ಸಾರಾಂಶ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಬೂದಿಹಾಳ ಪೀರಾಪೂರ ಏತ ನೀರಾವರಿ ಯೋಜನೆಯ ಮುಕ್ತಾಯ ಹಂತದ ಕಾಮಗಾರಿಗೆ ರಾಜ್ಯ ಸರ್ಕಾರ ಹಣ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ಬುಧವಾರ ತಾಳಿಕೋಟೆ ಪಟ್ಟಣದಲ್ಲಿ ರೈತ ಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ರೈತರು ಕತ್ತೆಗಳ ಮೆರವಣಿಗೆಗೆ ಮುಂದಾಗಿದ್ದರು, ಆದರೆ, ಪೊಲೀಸರು ತಡೆ ನೀಡಿದ್ದರಿಂದ ಕತ್ತೆ ಭಾವಚಿತ್ರದೊಂದಿಗೆ ಪ್ರತಿಭಟನೆ ನಡೆಸಿದರು.
ಕನ್ನಡಪ್ರಭ ವಾರ್ತೆ ತಾಳಿಕೋಟೆ
ಬೂದಿಹಾಳ ಪೀರಾಪೂರ ಏತ ನೀರಾವರಿ ಯೋಜನೆಯ ಮುಕ್ತಾಯ ಹಂತದ ಕಾಮಗಾರಿಗೆ ರಾಜ್ಯ ಸರ್ಕಾರ ಹಣ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ಬುಧವಾರ ತಾಳಿಕೋಟೆ ಪಟ್ಟಣದಲ್ಲಿ ರೈತ ಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ರೈತರು ಕತ್ತೆಗಳ ಮೆರವಣಿಗೆಗೆ ಮುಂದಾಗಿದ್ದರು, ಆದರೆ, ಪೊಲೀಸರು ತಡೆ ನೀಡಿದ್ದರಿಂದ ಕತ್ತೆ ಭಾವಚಿತ್ರದೊಂದಿಗೆ ಪ್ರತಿಭಟನೆ ನಡೆಸಿದರು.ಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್‌ದಿಂದ ಪ್ರಾರಂಭಗೊಂಡ ಪ್ರತಿಭಟನಾ ಮೆರವಣಿಗೆಯೂ ಬಸವೇಶ್ವರ ಸರ್ಕಲ್‌ನಲ್ಲಿ ರಸ್ತೆ ತಡೆ ನಡೆಸಿದರು. ತಹಸೀಲ್ದಾರ್ ಕಚೇರಿಗೆ ತೆರಳಿ ತಹಸೀಲ್ದಾರ್ ವಿನಯಾ ಹೂಗಾರ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ರೈತ ಮುಖಂಡ ಅರವಿಂದ ಕುಲಕರ್ಣಿ ಮಾತನಾಡಿ, ಕಳೆದ ೪ ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಸರ್ಕಾರದಿಂದ ಸ್ಪಂದನೆ ಸಿಕ್ಕಿಲ್ಲ. ಪ್ರತಿಭಟನೆಯನ್ನು ಹತ್ತಿಕ್ಕಲು ಜನಪ್ರತಿನಿಧಿಗಳು ಮಾಡುತ್ತಿರುವ ಷಡ್ಯಂತ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ನಾವು ಶಾಂತಿಯುತ ಹೋರಾಟ ಮಾಡುತ್ತಾ ಬಂದಿದ್ದೇವೆ. ಹೋರಾಟ ಹತ್ತಿಕ್ಕುವ ಸಲುವಾಗಿ ಮಂತ್ರಿಗಳು ಹೋರಾಟಕ್ಕೆ ಕತ್ತೆಗಳು ಸಿಗದಂತೆ ಮಾಡಿದ್ದಾರೆ. ಕೂಡಲೇ ಸರ್ಕಾರ ಹಣ ಬಿಡುಗಡೆ ಮಾಡಿ ರೈತರ ನೆರವಿಗೆ ಬರಬೇಕೆಂದು ಒತ್ತಾಯಿಸಿದರು.
ರೈತ ಮುಖಂಡರಾದ ಪ್ರಭುಗೌಡ ಬಿರಾದಾರ, ಸುರೇಶಕುಮಾರ ಇಂಗಳಗೇರಿ, ಬಾಲಪ್ಪಗೌಡ ಪಾಟೀಲ, ಶಿವಪುತ್ರಪ್ಪ ಚೌದ್ರಿ, ಗುರುರಾಜ ಪಡಶೆಟ್ಟಿ, ಸುರೇಶಕುಮಾರ ಇಂಗಳಗೇರಿ, ರಾಯಪ್ಪಗೌಡ ಪಾಟೀಲ, ಸಾಹೇಬಗೌಡ ಯಾಳಗಿ, ಬಸನಗೌಡ ಯಾಳವಾರ, ಬಸನಗೌಡ ಚೌದ್ರಿ, ನಾನಾಗೌಡ ಬಿರಾದಾರ, ಎಚ್.ಎನ್.ಬಿರಾದಾರ, ಡಾ.ಪ್ರಭುಗೌಡ ಬಿರಾದಾರ(ಅಸ್ಕಿ), ಸಾಯಬಣ್ಣ ಆಲ್ಯಾಳ, ಭೀಮನಗೌಡ ನಾಗರಡ್ಡಿ, ಸುಭಾಸ ಗುಂಡಕನಾಳ, ಮಹಾದೇವ ಅಸ್ಕಿ, ಪರಶುರಾಮ ತಳವಾರ, ಪರಶುರಾಮ ನಾಲತವಾಡ, ಬಾಬುಗೌಡ ಬಿರಾದಾರ, ಚಿದುಗೌಡ ಬಿರಾದಾರ, ಶಂಕ್ರಗೌಡ ದೇಸಾಯಿ, ಬಸವರಾಜ ಹೊಸಳ್ಳಿ, ಅಂಬೇಡ್ಕರ್ ಸೇನೆ ಸಂಘಟನೆಯ ಅಧ್ಯಕ್ಷ ಬಸ್ಸು ಮಾದರ, ಮಹಾದೇವ ಮಾದರ, ಗೋಪಾಲ ಕಟ್ಟಿಮನಿ, ಒಳಗೊಂಡು ನಾವದಗಿ, ನೀರಲಗಿ, ಗೊಟಗುಣಕಿ, ಗುಂಡಕನಾಳ, ಫೀರಾಪೂರ, ಕಾರನೂರ, ಕೊಡಗಾನೂರ, ಅಸ್ಕಿ, ಗ್ರಾಮ ಒಳಗೊಂಡು ೩೮ ಗ್ರಾಮಗಳ ರೈತಾಪಿ ಜನರು ಪಾಲ್ಗೊಂಡಿದ್ದರು.