ಸಾರಾಂಶ
ಕನ್ನಡಪ್ರಭ ವಾರ್ತೆ, ದಾವಣಗೆರೆಜಗಳೂರು ತಾಲೂಕಿನಾದ್ಯಂತ ತೋಟಗಾರಿಕೆ ಬೆಳೆಗಳ ವಿಸ್ತೀರ್ಣ ಹೆಚ್ಚುತ್ತಿದ್ದು, ರೈತರು ಭೂಮಿಯಲ್ಲಿ ಅಂತರ್ಜಲ ಹೆಚ್ಚಿಸುವತ್ತ ಗಮನಹರಿಸಬೇಕು ಎಂದು ಐಸಿಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕಾ ತಜ್ಞ ಡಾ.ಎಂ.ಜಿ. ಬಸವನಗೌಡ ಅಭಿಪ್ರಾಯಪಟ್ಟರು. ಜಗಳೂರು ತಾಲೂಕು ಬಸಪ್ಪನಹಟ್ಟಿ ಗ್ರಾಮದಲ್ಲಿ ಇತ್ತೀಚೆಗೆ ಹಮ್ಮಿಕೊಂಡ ಈರುಳ್ಳಿ ಬೆಳೆ ಕ್ಷೇತ್ರೋತ್ಸವ ಮತ್ತು ತೋಟಗಾರಿಕೆ ಬೆಳೆಗಳ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಸ್ತುತ ಗ್ರಾಮದಲ್ಲಿ ಹಿಂಗಾರು ಮತ್ತು ಬೇಸಿಗೆಗೆ ಸೂಕ್ತವಾದ ಈರುಳ್ಳಿ ಬೆಳೆಗಳ ಕ್ಷೇತ್ರ ಪ್ರಯೋಗವನ್ನು ಹಮ್ಮಿಕೊಂಡಿದ್ದು, ಭೀಮರೆಡ್ ತಳಿ ಉತ್ತಮ ಫಲಿತಾಂಶವನ್ನು ನೀಡಿದೆ. ಅದೇರೀತಿ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಗ್ರಾಮದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ರೈತರ ಅಭಿವೃದ್ಧಿಗೆ ಸೂಕ್ತ ಕಾರ್ಯಕ್ರಮಗಳನ್ನು ಕೇಂದ್ರದ ವತಿಯಿಂದ ರೂಪಿಸಲಾಗಿದೆ. ಏಕಬೆಳೆ ಪದ್ಧತಿಯನ್ನು ಕೈ ಬಿಟ್ಟು ಬಹು ಬೆಳೆ ಮತ್ತು ಬಹುಮಹಡಿ ಪದ್ಧತಿ ತೋಟಗಾರಿಕೆಯನ್ನು ಅನುಸರಿಸಿದರೆ ಪ್ರತಿ ವರ್ಷ ನಿಶ್ಚಿತ ಆದಾಯ ಪಡೆಯಬಹುದೆಂದು ತಿಳಿಸಿದರು.ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಪ್ರಭು ಶಂಕರ್ ಮಾತನಾಡಿ, ಇಲಾಖೆಯ ವತಿಯಿಂದ ಉಚಿತವಾಗಿ ತರಕಾರಿ ಬೀಜಗಳನ್ನು ನೀಡುತ್ತಿದ್ದು ಹಾಗೂ ಹನಿ ನೀರಾವರಿಗೆ ಶೇಕಡ 90ರಷ್ಟು ಸಹಾಯಧನ ನೀಡುತ್ತಿದ್ದು ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು. ಬೇಸಾಯ ತಜ್ಞ ಬಿ.ಓ.ಮಲ್ಲಿಕಾರ್ಜುನ, ಕೃಷಿ ಇಲಾಖೆಯ ಕೃಷಿ ಅಧಿಕಾರಿ ಜೀವಿತ, ಬಿದರಿಕೆರೆ ತರಳಬಾಳು ರೈತ ಉತ್ಪಾದಕಕಂಪನಿಯ ಅಧ್ಯಕ್ಷ ಎಂ.ಎಚ್.ಮಂಜುನಾಥ್, ಉಪಾಧ್ಯಕ್ಷ ಸೋಮನಗೌಡ, ನಿರ್ದೇಶಕ ಕೃಷ್ಣಮೂರ್ತಿ, ರೈತರಾದ ಶಶಿಧರ, ಮೇಘರಾಜ, ಇತರೆ ರೈತರು ಇದ್ದರು. ........ಕ್ಯಾಪ್ಷನ21ಕೆಡಿವಿಜಿ35
ಜಗಳೂರು ತಾಲೂಕಿನ ಬಸಪ್ಪನಹಟ್ಟಿ ಗ್ರಾಮದಲ್ಲಿ ಈರುಳ್ಳಿ ಬೆಳೆ ಕ್ಷೇತ್ರೋತ್ಸವ, ತೋಟಗಾರಿಕೆ ಬೆಳೆಗಳ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ ನಡೆಯಿತು.