ರೈತರು ಸಾವಯವ ಕೃಷಿಗೆ ಆದ್ಯತೆ ನೀಡಲಿ

| Published : Jan 17 2025, 12:48 AM IST

ಸಾರಾಂಶ

ಮುಂದಿನ ಪೀಳಿಗೆಗೆ ಗುಣಮಟ್ಟದ ಆಹಾರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿರುತ್ತದೆ. ಹಾಗಾಗಿ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಬೆಳೆಯಲು ರೈತರು ಸಾವಯವ ಕೃಷಿ ಪದ್ದತಿಯ ಕಡೆಗೆ ಹೆಚ್ಚಿನ ಆದ್ಯತೆ ನೀಡಬೇಕು. ರೈತರು ಬೆಳೆಯುವ ಕೃಷಿ ಉತ್ಪನ್ನಗಳಿಗೆ ಕೊಟ್ಟಿಗೆ ಗೊಬ್ಬರ, ಹಸಿರು ಎಲೆ ಗೊಬ್ಬರ, ಎರೆಹುಳು ಗೊಬ್ಬರ ಸೇರಿದಂತೆ ಸಾವಯವ ಗೊಬ್ಬರ ಬಳಸಿ ಆಹಾರ ಉತ್ಪನ್ನಗಳನ್ನು ಬೆಳೆಯಬೇಕು.

ಕನ್ನಡಪ್ರಭ ವಾರ್ತೆ ಕೋಲಾರಜಿಲ್ಲೆಯನ್ನು ರೈತರ ಜಿಲ್ಲೆ ಎಂದು ಕರೆಯಲಾಗುತ್ತದೆ. ಇಂತಹ ಕಾರ್ಯಕ್ರಮಗಳಿಗೆ ಜಿಲ್ಲೆಯ ಎಲ್ಲಾ ರೈತರು ಭಾಗವಹಿಸಿ ಇನ್ನು ಅನೇಕ ವಿವಿಧ ರೀತಿಯ ಕೃಷಿ ಬೆಳೆಗಳನ್ನು ಬೆಳೆದು ದೇಶಕ್ಕೆ ಮಾದರಿಯಾಗಬೇಕು ಎಂದು ಎಂಎಲ್ಸಿ ಇಂಚರ ಗೋವಿಂದರಾಜು ಹೇಳಿದರು.ನಗರದ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯುವ ಮೇಳ ಹಾಗೂ ಫಲಪು? ಪ್ರದರ್ಶನ ೨೦೨೫ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಸಾವಯವ ಕೃಷಿಗೆ ಒತ್ತು ನೀಡಿ

ಮುಂದಿನ ಪೀಳಿಗೆಗೆ ಗುಣಮಟ್ಟದ ಆಹಾರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿರುತ್ತದೆ. ಹಾಗಾಗಿ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಬೆಳೆಯಲು ರೈತರು ಸಾವಯವ ಕೃಷಿ ಪದ್ದತಿಯ ಕಡೆಗೆ ಹೆಚ್ಚಿನ ಆದ್ಯತೆ ನೀಡಬೇಕು. ರೈತರು ಬೆಳೆಯುವ ಕೃಷಿ ಉತ್ಪನ್ನಗಳಿಗೆ ಕೊಟ್ಟಿಗೆ ಗೊಬ್ಬರ, ಹಸಿರು ಎಲೆ ಗೊಬ್ಬರ, ಎರೆಹುಳು ಗೊಬ್ಬರ ಸೇರಿದಂತೆ ಸಾವಯವ ಗೊಬ್ಬರ ಬಳಸಿ ಆಹಾರ ಉತ್ಪನ್ನಗಳನ್ನು ಬೆಳೆಯಬೇಕು. ಇದರಿಂದ ನಮಗೆ, ಭವಿಷ್ಯದ ಮಕ್ಕಳಿಗೆ ಒಳ್ಳೆಯ ಪೌಷ್ಟಿಕಾಂಶ ಆಹಾರ ಸಿಕ್ಕಂತಾಗುತ್ತದೆ ಎಂದರು.

ಜಿಲ್ಲಾ ಮಟ್ಟದ ರೈತರಿಗೆ ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಮೇಳದಲ್ಲಿ ರೈತರಿಗೆ ಬೇಸಾಯಕ್ಕೆ ಸಂಬಂಧಿಸಿದ ಮಾಹಿತಿ ಕೃಷಿ ಇಲಾಖೆ ವತಿಯಿಂದ ನೀಡಲಾಯಿತು. ಮರಳಿನಲ್ಲಿ ಡಾ.ಮನಮೋಹನ್‌ಸಿಂಗ್‌ರ ಚಿತ್ರ ಬಿಡಿಸಲಾಗಿತ್ತು.

ನಗರಸಭೆ ಅಧ್ಯಕ್ಷೆ ಕೆ.ಲಕ್ಷ್ಮೀದೇವಮ್ಮ ರಮೇಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನು?ನ ಸಮಿತಿ ಅಧ್ಯಕ್ಷ ವೈ.ಶಿವಕುಮಾರ್, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ವಡಗೂರು ಡಿ.ಎಲ್.ನಾಗರಾಜ್, ಜಿಪಂ ಸಿಇಓ ಡಾ.ಪ್ರವೀಣ್ ಪಿ.ಬಾಗೇವಾಡಿ, ಎಡಿಸಿ ಮಂಗಳ, ಜಂಟಿ ಕೃಷಿ ನಿರ್ದೇಶಕಿ ಸುಮಾ ಎಂ.ಆರ್., ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಎಸ್.ಆರ್ ಕುಮಾರಸ್ವಾಮಿ, ಕೃಷಿ ಉಪನಿರ್ದೇಶಕಿ ಭವ್ಯರಾಣಿ ಇದ್ದರು.