ಕೃಷಿ ಸಾಲ ಮನ್ನಾಗೆ ಆಗ್ರಹಿಸಿ ರೈತರ ಪ್ರತಿಭಟನೆ

| Published : Jan 14 2025, 01:00 AM IST

ಸಾರಾಂಶ

ಕೃಷಿ ಸಾಲ ಮನ್ನಾ ಮಾಡುವುದು ಸೇರಿದಂತೆ ಮತ್ತಿತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ರೈತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಕೃಷಿ ಸಾಲ ಮನ್ನಾ ಮಾಡುವುದು ಸೇರಿದಂತೆ ಮತ್ತಿತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ರೈತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಪಡಿಸುವ ಕಾನೂನು ಜಾರಿಗಳಿಸಬೇಕು. ರೈತರು ಎಲ್ಲ ಕೃಷಿ ಸಾಲಗಳನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು. ಖಾಸಗೀಕರಣ ಮತ್ತು ವಿದ್ಯುತ್‌ ಪಂಪಸೆಟ್‌ಗಳಿಗೆ ಮೀಟರ್‌ ಅಳವಡಿಸುವುದನ್ನು ನಿಲ್ಲಿಸಬೇಕು. 60 ವರ್ಷ ಮೇಲ್ಪಟ್ಟ ಕೃಷಿಕರಿಗೆ ₹ 5000 ಮಾಸಿಕ ಪಿಂಚಣಿ ನೀಡಬೇಕೆಂದು ಆಗ್ರಹಿಸಿದರು.

ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕು. ರೈತರನ್ನು ನಿರ್ಲಕ್ಷ ಮಾಡಿದ್ದರಂದಾಗಿ ರೈತ ನಾಯಕರ ಪ್ರಾಣ ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ರಾಷ್ಟ್ರಪತಿ, ಪ್ರಧಾನಿ ಮತ್ತು ಕೇಂದ್ರ ಸಚಿವರು ಮಧ್ಯಸ್ಥಿಕೆ ವಹಿಸಬೇಕು ಎಂದು ಆಗ್ರಹಿಸಿದರು.ರೈತ ಮುಖಂಡರಾದ ಸಿದಗೌಡ ಮೋದಗಿ, ಶಿವಲೀಲಾ ಮೀಸಾಳೆ, ಮಹಾದೇವ ಕಡೋಲ್ಕರ ಇತರರು ಪಾಲ್ಗೊಂಡಿದ್ದರು.