿ ರೈತರು ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾಗೂ ಸಕ್ಕರೆ ಸಚಿವರ ವಿರುದ್ಧ ಘೋಷಣೆ ಕೂಗಿದರು.
ಕಬ್ಬಿನ ದರ ನಿಗದಿ ಸಂಬಂಧ ಉತ್ತರ ಕರ್ನಾಟಕದ ರೈತರು ಕಳೆದ ಹಲವು ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಸಹ ದರ ನಿಗದಿ ಪಡಿಸುವಲ್ಲಿ ಸರ್ಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕಬ್ಬುದರ ನಿಗದಿ ಸಂಬಂಧ ಸರ್ಕಾರ ಮಧ್ಯ ಪ್ರವೇಶ ಮಾಡಿ ಕಾರ್ಖಾನೆ ಮಾಲೀಕರೊಂದಿಗೆ ಚರ್ಚಿಸಿ ದರ ನಿಗದಿಪಡಿಸಬೇಕು ಎಂದು ಆಗ್ರಪಡಿಸಿದರು.ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಿದ 14 ದಿನದೊಳಗೆ ಹಣ ಪಾವತಿ ಮಾಡುವಂತೆ ಸರ್ಕಾರದ ಆದೇಶವಿದೆ. ಆದರೆ, ಜಿಲ್ಲಾ ವ್ಯಾಪ್ತಿಯ ಸಕ್ಕರೆ ಕಾರ್ಖಾನೆಗಳ ಪೈಕಿ ಮದ್ದೂರು ತಾಲೂಕು ಕೊಪ್ಪದ ಎನ್ಎಸ್ ಎಲ್ ಸಕ್ಕರೆ ಕಾರ್ಖಾನೆ ರೈತರಿಗೆ 38 ಕೋಟಿ ರು. ಬಾಕಿ ಉಳಿಸಿಕೊಂಡಿದೆ ಎಂದರು.
ಈ ಬಗ್ಗೆ ಜಿಲ್ಲಾಧಿಕಾರಿ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿ ಕಬ್ಬಿನ ಬಾಕಿ ಹಣವನ್ನು ಶೀಘ್ರ ಪಾವತಿ ಮಾಡುವಂತೆ ಆದೇಶ ನೀಡಿದ್ದಾರೆ. ಈ ಬಗ್ಗೆ ಕಾರ್ಖಾನೆ ಆಡಳಿತ ಮಂಡಳಿ ಸರ್ಕಾರ ಮತ್ತು ಜಿಲ್ಲಾಡಳಿತದ ಆದೇಶಕ್ಕೆ ಕಿಂಚತ್ತು ಬೆಲೆ ನೀಡುತ್ತಿಲ್ಲ. ಮುಂದಿನ 15 ದಿನದೊಳಗೆ ಕಬ್ಬಿನ ಪಾವತಿ ಪಾವತಿ ಮಾಡದಿದ್ದರೆ ರೈತರು ಕಾರ್ಖಾನೆಗೆ ಮುತ್ತಿಗೆ ಹಾಕಿ ಧರಣಿ ನಡೆಸಲಿದ್ದಾರೆ ಎಂದು ರೈತ ಮುಖಂಡ ಕೀಳಘಟ್ಟ ನಂಜುಂಡಯ್ಯ ಎಚ್ಚರಿಸಿದರು.ಪ್ರತಿಭಟನೆಯಲ್ಲಿ ಮುಖಂಡರಾದ ರಾಮೇಗೌಡ, ನಿಂಗರಾಜು , ವೆಂಕಟೇಶ , ಶಿವಲಿಂಗಯ್ಯ , ಉಮೇಶ, ಗೌಡಯ್ಯ, ಅಪ್ಪಾಜಿ, ರಮೇಶ, ಚೆನ್ನಪ್ಪ, ದಿನೇಶ ಮತ್ತಿತರರು ಭಾಗವಹಿಸಿದ್ದರು.
;Resize=(128,128))
;Resize=(128,128))
;Resize=(128,128))