ರೈತರು ಹೈನುಗಾರಿಕೆಯನ್ನು ಪ್ರೋತ್ಸಾಹಿಸಿ ಲಾಭದತ್ತ ಮುನ್ನಡೆಯಿರಿ

| Published : Oct 20 2025, 01:02 AM IST

ಸಾರಾಂಶ

ಚಳ್ಳಕೆರೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಹಾಲು ಉತ್ಪಾಕದರ ಸಹಕಾರ ಸಂಘದ ನೂತನ ಕಟ್ಟಡವನ್ನು ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿ, ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ಶಿವಮೊಗ್ಗ ಹಾಲು ಒಕ್ಕೂಟ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಆರ್ಥಿಕ ಶಕ್ತಿ ತುಂಬುವ ಜೊತೆಗೆ ಹೆಚ್ಚಿನ ಪ್ರಮಾಣದ ಹಾಲುಸಹ ಒಕ್ಕೂಟಕ್ಕೆ ತಲುಪಿಸುವ ನಿಟ್ಟಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಾ ಬಂದಿದೆ. ರೈತ ಸಮುದಾಯ ಕೃಷಿಯೊಂದಿಗೆ ಹೈನುಗಾರಿಕೆಗೂ ಹೆಚ್ಚು ಪ್ರೋತ್ಸಾಹ ನೀಡಬೇಕಿದೆ. ಕೃಷಿ, ಹೈನುಗಾರಿಕೆ ಎರಡೂ ರೈತರ ಬದುಕಿಗೆ ಭದ್ರಬುನಾದಿಯನ್ನು ಹಾಕಿ ಅವರ ಬದುಕನ್ನು ಹಸನುಗೊಳಿಸುತ್ತದೆ. ಹಾಲು ಉತ್ಪಾದನೆ ಹೆಚ್ಚಿದಷ್ಟು ರೈತರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಶಾಸಕ, ಸಣ್ಣ ಕೈಗಾರಿಕೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.

ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಹಾಲು ಉತ್ಪಾಕದರ ಸಹಕಾರ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಯಾವುದೇ ಸಂಘ ಅಭಿವೃದ್ಧಿಪಥದತ್ತ ಸಾಗಬೇಕಾದರೆ ಹೆಚ್ಚಿನ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಸಿದ್ದಾಪುರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಎಲ್ಲರೂ ಸಹಕಾರ ನೀಡಿ ತಾಲೂಕಿನ ಅತ್ಯುತ್ತಮ ಸಂಘವಾಗಿ ಕಾರ್ಯನಿರ್ವಹಿಸುವೆಂತೆ ಮಾಡಿ ಎಂದರು.

ಶಿವಮೊಗ್ಗ ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕ ಬಿ.ಸಿ.ಸಂಜೀವಮೂರ್ತಿ ಮಾತನಾಡಿ, ಹಾಲು ಉತ್ಪಾದಕರ ಸಹಕಾರ ಸಂಘದ ಬಿಎಂಸಿ ಕಟ್ಟಡವನ್ನು ಕ್ಷೇತ್ರದ ಅಭಿವೃದ್ಧಿ ಹರಿಕಾರರಾದ ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿ, ಹಾಲು ಉತ್ಪಾದಕರ ಸಹಕಾರ ಸಂಘ ಬೆಳವಣಿಗೆಗೆ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ವಿಶೇಷವಾಗಿ ತಾಲೂಕಿನ ಯಾವುದೇ ಭಾಗದಲ್ಲಿ ನಮ್ಮ ಸಂಘ ಕಾರ್ಯಕ್ರಮ ನಡೆದರೆ ಆಗಮಿಸಿ ನಮಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಹಾಲು ಉತ್ಪಾಕರ ಸಂಘದ ಬೆಳವಣಿಗೆಗೆಯಲ್ಲಿ ಶಾಸಕರ ಪಾತ್ರವೂ ಹೆಚ್ಚಿದೆ ಎಂದರು.

ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ, ಸಿದ್ದಾಪುರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ ಮಾತನಾಡಿ, ನಮ್ಮ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಪ್ರಾರಂಭ ಮಾಡಬೇಕೆಂಬ ಈ ಭಾಗದ ರೈತರ ಕನಸು ಇಂದು ನನಸಾಗಿದೆ. ಇದಕ್ಕೆ ಪೂರಕವಾಗಿ ಶಿವಮೊಗ್ಗ ಹಾಲು ಒಕ್ಕೂಟದ ಜಿಲ್ಲಾ ನಿದೇಶಕರು ಹೆಚ್ಚಿನ ಸಹಕಾರ ನೀಡಿದ್ದಾರೆ. ಸಹಕಾರ ಸಂಘ ಬೆಳವಣಿಗೆಗೆ ತಮ್ಮೆಲ್ಲರ ಪ್ರೋತ್ಸಾಹನಿರಂತರವಾಗಿರಲಿ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಹಾಲು ಉತ್ಪಾದಕ ಸಂಘದ ಅಧ್ಯಕ್ಷ ಎಚ್.ಎನ್.ವಿದ್ಯಾಧರ, ಬಿ.ಆರ್.ರವಿಕುಮಾರ್, ಜಿ.ಬಿ.ಶೇಖರಪ್ಪ, ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ, ಕಾರ್ಯದರ್ಶಿ ಚಿದಾನಂದ, ಗ್ರಾಪಂ ಅಧ್ಯಕ್ಷೆ ಮಂಗಳಮ್ಮ, ಸದಸ್ಯರಾದ ಪಾತಲಿಂಗಪ್ಪ, ಗದ್ದಿಗೆಪ್ರಭು, ಅಂಗಡಿರಮೇಶ್, ಮಾಜಿ ತಾಪಂ ಸದಸ್ಯ ಟಿ.ಗಿರಿಯಪ್ಪ, ತಿಪ್ಪೇಸ್ವಾಮಿ, ದ್ಯಾಮಣ್ಣ, ಶಿವಣ್ಣ, ಶೇಖರಪ್ಪ ಮುಂತಾದವರು ಉಪಸ್ಥಿತರಿದ್ದರು.