ಕನ್ನಡಪ್ರಭ ವಾರ್ತೆ ವಿಜಯಪುರ ಕೃಷ್ಣಾ ನದಿ ಉಗಮ ಸ್ಥಾನ ಮಹಾರಾಷ್ಟ್ರದ ಮಹಾಬಲೇಶ್ವರದ ಕೃಷ್ಣಾ ನದಿಯಿಂದ 40 ಟಿಎಂಸಿ ನೀರನ್ನು ಉಜಿನಿ ಜಲಾಶಯಕ್ಕೆ ತೆಗೆದುಕೊಂಡು ಹೋಗುವ ಮಹಾರಾಷ್ಟ್ರ ಸರ್ಕಾರದ ಹುನ್ನಾರವನ್ನು ಖಂಡಿಸಿ ಅಖಂಡ ಕರ್ನಾಟಕ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಬಳಿಕ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ವಿಜಯಪುರ

ಕೃಷ್ಣಾ ನದಿ ಉಗಮ ಸ್ಥಾನ ಮಹಾರಾಷ್ಟ್ರದ ಮಹಾಬಲೇಶ್ವರದ ಕೃಷ್ಣಾ ನದಿಯಿಂದ 40 ಟಿಎಂಸಿ ನೀರನ್ನು ಉಜಿನಿ ಜಲಾಶಯಕ್ಕೆ ತೆಗೆದುಕೊಂಡು ಹೋಗುವ ಮಹಾರಾಷ್ಟ್ರ ಸರ್ಕಾರದ ಹುನ್ನಾರವನ್ನು ಖಂಡಿಸಿ ಅಖಂಡ ಕರ್ನಾಟಕ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಬಳಿಕ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕುರ್ಣಿ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ವಿಠ್ಠಲ ಬಿರಾದಾರ ಮಾತನಾಡಿ, ಮಹಾರಾಷ್ಟ್ರ ಮುಖ್ಯಮಂತ್ರಿ 2026 ಅಕ್ಟೋಬರ್‌ 9ರಂದು ಮುಂಬೈನಲ್ಲಿ ನಡೆದ ಇಂಡಿಯಾ ಟುಡೇ ಕಾನ್ ಕ್ಲೇವ್ ಕಾರ್ಯಕ್ರಮದಲ್ಲಿ ಉಜಿನಿ ಅಣೆಕಟ್ಟಿಗೆ ನೀರು ಕೊಂಡೊಯ್ಯುವ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಆದರೆ, ಇದು ಕರ್ನಾಟಕ ರೈತರ ವಿರೋಧಿ ನೀತಿಯಾಗಿದ್ದು, ನಮ್ಮ ಭಾಗದ ಐದಾರು ಜಿಲ್ಲೆಯ ರೈತರನ್ನು ಹಾಳು ಮಾಡಲು ಮಹಾರಾಷ್ಟ್ರ ಸರ್ಕಾರ ಹೊರಟಿದೆ ಎಂದು ಆಕ್ರೋಶ ಹೊರಹಾಕಿದರು.

ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಮಹಾದೇವಪ್ಪ ತೇಲಿ ಮಾತನಾಡಿ, ನ್ಯಾ.ಬ್ರಿಜೇಶಕುಮಾರ ನೇತೃತ್ವದ ಎರಡನೇ ನ್ಯಾಯಾಧಿಕರಣದ ತೀರ್ಪಿನಂತೆ ಆಲಮಟ್ಟಿಯ ಲಾಲ್ ಬಹದ್ದೂರ್‌ ಶಾಸ್ತ್ರೀ ಜಲಾಶಯದ ನೀರಿನ ಮಟ್ಟವನ್ನು 524.256ಕ್ಕೆ ನೀರು ನಿಲ್ಲಿಸಲು ಅನಾವಶ್ಯಕವಾಗಿ ಕ್ಯಾತೆ ತೆಗೆಯುತ್ತಿದೆ. ಆದ್ದರಿಂದ, ಯಾವುದೇ ಕಾರಣಕ್ಕೂ ಕೃಷ್ಣಾ ನದಿ ನೀರನ್ನು ಉಜಿನಿ ಜಲಾಶಯಕ್ಕೆ ತೆಗೆದುಕೊಂಡು ಹೋಗಲು ಕೇಂದ್ರ ಸರ್ಕಾರ ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.ರೈತ ಮುಖಂಡರಾದ ರಾಮನಗೌಡ ಹಾದಿಮನಿ, ರಾಮನಗೌಡ ಉಪ್ಪಲದಿನ್ನಿ, ಹೊನಕೇರಪ್ಪ ತೆಲಗಿ, ಶಿವಪ್ಪ ಮಾಳಗೊಂಡ, ಲಂಕೇಶ ತಳವಾರ, ಗುರುಲಿಂಗಪ್ಪ ಪಡಸಲಗಿ, ದಾವಲಸಾಬ ನದಾಫ್, ಶಿವಪ್ಪ ಸುಂಟ್ಯಾಣ, ಹಣಮಂತರಾಯ ಹಂದ್ರಾಳ, ರೇವಪ್ಪಗೌಡ ಪೊಲೋಶಿ, ಬೋಗೇಶ ಸೋಲಾಪುರ, ನೀಲಾಂಬಿಕಾ ಬಿರಾದಾರ, ಸುಶೀಲ ಮಿಣಜಗಿ, ಮಲ್ಲಿಕಾರ್ಜುನ ಬಟಗಿ, ಗೈಬೂಸಾಬ್ ಬಂಢಾರಕೋಟೆ, ಜಯಸಿಂಗ ರಜಪೂತ, ಮಂಜುನಾಥ ರಜಪೂತ, ಗಿರೀಶ ಕಲಘಟಗಿ ಇದ್ದರು.