ನಾಳೆ ಕೆಎಂಎಫ್ ಎದುರು ರೈತರ ಪ್ರತಿಭಟನೆ

| Published : Feb 09 2025, 01:16 AM IST

ಸಾರಾಂಶ

ಪಶು ಆಹಾರಕ್ಕೆ ಬಳಸುವ ಮೆಕ್ಕೆಜೋಳವನ್ನು ರೈತರಿಂದಲೇ ನೇರವಾಗಿ ಖರೀದಿಸಬೇಕು. ಸರ್ಕಾರ ನೀಡುವ ಪ್ರೋತ್ಸಾಹಧನ 5 ರೂಗಳಿಂದ 10 ರೂಪಾಯಿಗೆ ಹೆಚ್ಚಿಸಬೇಕು. ಹಾಲಿನ ಬೆಲೆ ನಿಗದಿಯಲ್ಲಿ ಒಕ್ಕೂಟಗಳು ಸ್ವತಂತ್ರವಾಗಿಬೇಕು ಗರಿಷ್ಠ ವೇತನ ಮಿತಿ ನಿಯಮ ಜಾರಿ ಮಾಡಬೇಕು ಈ ಸಂಸ್ಥೆಯ ನೇಮಕಾತಿಯಲ್ಲಿ ಹಾಲು ಉತ್ಪಾದಕರ ಮಕ್ಕಳಿಗೆ ಮಾತ್ರ ಸೀಮಿತವಾಗಿರಬೇಕು

ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ

ಹಾಲು ಉತ್ಪಾದಕರಿಗೆ ಹಾಲಿನ ಬಾಕಿ ಹಣ ಶೀಘ್ರವೇ ಮಂಜೂರು ಮಾಡಬೇಕು, ರೈತರು ಸರಬರಾಜು ಮಾಡುವ ಪ್ರತಿ ಲೀಟರ್ ಹಾಲಿಗೆ ಕನಿಷ್ಠ 50 ರು. ನಿಗದಿ ಮಾಡಬೇಕು ಎಂದು ಆಗ್ರಹಿಸಿ ಫೆ.10 ರಂದು ಕೆಎಂಎಫ್ ಮುಂಭಾಗ ಬೃಹತ್ ಹೋರಾಟವನ್ನು ಹಮ್ಮಿಕೊಂಡಿರುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ತಿಳಿಸಿದರು.

ನಗರದ ಬಸ್ ನಿಲ್ದಾಣದ ಸಮೀಪ ಇರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ರೈತರ ಸರಬರಾಜು ಮಾಡುವ ಪ್ರತಿ ಲೀಟರ್ ಹಾಲಿನ ಬೆಲೆ ಕನಿಷ್ಠ 50ರೂ ಹೆಚ್ಚಿಸಬೇಕು. ಪಶು ಆಹಾರದ ಬೆಲೆಯನ್ನು ಕಡಿಮೆ ಮಾಡಿ ಹೆಚ್ಚಿನ ಸಹಾಯಧನ ನೀಡಬೇಕು ಎಂದರು.ಮೆಕ್ಕೆ ಜೋಳ ನೇರ ಖರೀದಿ

ಪಶು ಆಹಾರಕ್ಕೆ ಬಳಸುವ ಮೆಕ್ಕೆಜೋಳವನ್ನು ರೈತರಿಂದಲೇ ನೇರವಾಗಿ ಖರೀದಿಸಬೇಕು. ಸರ್ಕಾರ ನೀಡುವ ಪ್ರೋತ್ಸಾಹಧನ 5 ರೂಗಳಿಂದ 10 ರೂಪಾಯಿಗೆ ಹೆಚ್ಚಿಸಬೇಕು. ಹಾಲಿನ ಬೆಲೆ ನಿಗದಿಯಲ್ಲಿ ಒಕ್ಕೂಟಗಳು ಸ್ವತಂತ್ರವಾಗಿಬೇಕು ಗರಿಷ್ಠ ವೇತನ ಮಿತಿ ನಿಯಮ ಜಾರಿ ಮಾಡಬೇಕು ಈ ಸಂಸ್ಥೆಯ ನೇಮಕಾತಿಯಲ್ಲಿ ಹಾಲು ಉತ್ಪಾದಕರ ಮಕ್ಕಳಿಗೆ ಮಾತ್ರ ಸೀಮಿತವಾಗಿರಬೇಕು ಸ್ಥಳೀಯ ಪ್ರಾಥಮಿಕ ಸಹಕಾರಿ ಸಂಘಗಳ ನೌಕರರನ್ನು ಒಕ್ಕೂಟದ ನೌಕರರೆಂದು ಪರಿಗಣಿಸಬೇಕು. ಬಾಕಿ ಇರುವ ಸಹಾಯ ಧನ 620 ಕೋಟಿ ರೂಪಾಯಿಗಳನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಸರ್ಕಾರದ ಮಲತಾಯಿ ಧೋರಣೆ

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿಯೂ ಸಹ ಎರಡು ಮೂರು ಬಾರಿ ಮನವಿ ಮಾಡಿ ಬೆಳಗಾವಿ ಅಧಿವೇಶನದಲ್ಲಿ ಬೃಹತ್ ಧರಣಿ ಮೂಲಕ ಮಾಹಿತಿ ತಿಳಿಸಿದಾಗ ಜನವರಿ ಒಂದನೇ ತಾರೀಖಿನಿಂದ ರೈತರಿಗೆ ನೇರವಾಗಿ ಕೊಡುತ್ತೇವೆ ಅಂತ ಹೇಳಿದ್ದರೂ ಕೂಡ ಇಲ್ಲಿಯವರೆಗೂ ಆ ಕೆಲಸ ಮಾಡಲಿಲ್ಲ. ಸಿದ್ದರಾಮಯ್ಯನವರ ಸರ್ಕಾರ ರೈತರ ಬಗ್ಗೆ ಮಲತಾಯಿ ಧೋರಣೆ ಮಾಡುತ್ತಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಮುನಿನಂಜಪ್ಪ, ತಾಲೂಕು ಉಪಾಧ್ಯಕ್ಷ ರಮೇಶ್ ಕಾರ್ಯಾಧ್ಯಕ್ಷ ಕೆಂಪರೆಡ್ಡಿ ಕಾರ್ಯದರ್ಶಿ ಕೆಂಪಣ್ಣ, ಸೊಣ್ಣಪ್ಪರೆಡ್ಡಿ, ನಾರಾಯಣಸ್ವಾಮಿ, ನಾಗರಾಜು, ವಾಸು, ಕೃಷ್ಣಪ್ಪ, ರಾಮಚಂದ್ರಪ್ಪ, ದೇವರಾಜು, ಸುಬ್ರಮಣಿ, ರಾಮಕೃಷ್ಣಪ್ಪ, ಸೇರಿದಂತೆ ಅನೇಕ ರೈತ ಮುಖಂಡರು ಉಪಸ್ಥಿತರಿದ್ದರು.ಸುದ್ದಿ ಚಿತ್ರ ೧ ಶಿಡ್ಲಘಟ್ಟ ನಗರದಲ್ಲಿ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಪತ್ರಿಕಾಗೋಷ್ಠಿ ನಡೆಸಿದರು.