ರೈತರಿಗೆ ಬೀಜ, ರಸಗೊಬ್ಬರದ ಕೊರತೆ ಆಗದಿರಲಿ: ಡಿಸಿ ಗೋವಿಂದರೆಡ್ಡಿ

| Published : May 18 2024, 12:42 AM IST

ರೈತರಿಗೆ ಬೀಜ, ರಸಗೊಬ್ಬರದ ಕೊರತೆ ಆಗದಿರಲಿ: ಡಿಸಿ ಗೋವಿಂದರೆಡ್ಡಿ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ 2024-25ನೇ ಸಾಲಿನ ಪೂರ್ವ ಮುಂಗಾರು ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಬೀದರ್

ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೀಜ ಮತ್ತು ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ 2024-25ನೇ ಸಾಲಿನ ಪೂರ್ವ ಮುಂಗಾರು ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ ವರ್ಷ ಸೋಯಾಬಿನ್‌ ಬೀಜದ ಕೊರತೆ ಇದೆ ಎಂದು ರೈತರು ದೂರು ನೀಡಿದ್ದರು. ಆದರೆ ಬೀಜದ ದಾಸ್ತಾನು ಮಾಡಲು ಸ್ವಲ್ಪ ವಿಳಂಬವಾಯಿತು.

ಪ್ರಸಕ್ತ ಸಾಲಿನಲ್ಲಿ ಜೂನ 1ರಿಂದ ಮಳೆ ಪ್ರಾರಂಭವಾಗಿ ಜುಲೈ ತಿಂಗಳಲ್ಲಿ ಹೆಚ್ಚಿಗೆ ಮಳೆ ಬೀಳುವ ವರದಿ ಇದೆ. ಈ ಹಿಂದೆ ಬೀಜ ವಿತರಣೆ ಕೇಂದ್ರಗಳು ಮೊದಲಿದ್ದ ಸ್ಥಳದಲ್ಲಿಯೇ ಅವುಗಳನ್ನು ಮುಂದುವರೆಸಿ ರಸಗೊಬ್ಬರ ದಾಸ್ತಾನು ಮಾಡಿಕೊಂಡು ರೈತರಿಗೆ ಪ್ರಾಥಮಿಕ ಸ್ವಸಹಾಯ ಕೇಂದ್ರಗಳ ಮೂಲಕ ಸಮರ್ಪಕವಾಗಿ ವಿತರಿಸಬೇಕೆಂದು ಹೇಳಿದರು.

ನಕಲಿ ರಸಗೊಬ್ಬರಗಳ ಬಗ್ಗೆ ಅಧಿಕಾರಿಗಳು ಹೆಚ್ಚಿನ ಗಮನ ಹರಿಸಬೇಕು. ಮೇ ತಿಂಗಳ ಕೊನೆಯಲ್ಲಿ ಬೀಜ ವಿತರಣಾ ಪ್ರಾರಂಭಿಸಬೇಕೆಂದರು.

ಈ ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಿಯಾವುಲ್ಲಾ, ಜಿಲ್ಲೆಯ ಎಲ್ಲಾ ಜಿಲ್ಲಾ ಸಹಕಾರಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರಾದ ಮಂಜುಳಾ, ಕೃಷಿ ಇಲಾಖೆಯ ಉಪನಿರ್ದೇಶಕರಾದ ಸೂರ್ಯಕಾಂತ ಬಿರಾದಾರ, ಎಲ್ಲಾ ತಾಲೂಕಿನ ಕೃಷಿ ಇಲಾಖೆ ಸಹಾಯಕ ನಿರ್ದೇಶಕರುಗಳು, ಕೃಷಿ ವಿಜ್ಞಾನ ಕೇಂದ್ರದ ಅಧಿಕಾರಿಗಳು ಸೇರಿ ರಸಗೊಬ್ಬರ ಕಂಪನಿಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.