ಸಾರಾಂಶ
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ರದ್ದುಪಡಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಬುಧವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.
ಬೆಂಗಳೂರು : ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ರದ್ದುಪಡಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಬುಧವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ರಾಜ್ಯ ಸರ್ಕಾರ ರೈತರಿಂದ ಬಲವಂತವಾಗಿ ಭೂಮಿ ವಶಪಡಿಸಿಕೊಂಡು ಕೆಐಎಡಿಬಿ ಮೂಲಕ ಕೈಗಾರಿಕೋದ್ಯಮಿಗಳಿಗೆ ನೀಡುತ್ತಿದ್ದು ಕೆಲವರು ಉದ್ಯಮಗಳನ್ನು ಸ್ಥಾಪಿಸದೆ ರಿಯಲ್ ಎಸ್ಟೇಟ್ ದಂಧೆ ಮಾಡುತ್ತಿದ್ದಾರೆ. ಆದ್ದರಿಂದ ಭೂಮಿಯನ್ನು ಸೂಕ್ತವಾಗಿ ನಿರ್ವಹಣೆ ಮಾಡದ ಕೆಐಎಡಿಬಿಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ನೀಡಿದ ಭರವಸೆಯಂತೆ ಕೃಷಿ ಭೂಮಿಯನ್ನು ಕಾರ್ಪೊರೆಟ್ ಕಂಪೆನಿಗಳು ಖರೀದಿಸಲು ಅವಕಾಶವಿರುವ ಕೃಷಿ ಕಾಯ್ದೆಗಳನ್ನು ತಕ್ಷಣ ರದ್ದು ಮಾಡಬೇಕು ಎಂದು ಒತ್ತಾಯಿಸಿದರು.