ಸಾರಾಂಶ
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಶೇರು ಹಣ ವಾಪಸ್ ನೀಡುವಂತೆ ಆಗ್ರಹಿಸಿ ಜು.4 ರಂದು ರಾಮದುರ್ಗ ತಾಲೂಕಿನ ಶಿವ ಸಾಗರ ಸಕ್ಕರೆ ಕಾರ್ಖಾನೆ ಮುಂದೆ ಬೃಹತ್ ಪ್ರತಿಭಟನೆ ಆರಂಭಿಸಲಾಗುವುದು ಎಂದು ಉತ್ತರ ಕರ್ನಾಟಕ ರೈತ ಹಾಗೂ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಕರಿಗಾರ ಹೇಳಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ:
ಶೇರು ಹಣ ವಾಪಸ್ ನೀಡುವಂತೆ ಆಗ್ರಹಿಸಿ ಜು.4 ರಂದು ರಾಮದುರ್ಗ ತಾಲೂಕಿನ ಶಿವ ಸಾಗರ ಸಕ್ಕರೆ ಕಾರ್ಖಾನೆ ಮುಂದೆ ಬೃಹತ್ ಪ್ರತಿಭಟನೆ ಆರಂಭಿಸಲಾಗುವುದು ಎಂದು ಉತ್ತರ ಕರ್ನಾಟಕ ರೈತ ಹಾಗೂ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಕರಿಗಾರ ಹೇಳಿದರು.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜು.4 ರ ಬೆಳಿಗ್ಗೆ 10 ಗಂಟೆಗೆ ಧರಣಿ ಸತ್ಯಾಗ್ರಹ ಆರಂಭಿಸುತ್ತಿದ್ದು, ರೈತರ ಕಬ್ಬಿನ ಬಾಕಿ ಬಿಲ್ ನೀಡುವುದು ಹಾಗೂ 75 ಸಾವಿರ ಶೇರುದಾರರ ಹಣ ಮರಳಿ ನೀಡುವುದನ್ನು ಕಾರ್ಖಾನೆಯ ಅಧಿಕಾರಿಗಳು ಮರೆತಿದ್ದಾರೆ. ಇದರಿಂದ ಕಬ್ಬಿನ ಬಾಕಿ ಬಿಲ್ ಇರುವ ರೈತರು ಹಾಗೂ ಶೇರುದಾರರಿಗೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತರನ್ನು ಗಣನೆಗೆ ತೆಗೆದುಕೊಳ್ಳದೆ ಕಾರ್ಖಾನೆ ಮಾರಾಟ ಮಾಡಿರುವ ಕಮಿಟಿ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.75 ಸಾವಿರ ಶೇರುದಾರ ₹ 37 ಕೋಟಿ ಹಣ ವಾಪಸ್ ಮಾಡುವವರೆಗೂ ಹೋರಾಟ ಮುಂದುವರಿಯಲಿದೆ. ಈ ಪ್ರತಿಭಟನೆಯಲ್ಲಿ ರೈತರು ಹಾಗೂ ಶೇರುದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕೋರಿದರು.ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಂಚಾಲಕ ಮಾರುತಿ ಲಟ್ಟಿ, ರೈತ ಮುಖಂಡ ಬಾಸಾಸಾಬ ಕಡಬಿ ಇದ್ದರು.